ಬೆಂಗಳೂರು: ಮುಖ್ಯಮಂತ್ರಿ ಪರಿಹಾರ ನಿಧಿಗಾಗಿ ರಾಜ್ಯದ ಅನೇಕರು ಜನಪ್ರತಿನಿಧಿಗಳ ಮೂಲಕ ಅರ್ಜಿಯನ್ನು ಸಲ್ಲಿಸಲಾಗುತ್ತಿದೆ.

ಈ ಕುರಿತಂತೆ ರಾಜ್ಯದ ಎಲ್ಲಾ ಸಚಿವ ಸಂಪುಟದ ಸಚಿವರು, ಲೋಕಸಭಾ, ರಾಜ್ಯ ಸಭಾ ಸದಸ್ಯರಿಗೆ, ವಿಧಾನಸಭಾ, ಪರಿಷತ್ ಸದಸ್ಯರಿಗೆ ಪತ್ರ ಬರೆದಿರುವಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ( CM Basavaraj Bommai ), ಇತ್ತೀಚಿನ ದಿನಗಳಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಪರಿಹಾರ ಕೋರಿ, ಸಚಿವರು, ವಿಧಾನಸಭಾ, ಪರಿಷತ್ ಸದಸ್ಯರು, ಲೋಕಸಬಾ, ರಾಜ್ಯಸಭಾ ಸದಸ್ಯರ ಕಚೇರಿಗಳಿಂದ ಅರ್ಜಿಯನ್ನು ಸಲ್ಲಿಸಲಾಗುತ್ತಿದೆ.ಬಹುತೇಕ ಅರ್ಜಿಗಳು ಸಮರ್ಪಕವಲ್ಲದ ದಾಖಲೆಗಳೊಂದಿಗೆ ಸಲ್ಲಿಕೆಯಾಗುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ. ಇದರಿಂದ ಶೀಘ್ರಗತಿಯಲ್ಲಿ ಕಡತ ವಿಲೇವಾರಿ ಮಾಡಲು ತೊಂದರೆಯಾಗುತ್ತಿದ್ದು, ಬಡವರು, ನಿರ್ಗತಿಕರು ಹಾಗೂ ನೊಂದ ಜನರಿಗೆ ಸಕಾಲದಲ್ಲಿ ಪರಿಹಾರ ನೀಡಲು ವಿಳಂಬವಾಗುತ್ತಿರುವುದರಿಂದ, ಮುಖ್ಯಮಂತ್ರಿಗಳ ಪರಿಹಾರ ನಿಧಿಯ ಮುಖ್ಯ ಉದ್ದೇಶ ಈಡೇರಿದಂತೆ ಆಗುತ್ತಿಲ್ಲ.ಈ ಹಿನ್ನಲೆಯಲ್ಲಿ, ತಾವು ಇನ್ಮುಂದೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರ್ಜಿ ಸಲ್ಲಿಸುವಾಗ, ಕಡ್ಡಾಯವಾಗಿ ಈ ಕೆಳಕಂಡ ಅಗತ್ಯ ದಾಖಲಾತಿಗಳನ್ನು ಸಲ್ಲಿಸುವಂತೆ ಸೂಚಿಸಿದ್ದಾರೆ.

 

