ಬಿಗ್‌ ಅಪ್‌ಡೇಟ್ ಕೊಟ್ಟ ಬಿಜೆಪಿ ನಾಯಕ!.

 

ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಕೆಲವು ನಾಯಕರು ಪಕ್ಷಾಂತರ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಸಹ ಈ ಪಟ್ಟಿಯಲ್ಲಿ ಇದ್ದಾರೆ ಎಂಬುದು ಕೆಲವರ ಅಚ್ಚರಿಗೆ ಕಾರಣವಾಗಿದೆ. ಮುಖ್ಯಮಂತ್ರಿಸಂಪುಟದ ಸಚಿವರೊಬ್ಬರುಬಸವರಾಜ ಬೊಮ್ಮಾಯಿ ಕಾಂಗ್ರೆಸ್‌ ಸೇರಲಿದ್ದಾರೆಎಂಬ ಸುದ್ದಿ ಹಬ್ಬಿದೆ.ವಸತಿ ಇಲಾಖೆ, ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಮತ್ತು ಚಾಮರಾಜನಗರ ಜಿಲ್ಲಾ ಉಸ್ತವಾರಿ ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರಲಿದ್ದಾರೆ ಎಂಬುದು ಸುದ್ದಿ. ಮುಂದಿನ ವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜೊತೆ ಸೋಮಣ್ಣ ಮಾತುಕತೆ ನಡೆಸಲಿದ್ದಾರೆ ಎಂದು ವರದಿಗಳು ಪ್ರಕಟವಾಗಿವೆ. ಈ ಕುರಿತು ಬಿಜೆಪಿ ನಾಯಕರೊಬ್ಬರು ಸ್ಪಷ್ಟನೆ ನೀಡಿದ್ದಾರೆ.ಕೇಂದ್ರ ಸಚಿವ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಮಾತನಾಡಿ, “ಸಚಿವ ವಿ. ಸೋಮಣ್ಣ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ.‌ ಅವರು ಬಿಜೆಪಿಯಲ್ಲೇ ಮುಂದುವರಿಯುವ ಇಚ್ಚೇ ಹೊಂದಿದ್ದಾರೆ. ಅವರು ನನ್ನ ಸಂಪರ್ಕದಲ್ಲಿದ್ದಾರೆ. ನಾನು ಸೋಮಣ್ಣ ಅವರೊಂದಿಗೆ ಮಾತಾಡಿದ್ದೇನೆ” ಎಂದು ಭಾನುವಾರ ಹುಬ್ಬಳ್ಳಿಯಲ್ಲಿ ಹೇಳಿದರು.”ಬಿಜೆಪಿಯ ಕಾರ್ಯಕ್ರಮಗಳಲ್ಲಿ ವಿ. ಸೋಮಣ್ಣ ಸಕ್ರಿಯವಾಗಿ ಭಾಗವಹಿಸಲಿದ್ದಾರೆ. ಈ ಕುರಿತಂತೆ ಸೋಮಣ್ಣ ಅವರ ಜೊತೆ ಮಾತನಾಡಿರುವುದಾಗಿ” ಜೋಶಿ ಸ್ಪಷ್ಟಪಡಿಸಿದರು. ಇನ್ನು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಬಿಜೆಪಿ ಪರವೇ ಇದ್ದಾರೆ ಎಂದು ಪ್ರಹ್ಲಾದ್ ಜೋಶಿ ಇದೇ ವೇಳೆ ಹೇಳಿದರು.5 ಬಾರಿಯ ಶಾಸಕರಾಗಿರುವ ವಿ. ಸೋಮಣ್ಣ ಬೆಂಗಳೂರಿನ ಗೋವಿಂದರಾಜ ನಗರ ಕ್ಷೇತ್ರವನ್ನು ಪ್ರತಿನಿಧಿಸುತ್ತಾರೆ. ಬಿ. ಎಸ್. ಯಡಿಯೂರಪ್ಪ‌ ಸಂಪುಟದಲ್ಲಿ ಸಚಿವರಾಗಿದ್ದ ಅವರು ಬಸವರಾಜ ಬೊಮ್ಮಾಯಿ ಸಂಪುಟದಲ್ಲಿಯೂ ಸಚಿವರಾಗಿ ಮುಂದುವರೆದಿದ್ದಾರೆ. ಬೆಂಗಳೂರು ನಗರ ಉಸ್ತುವಾರಿ ಸಚಿವ ಸ್ಥಾನದ ಆಕಾಂಕ್ಷಿಯಾಗಿದ್ದ ಸೋಮಣ್ಣಗೆ ಆ ಸ್ಥಾನ ಸಿಗಲೇ ಇಲ್ಲ. ಇದರಿಂದಾಗಿ ಅಸಮಾಧಾನಗೊಂಡಿದ್ದಾರೆ ಎಂಬ ಮಾತುಗಳಿವೆ. ಕಳೆದ ಬಾರಿ ಬೆಂಗಳೂರಿಗೆ ಬಂದಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮಣ್ಣ ಮನೆಗೆ ಭೇಟಿ ಕೊಟ್ಟಿದ್ದರು.ವಿ. ಸೋಮಣ್ಣ ಕಾಂಗ್ರೆಸ್ ಸೇರುವ ಕುರಿತು ಮೊದಲ ಸುತ್ತಿನ ಮಾತುಕತೆ ನಡೆದಿದೆ ಎಂದು ಕಾಂಗ್ರೆಸ್ ನಾಯಕರೊಬ್ಬರು ಹೇಳಿದ್ದರು. ಆದರೆ ಇದು ಉಹಾಪೋಹ ಸಚಿವರು ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಆಪ್ತರು ಹೇಳಿದ್ದರು. ಸಚಿವ ಸೋಮಣ್ಣ ಪುತ್ರನಿಗೆ ಟಿಕೆಟ್ ಕೊಡಿಸಲು ಪ್ರಯತ್ನ ನಡೆಸಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು.ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ರಾಮನಗರದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ ವಿಜಯ ಸಂಕಲ್ಪ ಯಾತ್ರೆಗೆ ಚಾಲನೆ ನೀಡುವ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಚಾಮರಾಜನಗರದಲ್ಲಿ ಪಕ್ಷದ ಪರವಾದ ಪ್ರಚಾರದ ಹೊಣೆಯನ್ನು ಮಾಜಿ ಸಚಿವ ಕೆ. ಎಸ್. ಈಶ್ವರಪ್ಪಗೆ ನೀಡಲಾಗಿದೆ. ವಿ. ಸೋಮಣ್ಣ ಚಿತ್ತ ಎತ್ತ ಎಂಬುದು ಇನ್ನು ಗೊಂದಲದಲ್ಲೇ ಇದೆ.ಮೋದಿ ಕಾರ್ಯಕ್ರಮ ಪ್ರಹ್ಲಾದ್ ಜೋಶಿ ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಭೇಟಿ ಕುರಿತು ಮಾತನಾಡಿದರು, “ಮಂಡ್ಯದ ಮದ್ದೂರಿನಲ್ಲಿ ಮಾರ್ಚ್ 12ರಂದು ಪ್ರಧಾನಿ ಮೋದಿ ಅವರು ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಲಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪಾಕ್‌ ನೆಲದಲ್ಲೇ ಭಾರತಕ್ಕೆ ಬೇಕಿದ್ದ ನಾಲ್ವರು ಭಯೋತ್ಪಾದಕರು ಅಪರಿಚಿತರಿಂದ ಹತ್ಯೆ.

