ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಗೂಂಡಾಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ ಪೊಲೀಸರಿಗೆ‌ ಆದೇಶ ನೀಡಬೇಕು ಸಿದ್ದರಾಮಯ್ಯ ಒತ್ತಾಯ

ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪುತ್ಥಳಿ ಬೀಳಿಸಿ ಕಿಡಿಗೇಡಿಗಳು ವಿಕೃತಿ ಮೆರೆದಿರುವ ಕುರಿತಂತೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಬೆಳಗಾವಿಯಲ್ಲಿರುವ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ ಎಂದು ಹೇಳಿದ್ದಾರೆ.ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಬೆಳಗಾವಿಯಲ್ಲಿರುವ ಕರ್ನಾಟಕದ ಅಭಿಮಾನ ಮೂರ್ತಿ ವೀರ ಸಂಗೊಳ್ಳಿ ರಾಯಣ್ಣನ ಪ್ರತಿಮೆಯನ್ನು ಕೆಡವಿ, ವಿರೂಪಗೊಳಿಸಿದ ಎಂಇಎಸ್ ಪುಂಡರ ಕಿಡಿಗೇಡಿ ಕೃತ್ಯ ಖಂಡನೀಯ. ಸಿಎಂ ಬಸವರಾಜಬೊಮ್ಮಾಯಿ ಅವರು, ಈ ಗೂಂಡಾಗಳನ್ನು ತಕ್ಷಣ ಬಂಧಿಸಿ ಜೈಲಿಗಟ್ಟುವಂತೆ ಪೊಲೀಸರಿಗೆ‌ ಆದೇಶ ನೀಡಬೇಕು ಎಂದು ಒತ್ತಾಯಿಸಿದ್ದಾರೆ.ಸಿಎಂ ಬೊಮ್ಮಾಯಿ ಅವರೇ ಇದಕ್ಕೆಲ್ಲ ‘ಕ್ರಿಯೆಗೆ ಪ್ರತಿಕ್ರಿಯೆ’ ಎಂಬ ಮೊಂಡುವಾದ ಮಂಡಿಸಬೇಡಿ. ಕಾನೂನಿನ ಕ್ರಮ ಇಂತಹ ಪುಂಡರಿಗೆ ಕಠಿಣ ಸಂದೇಶವಾಗಲಿ. ಇದೇ ವೇಳೆ ಕನ್ನಡ ಬಂಧುಗಳು ಆವೇಶಕ್ಕೆ ಒಳಗಾಗದೆ,‌‌ ಸಂಯಮದಿಂದ ಶಾಂತಿ-ಸೌಹಾರ್ದತೆ ಕಾಪಾಡಿಕೊಂಡು‌ ಬರಬೇಕೆಂದು‌ ಮನವಿ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಆಮ್ ಆದ್ಮಿ ಪಕ್ಷ ರಾಜ್ಯದಲ್ಲಿನ ಸಂಪತ್ತನ್ನು ಲೂಟಿ ಮಾಡುವ ಸಂಚು ಮಾಡಿದೆ: ಸಿಎಂ ಚರಣ್ ಜಿತ್ ಸಿಂಗ್ ಚನ್ನಿ

Sat Dec 18 , 2021
ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ, ಈ ಪಕ್ಷ ಆಧುನಿಕ ಈಸ್ಟ್ ಇಂಡಿಯಾ ಕಂಪನಿ ಎಂದು ಆರೋಪಿಸಿದ್ದಾರೆ.ಆಮ್ ಆದ್ಮಿ ಪಕ್ಷ ರಾಜ್ಯದಲ್ಲಿನ ಸಂಪತ್ತನ್ನು ಲೂಟಿ ಮಾಡುವ ಸಂಚು ಮಾಡಿದೆ.ಅಷ್ಟೇ ಅಲ್ಲ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಗೆ ಹಸುವಿನ ಹಾಲು ಕರೆಯುವುದು ಹೇಗೆಂಬುದು ಕೂಡಾ ತಿಳಿದಿಲ್ಲ ಎಂದು ಚನ್ನಿ ಟೀಕಿಸಿದ್ದಾರೆ.ಪಂಜಾಬ್ ನಲ್ಲಿ […]

Advertisement

Wordpress Social Share Plugin powered by Ultimatelysocial