ವಿದೇಶದಿಂದ ಬೆಂಗಳೂರಿಗೆ ಬಂದ 7 ಪ್ರಯಾಣಿಕರಿಗೆ ಕೋವಿಡ್ ದೃಢ

ಬೆಂಗಳೂರು: ವಿದೇಶಗಳಿಂದ ನಗರಕ್ಕೆ ಆಗಮಿಸಿದ ಏಳು ಮಂದಿ ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಂದು ಆಗಮಿಸಿದ 7 ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ ಮೂಲಗಳು ತಿಳಿಸಿವೆ.ಸೋಂಕಿತರನ್ನು ಕೋವಿಡ್ ಮಾರ್ಗಸೂಚಿ ಪ್ರಕಾರ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮೂಲಗಳು ಹೇಳಿವೆ.ಲಂಡನ್, ಫ್ರಾನ್ಸ್ ಮೂಲದ ತಲಾ ಇಬ್ಬರು, ಯುಎಸ್, ದಕ್ಷಿಣ ಆಫ್ರಿಕಾ, ಹಾಗೂ ಸ್ವೀಡನ್ ಮೂಲದ ತಲಾ ಒಬ್ಬರು ಪ್ರಯಾಣಿಕರಲ್ಲಿ ಕೋವಿಡ್ ಸೋಂಕು ಪತ್ತೆಯಾಗಿದೆ.ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ತಗ್ಗಿದೆ. ಆದರೆ, ವಿದೇಶದಿಂದ ಬರುವ ಪ್ರಯಾಣಿಕರ ಪೈಕಿ ಕೆಲವರಲ್ಲಿ ನಿತ್ಯವೂ ಸೋಂಕು ಪತ್ತೆಯಾಗುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

KOLLYWOOD:ರಜಿನಿಕಾಂತ್​ ಪುತ್ರಿ ಐಶ್ವರ್ಯಾ ಆಸ್ಪತ್ರೆಗೆ ದಾಖಲು;

Wed Feb 2 , 2022
 ಕಾಲಿವುಡ್​ ಸೂಪರ್​ ಸ್ಟಾರ್​ ರಜನಿಕಾಂತ್​ ಪುತ್ರಿ ಐಶ್ವರ್ಯಾ ಅವರಿಗೆ ಕೊರೊನಾ​ ಸೋಂಕು ತಗುಲಿರುವುದು ಧೃಡಪಟ್ಟಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಕುರಿತು ಇನ್​ಸ್ಟಾಗ್ರಾಮ್​ ಪೋಸ್ಟ್ ಹಾಕಿರುವ ಐಶ್ವರ್ಯಾ, ‘ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಿದ ನಂತರವೂ ನನಗೆ ಕೋವಿಡ್​ ಸೋಂಕು ದೃಢಪಟ್ಟಿದ್ದು, ನಾನು ಆಸ್ಪತ್ರೆಗೆ ದಾಖಲಾಗಿದ್ದೇನೆ. ದಯವಿಟ್ಟು ಎಲ್ಲರೂ ಲಸಿಕೆ ಹಾಕಿಸಿಕೊಳ್ಳಿ, ಮಾಸ್ಕ್​ ಧರಿಸಿ’ ಎಂದು ತಿಳಿಸಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like […]

Advertisement

Wordpress Social Share Plugin powered by Ultimatelysocial