BREAKING NEWS : ಸಾರಿಗೆ ನೌಕರರಿಗೆ ಬಿಗ್ ಶಾಕ್ : ಮುಂದಿನ 6 ತಿಂಗಳು ಮುಷ್ಕರ ನಡೆಸದಂತೆ ರಾಜ್ಯ ಸರ್ಕಾರ ಆದೇಶ!

ಬೆಂಗಳೂರು : ಹೊಸ ವರ್ಷಕ್ಕೂ ಮುನ್ನವೇ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಮುಂದಿನ 6 ತಿಂಗಳು ಯಾವುದೇ ಮುಷ್ಕರ ನಡೆಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಅಗತ್ಯ ಸೇವಾ ನಿರ್ವಹಣಾ ಕಾಯಿದೆ 2013 ರಡಿ ಜನವರಿ 1, 2023 ರಿಂದ ಜೂನ್ 30 ರವರೆಗೆ ಸಾರಿಗೆ ನಿಗಮದಲ್ಲಿ ಮುಷ್ಕರ ನಿರ್ಬಂಧಿಸಿ ಸರ್ಕಾರ ಆದೇಶ ಹೊರಡಿಸಿದೆ.ವಿವಿಧ ಬೇಡಿಕೆಗಳ ಈಡೇರಿಸುವಂತೆ ಸಾರಿಗೆ ನೌಕರರು ಕಳೆದ ಕೆಲವು ದಿನಗಳಿಂದ ಬೆಳಗಾವಿಯಲ್ಲಿ ಭಾರೀ ಪ್ರತಿಭಟನೆ ನಡೆಸುತ್ತಿದ್ದರು.ಸುವರ್ಣಸೌಧದ ಎದುರು ಸಾರಿಗೆ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸಿದ್ದಾರೆ. ವೈದ್ಯಕೀಯ ಸೌಲಭ್ಯ , ಗ್ರಾಚ್ಯೂಟಿ ಹಣ, ಸೇರಿ ಹಲವು ವಿವಿಧ ಬೇಡಿಕೆಗಳ ಈಡೇರಿಗೆಕೆ ಆಗ್ರಹಿಸಿ ಮತ್ತೆ ಸಾರಿಗೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದೀಗ ಹೊಸ ವರ್ಷಕ್ಕೂ ಮುನ್ನವೇ ಸಾರಿಗೆ ನೌಕರರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಮುಂದಿನ 6 ತಿಂಗಳು ಯಾವುದೇ ಮುಷ್ಕರ ನಡೆಸದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಸಾರಿಗೆ ಸೇವೆಯನ್ನು ಲಾಭದಾಯಕವಾಗಿ ಮಾಡಲು ಕ್ರಮ

ಸಾರಿಗೆ ಸೇವೆಯನ್ನು ಲಾಭದಾಯಕವಾಗಿ ಮಾಡಲು ಕ್ರಮ ವಹಿಸಲಾಗುವುದು. ಖಾಸಗಿ ಸಾರಿಗೆಗೆ ಪೈಪೋಟಿ ನೀಡುವಂತೆ ಸಾರಿಗೆ ಸಂಸ್ಥೆಗಳಲ್ಲಿ ಸುಧಾರಣೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅವರು ನಿನ್ನೆ ನಡೆದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಬೆಳಗಾವಿ ವಿಭಾಗ ಬೆಳಗಾವಿ ಇವರ ವತಿಯಿಂದ ‘ಕೇಂದ್ರ ಬಸ್ ನಿಲ್ದಾಣ ಆವರಣದಲ್ಲಿ ಆಯೋಜಿಸಿರುವ ಬೆಳಗಾವಿ ನೂತನ ಕೇಂದ್ರ ಬಸ್ ನಿಲ್ದಾಣವನ್ನು ಉದ್ಘಾಟಿಸಿ, ಮಂಗಳವಾರ ಮಾತನಾಡಿ, ಕೆ ಎಸ್ ಆರ್ ಟಿ ಸಿ ಸುಧಾರಣೆಗಾಗಿ ನಿವೃತ್ತ ಅಧಿಕಾರಿ ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿ ವರದಿ ಕೊಟ್ಡಿದೆ. ವರದಿಯ ಅನುಷ್ಠಾನದ ಜವಾಬ್ದಾರಿಯನ್ನು ಸಹ ಅವರಿಗೆ ನೀಡಲಾಗಿದೆ. ಸಾರಿಗೆ ಸೇವೆಯಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸಿ, ಅನಾವಶ್ಯಕ ವೆಚ್ಚಗಳಿಗೆ ಕಡಿವಾಣ ಹಾಕಲಾಗುವುದು. ರಾಜ್ಯದ ರಸ್ತೆ ಸಾರಿಗೆಯ ವಿವಿಧ ಸಂಸ್ಥೆ, ಬಿಎಂಟಿಸಿ ಸೇರಿದಂತೆ ಸರ್ಕಾರಿ ಸಾರಿಗೆ ಸೇವೆಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆಗಳನ್ನು ಕಾಣಲಿದೆ.

ಶಾಲೆಗೆ ಹೋಗುವ ಮಕ್ಕಳಿಗೆ ಹೊಸ ಯೋಜನೆ ಘೊಷಣೆ ಮಾಡಲು ಚರ್ಚಿಸಲಾಗುವುದು. ವಾಯುವ್ಯ ಸಾರಿಗೆ ಬೆಳ್ಳಿ ಹಬ್ಬ ಆಚರಿಸಲಿದ್ದು, ಬರುವ ಬಜೆಟ್ನಲ್ಲಿ 500 ಬಸ್ ಖರೀದಿಗೆ ಹಾಗೂ 500 ಸಿಬ್ಬಂದಿ ನೇಮಕ ಮಾಡಲು ಅನುಮತಿ ನೀಡುವ ಬಗ್ಗೆ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/de…

Please follow and like us:

Leave a Reply

Your email address will not be published. Required fields are marked *

Next Post

ಕುಷ್ಟಗಿ: ಮೇಕೆ ಸಾಕಾಣಿಕೆಗೆ ಸಿಕ್ತು ನರೇಗಾ ಬಲ!

Thu Dec 29 , 2022
ಕುಷ್ಟಗಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯನ್ನು ಬಳಸಿಕೊಂಡು ಕೊಪ್ಪಳ ಜಿಲ್ಲೆ ಕುಷ್ಟಗಿ ತಾಲೂಕಿನ ಹಿರೇಬನ್ನಿಗೋಳ ಗ್ರಾಮದ ರೈತ ಶರಣಪ್ಪ ತಳವಾರ ಮೇಕೆ ಶೆಡ್‌ ನಿರ್ಮಿಸಿ ಹತ್ತಾರು ಕುರಿ ಮರಿಗಳನ್ನು ಸಾಕುತ್ತಾ ಅವುಗಳನ್ನ ಮಾರಾಟ ಮಾಡಿ ಅಧಿಕ ಲಾಭ ಪಡೆಯುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ.ಈ ಗ್ರಾಮದ ಬಹುತೇಕ ರೈತರು ಕೃಷಿ ಬದುಕಿನ ಜೊತೆಗೆ ಹಸು, ಎಮ್ಮೆ, ಎತ್ತು, ಮೇಕೆ ಕುರಿಗಳನ್ನು ಸಾಕುವುದು ಉಪಕಸುಬುವಾಗಿದೆ. ಆದರೆ ಜಾನುವಾರುಗಳನ್ನು ಸಾಕಲು ಸರಿಯಾದ […]

Advertisement

Wordpress Social Share Plugin powered by Ultimatelysocial