ರಾಜ್ಯ ಸರ್ಕಾರದಿಂದ 75 ಸರ್ಕಾರಿ ಶಾಲೆಗಳನ್ನು ‘ನೇತಾಜಿ ಅಮೃತ ಶಾಲೆ’ಗಳೆಂದು ಘೋಷಣೆ;

ಬೆಂಗಳೂರು: ರಾಜ್ಯದಲ್ಲಿ ಪ್ರತಿ ಜಿಲ್ಲೆಯ 2 ಶಾಲೆಗಳಂತೆ 75 ಶಾಲೆಗಳನ್ನು ನೇತಾಜಿ ಅಮೃತ ಶಾಲೆಗಳೆಂದು ( Netaji Ambrut School ) ಸರ್ಕಾರ ಘೋಷಿಸಿದೆ. ಈ ಶಾಲೆಗಳಲ್ಲಿ ಎನ್ ಸಿಸಿ ಘಟಕಗಳನ್ನು ( NCC Training Unit ) ಸ್ಥಾಪಿಸಲಾಗುತ್ತದೆ ಎಂಬುದಾಗಿ ತಿಳಿಸಿದೆ.

ಈ ಬಗ್ಗೆ ರಾಜ್ಯದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಸರ್ಕಾರದ ಅಪರ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದಲ್ಲಿ ಪ್ರತಿ ಜಿಲ್ಲೆಗೆ ಕನಿಷ್ಟ 2ರಂತೆ ಒಟ್ಟು 75 ಸರ್ಕಾರಿ ಶಾಲೆಗಳನ್ನು ಆಯ್ಕೆ ಮಾಡಿ, ಆ ಶಾಲೆಗಳಲ್ಲಿ ಎನ್ ಸಿಸಿ ಘಟಕಗಳನ್ನು ಸ್ಥಾಪಿಸಲು ಮತ್ತು ಈ ಶಾಲೆಗಳನ್ನು ನೇತಾಜಿ ಅಮೃತ ಶಾಲೆಗಳೆಂದು ಘೋಷಣೆ ಮಾಡಿ, ಆದೇಶಿಸಿದೆ.

ನೇತಾಜಿ ಅಮೃತ ಶಾಲೆಗಳೆಂದು ಘೋಷಿಸಲ್ಪಟ್ಟ ಪ್ರತಿ ಶಾಲೆಯಿಂದ 100 ವಿದ್ಯಾರ್ಥಿಗಳಂತೆ ಒಟ್ಟು 7500 ವಿದ್ಯಾರ್ಥಿಗಳಿಗೆ ಎನ್ ಸಿ ಸಿ ತರಬೇತಿಯನ್ನು ನೀಡಲು ಅನುಕೂಲವಾಗುವಂತೆ ಅದಕ್ಕೆ ತಗಲುವ ವೆಚ್ಚ ಒಬ್ಬ ವಿದ್ಯಾರ್ಥಿಗೆ ರೂ.12,000ದಂತೆ ಅನುದಾನ ಮಂಜೂರು ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

BENGALURU:ಬೈಕ್ ಸವಾರರೇ ಎಚ್ಚರ.! "ಹಾಫ್ ಹೆಲ್ಮೆಟ್ ಧರಿಸಿದ್ರೆ ಜೀವಕ್ಕೆ ಕುತ್ತು" :

Tue Jan 25 , 2022
ಬೆಂಗಳೂರು : ಯಾರ ಆಯಸ್ಸು ಎಲ್ಲಿವರೆಗೆ ಅಂತ ಯಾರಿಗೂ ಗೊತ್ತಿರಲ್ಲ. ಆದರೆ ಪ್ರತಿಯೊಬ್ಬರಿಗೂ ತಮ್ಮ ಜೀವದ ಬಗ್ಗೆ ಕಾಳಜಿ ಮುಖ್ಯ. ಬೈಕ್ (Bike) ಅಪಘಾತದಲ್ಲಿ ಅದೆಷ್ಟೊ ಜನರ ಉಸಿರು ನಿಂತಿದೆ. ಹೀಗಾಗಿ ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ (Helmet) ಧರಿಸಬೇಕು ಅಂತ ಕಾನೂನಿದೆ. ಆದರೆ ಈ ನಿಯಮದ ಕಾಳಜಿ ಕೆಲ ಜನರಿಗೆ ಇನ್ನೂ ಅರ್ಥವೇ ಆಗಿಲ್ಲ. ಹೀಗಾಗಿ ಬೇಕಾಬಿಟ್ಟಿ ಹೆಲ್ಮೆಟ್ ಧರಿಸದೇ ಓಡಾಡುತ್ತಾರೆ. ಇನ್ನು ಕೆಲವರು ದಂಡ ಕಟ್ಟುವುದನ್ನು ತಪ್ಪಿಸಲು ಹೆಲ್ಮೆಟ್ […]

Advertisement

Wordpress Social Share Plugin powered by Ultimatelysocial