ಮುಖ್ಯಮಂತ್ರಿಗಳ ಪರಿಹಾರ ನಿಧಿ ಅರ್ಜಿ ಜೊತೆಗೆ ಸಲ್ಲಿಸಬೇಕಾದ ದಾಖಲೆಗಳು

  1. ಅರ್ಜಿದಾರರ ಪಾಸ್ ಪೋರ್ಟ್ ಅಳತೆಯ ಭಾವಚಿತ್ರ
  2. ಅರ್ಜಿದಾರರ ಬಿಪಿಎಲ್, ಪಡಿತರ ಚೀಟಿ
  3. ಆಧಾರ್ ಗುರುತಿನ ಚೀಟಿ. ಖ್ಯಾಂಕ್ ಖಾತೆಯೊಂದಿಗೆ ಆಧಾರ್ ಲಿಂಕ್ ಆಗಿರಬೇಕು.
  4. ಅರ್ಜಿದಾರರು ಚಿಕಿತ್ಸೆ ಪಡೆದಿದ್ದಲ್ಲಿ, ಚಿಕಿತ್ಸೆ ಪಡೆದಿರುವ ಆಸ್ಪತ್ರೆಯ ಮೋಹರು ಮತ್ತು ಸಹಿಯೊಂದಿರುವ ಆಸ್ಪತ್ರೆಯ ಅಂತಿಮ ಮೂಲ ಬಿಲ್ಲು
  5. ಆಸ್ಪತ್ರೆಯ ಬಿಡುಗಡೆ ಸಾರಾಂಶ ಪತ್ರ
  6. ಚಿಕಿತ್ಸೆ ಪಡೆಯಬೇಕಾದಲ್ಲಿ ಆಸ್ಪತ್ರೆಯ ಚಿಕಿತ್ಸಾ ವೆಚ್ಚದ ಅಂದಾಜು ಪಟ್ಟಿ
  7. ಅರ್ಜಿದಾರರ ಬ್ಯಾಂಕ್ ಪಾಸ್ ಬುಕ್ ಮೊದಲ ಪುಟದ ಜೆರಾಕ್ಸ್ ಪ್ರತಿ
  8. ಅರ್ಜಿದಾರರ ಅಥವಾ ಕುಟುಂಬ ವರ್ಗದ ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಶ್ವಗಂಧವನ್ನು ಆಯುರ್ವೇದ ಚಿಕಿತ್ಸೆಯಲ್ಲಿ ಹೆಚ್ಚಾಗಿ ಬಳಸಲಾಗುವುದು.

Tue Feb 8 , 2022
ಅಶ್ವಗಂಧವನ್ನು ಆಯುರ್ವೇದ ಚಿಕಿತ್ಸೆಯಲ್ಲಿ ಹೆಚ್ಚಾಗಿ ಬಳಸಲಾಗುವುದು. ಮಹಿಳೆಯರಿಗೆ ಇದೊಂದು ಮ್ಯಾಜಿಕಲ್ ಹರ್ಬ್‌ ಆಗಿದೆ, ಏಕೆಂದರೆ ಇದನ್ನು ಸೇವಿಸುವುದರಿಂದ ಸ್ತ್ರೀಯರಿಗೆ ಹಲವು ರೀತಿಯ ಪ್ರಯೋಜನಗಳಿವೆ.ಎಲ್ಲಾ ವಯಸ್ಸಿನ ಮಹಿಳೆಯರಿಗೂ ಈ ಅಶ್ವಗಂಧ ಪ್ರಯೋಜನಕಾರಿಯಾಗಿದೆ.ಇದನ್ನು ದಿನನಿತ್ಯ ಸೇವಿಸುತ್ತಿದ್ದರೆ ತುಂಬಾನೇ ಪ್ರಯೋಜನ ಪಡೆಯಬಹುದು. ಇದರ ಸೇವನೆ ದೈಹಿಕ ಆರೋಗ್ಯಕ್ಕೆ ಮಾತ್ರವಲ್ಲ ಮಾನಸಿಕ ಆರೋಗ್ಯಕ್ಕೂ ಒಳ್ಳೆಯದು.ಅಶ್ವಗಂಧ ಪ್ರತಿದಿನ ಸೇವಿಸಿದರೆ ಆಕರ್ಷಕ ಮೈ ಮಾಟ ಹೊಂದಿರುವುದು ಮಾತ್ರವಲ್ಲ ಇನ್ನು ಹಲವು ಪ್ರಯೋಜನಗಳಿಗೆ, ಅಶ್ವಗಂಧದ ಸೇವನೆ ಹೇಗೆ ಸಹಕಾರಿಯಾಗಿದೆ ಎಂದು […]

Advertisement

Wordpress Social Share Plugin powered by Ultimatelysocial