Mon Mar 6 , 2023
  ಅಪರಿಚಿತ ಬಂದೂಕುಧಾರಿಗಳಿಂದ ಕಳೆದೊಂದು ವಾರದಲ್ಲಿ ಭಾರತಕ್ಕೆ ಬೇಕಾಗಿದ್ದು ಪಾಕಿಸ್ತಾನದಲ್ಲಿ ಆಶ್ರಯ ಪಡೆದಿರುವ 4 ಭಯೋತ್ಪಾದಕರು ಹತ್ಯೆಯಾಗಿದ್ದಾರೆ. ಇದರಿಂದ ಪಾಕ್ ನಲ್ಲಿ ಆಶ್ರಯ ಪಡೆದಿರುವ ಭಯೋತ್ಪಾದಕರಲ್ಲಿ ನಡುಕ ಶುರುವಾಗಿದೆ.ಸೈಯದ್ ನೂರ್ ಶಲೋಬರ್, ಸೈಯದ್ ಖಾಲಿದ್ ರಜಾ, ಐಜಾಜ್ ಅಹ್ಮದ್ ಅಹಂಗರ್ ಅಲಿಯಾಸ್ ಅಬು ಉಸ್ಮಾನ್ ಅಲ್-ಕಾಶ್ಮೀರಿ ಮತ್ತು ಬಶೀರ್ ಅಹ್ಮದ್ ಪೀರ್ ಅಲಿಯಾಸ್ ಇಮ್ತಿಯಾಜ್ ಆಲಂ ಎಂಬ ಉಗ್ರರು ತ್ಯೆಯಾಗಿದ್ದಾರೆ.ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರದೇಶದಲ್ಲಿ ನಿನ್ನೆ ಅಪರಿಚಿತ ಬಂದೂಕುಧಾರಿಗಳಿಂದ ಸೈಯದ್ […]

Advertisement

Wordpress Social Share Plugin powered by Ultimatelysocial