ಬೆಳಗಾವಿಯಲ್ಲಿ ಸೋತ ಬಿಜೆಪಿಗೆ ರಮೇಶ್ ಜಾರಕಿಹೊಳಿ ಮತ್ತೊಂದು ಶಾಕ್.?

ಭದ್ರಕೋಟೆ ಬೆಳಗಾವಿಯಲ್ಲಿ ಸೋತ ಬಿಜೆಪಿಗೆ ರಮೇಶ್ ಜಾರಕಿಹೊಳಿ ಮತ್ತೊಂದು ಶಾಕ್.?

ಪಕ್ಷದ 13 ಶಾಸಕರು, ಮೂವರು ಸಂಸದರಿದ್ದರೂ ಭದ್ರಕೋಟೆ ಬೆಳಗಾವಿಯಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿಗೆ ಈ ಸೋಲು ಅನಿರೀಕ್ಷಿತವಾಗಿದೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಮೂರನೇ ಸ್ಥಾನಕ್ಕೆ ಕುಸಿದಿದ್ದಾರೆ. ಸಹೋದರ ಲಖನ್ ಅವರಿಗೆ ಎರಡನೇ ಅಭ್ಯರ್ಥಿಯಾಗಿ ಟಿಕೆಟ್ ನೀಡುವಂತೆ ರಮೇಶ್ ಜಾರಕಿಹೊಳಿ ಮತ್ತು ಬಾಲಚಂದ್ರ ಜಾರಕಿಹೊಳಿ ಪಕ್ಷದ ನಾಯಕರಿಗೆ ಮನವಿ ಮಾಡಿದ್ದರೂ, ವರಿಷ್ಠರು ಒಬ್ಬರಿಗೆ ಮಾತ್ರ ಟಿಕೆಟ್ ನೀಡಿದ್ದರು.

ಪಕ್ಷೇತರರಾಗಿ ಕಣಕ್ಕಿಳಿದ ಲಖನ್ ಜಯಗಳಿಸಿದ್ದು, ಬಿಜೆಪಿ ನಾಯಕರಿಗೆ ಬೆಳಗಾವಿ ಸೋಲು ಅರಗಿಸಿಕೊಳ್ಳಲಾಗುತ್ತಿಲ್ಲ. ಭದ್ರ ಕೋಟೆಯಲ್ಲಿ ಸೋಲು ಕಂಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ತಮಗೆ ಸಚಿವ ಸ್ಥಾನ ನೀಡದಿರುವುದು, ಲಖನ್ ಗೆ ಬಿಜೆಪಿ ಟಿಕೆಟ್ ನೀಡದಿರುವುದರಿಂದ ರಮೇಶ್ ಮುನಿಸಿಕೊಂಡಿದ್ದಾರೆನ್ನಲಾಗಿದೆ. ಆದರೆ, ಈ ಸೋಲಿಗೆ ತಾವು ಕಾರಣರಲ್ಲವೆಂದು ರಮೇಶ ಜಾರಕಿಹೊಳಿ ಈಗಾಗಲೇ ಸ್ಪಷ್ಟಪಡಿಸಿದ್ದು, ಬಿಜೆಪಿ ಸೋಲಿನ ಹೊಣೆ ನನಗೆ ಕಟ್ಟುವ ಪ್ರಯತ್ನ ನಡೆದಿದೆ. ನಾನು ಪಕ್ಷಕ್ಕಾಗಿಯೇ ಕೆಲಸ ಮಾಡಿದ್ದೇನೆ. ಮತದಾನದ ಕೊನೆ ನಾಲ್ಕು ದಿನ ಬದಲಾವಣೆ ಆಗಿದೆ. ನಾನು ಬಿಜೆಪಿ ಶಾಸಕನಾಗಿ ಪಕ್ಷದ ಅಭ್ಯರ್ಥಿ ಪರ ಕೆಲಸ ಮಾಡಿದ್ದೇನೆ. ಎಲ್ಲವನ್ನೂ ಮುಂದಿನ ದಿನಗಳಲ್ಲಿ ಹೇಳುತ್ತೇನೆ ಎಂದು ಬಾಂಬ್ ಸಿಡಿಸಿದ್ದಾರೆ.

Please follow and like us:

Leave a Reply

Your email address will not be published. Required fields are marked *

Next Post

ಸಿಎಂ ಇಬ್ರಾಹಿಂ- ಸಿದ್ದರಾಮಯ್ಯ ಮಾತಿನ ಚಕಮಕಿ

Thu Dec 16 , 2021
ಬೆಳಗಾವಿ: ಬುಧವಾರ ಸಂಜೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಸಿಎಂ ಇಬ್ರಾಹಿಂ ನಡುವಿನ ಮಾತಿನ ಚಕಮಕಿ ವಿಡಿಯೋ ಕ್ಲಿಪ್’ವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ವಿಡಿಯೋವನ್ನು ರಾಜ್ಯ ಬಿಜೆಪಿ ಘಟಕ ಕೂಡ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದೆ. ವಿಡಿಯೋದಲ್ಲಿ ಇಬ್ಬರು ನಾಯಕರು ಅವಾಚ್ಯ ಶಬ್ಧಗಳಿಂದ ಒಬ್ಬರನ್ನೊಬ್ಬರು ನಿಂದಿಸಿರುವುದು ಕಂಡು […]

Advertisement

Wordpress Social Share Plugin powered by Ultimatelysocial