ಪಾತಾಳಕ್ಕೆ ಕುಸಿದ ಬಿಟ್‌ಕಾಯಿನ್ ಮೌಲ್ಯದಲ್ಲಿ ಸ್ವಲ್ಪ ಚೇತರಿಕೆ

ಕೊರೊನಾದ  ಹೊಸ ರೂಪಾಂತರ ತಳಿ ಓಮಿಕ್ರಾನ್  ಜಾಗತಿಕ ಮಟ್ಟದಲ್ಲಿ ಆತಂಕ ಸೃಷ್ಟಿಸಿದರೆ, ಇದರ ಮಧ್ಯೆ ಕ್ರಿಪ್ಟೋ ಮಾರುಕಟ್ಟೆಯಲ್ಲಿ ಕರೆನ್ಸಿಗಳ ಮೌಲ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಶನಿವಾರ (ಜನವರಿ 8)ರಂದು ಬಿಟ್‌ಕಾಯಿನ್ ಮತ್ತು ಎಥೆರಿಯಮ್ ಸೇರಿದಂತೆ ಬಹುತೇಕ ಕರೆನ್ಸಿಗಳ ಮೌಲ್ಯದಲ್ಲಿ ಏರಿಕೆಯಾಗಿದೆ.

ಕ್ರಿಪ್ಟೋಕರೆನ್ಸಿಗಳ ಮೇಲೆ ಹೂಡಿಕೆಗೆ ಜಗತ್ತಿನ ಬಹುತೇಕ ರಾಷ್ಟ್ರಗಳು ನಿಯಂತ್ರಣ ಹೇರಿವೆ. ಹೀಗಿದ್ದರೂ ಪ್ರಮುಖ ಕ್ರಿಪ್ಟೋಕರೆನ್ಸಿಗಳ ಬೆಲೆಯಲ್ಲಿ ಏರಿಕೆ ಮುಂದುವರಿದಿದೆ. ಕ್ರಿಪ್ಟೋಕರೆನ್ಸಿಗಳ ಖರೀದಿ ಪ್ರಮಾಣ ಹೆಚ್ಚಾಗುತ್ತಿದ್ದಂತೆ ಕ್ರಿಪ್ಟೋಕರೆನ್ಸಿಗಳ ಮೌಲ್ಯದಲ್ಲಿ ಭಾರಿ ಏರಿಕೆ ಕಂಡು ಬರುತ್ತಿದೆ. ಭಾರತದಲ್ಲಿ ಆರ್‌ಬಿಐ ನಿರ್ದೇಶನವಿದ್ದರೂ ಕ್ರಿಪ್ಟೋಕರೆನ್ಸಿಗಳ ಮೇಲೆ ಭಾರತೀಯರ ಹೂಡಿಕೆ ಪ್ರಮಾಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಬಿಲಿಯನ್ ಡಾಲರ್‌ಗಳಷ್ಟು ಹಣವನ್ನು ಭಾರತೀಯರೇ ಹೂಡಿಕೆ ಮಾಡುತ್ತಿದ್ದಾರೆ. ಹೀಗಾಗಿ ಅನೇಕ ಕ್ರಿಪ್ಟೋಕರೆನ್ಸಿಗಳ ದರಗಳು ಇಳಿಕೆಯಾಗಿದ್ದರೂ ಹಣದ ಹೂಡಿಕೆ ಪ್ರಮಾಣ ಮೊದಲಿಗಿಂತ ಏರಿಕೆಯಾಗಿದೆ.

ಒಟ್ಟಾರೆ, ಎಲ್ಲಾ ಕ್ರಿಪ್ಟೋಕರೆನ್ಸಿಗಳ ಮಾರುಕಟ್ಟೆ ಮೌಲ್ಯ 1,991,187,978,617 ಯುಎಸ್ ಡಾಲರ್ ಗೇರಿದೆ. ಡ್ರ್ಯಾಗನ್ ಇನ್ಫಿನಿಟಿ ಕರೆನ್ಸಿ ಮೌಲ್ಯದಲ್ಲಿ ಅತಿಹೆಚ್ಚು ಏರಿಕೆಯಾಗಿದ್ದು, ಶೇಕಡಾ 1909.10ರಷ್ಟು ಹೆಚ್ಚಳವಾಗಿದೆ.

ಬಿಟ್‌ಕಾಯಿನ್ ಕ್ರಿಪ್ಟೋಕರೆನ್ಸಿಯಾಗಿದ್ದು, ಇದು ಆಧುನಿಕ ಡಿಜಿಟಲ್ ಯುಗದ ಡಿಜಿಟಲ್ ಕರೆನ್ಸಿ ಆಗಿದೆ. ಈ ಕ್ರಿಪ್ಟೋ ಕರೆನ್ಸಿಗೆ ಯಾವುದೇ ರೀತಿಯ ಮುದ್ರಣ ರೂಪ ಇರುವುದಿಲ್ಲ. ಬಿಟ್ ಕಾಯಿನ್ ಎಂಬ ಕರೆನ್ಸಿಯು ಕೇವಲ ಎಲೆಕ್ಟ್ರಾನಿಕ್ ರೂಪದಲ್ಲಿರುತ್ತದೆ. ರೂಪಾಯಿ, ಡಾಲರ್, ಯುರೋಗಳಂತೆ ಭೌತಿಕ ರೂಪದಲ್ಲಿ ಇರುವುದಿಲ್ಲ. ಅಲ್ಲದೇ ಇದಕ್ಕೆ ಯಾವುದೇ ದೇಶ, ಭಾಷೆ, ಬ್ಯಾಂಕ್ ಇದ್ಯಾವುದು ಇರುವುದಿಲ್ಲ .

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

Please follow and like us:

Leave a Reply

Your email address will not be published. Required fields are marked *

Next Post

ಬಿಳಿ ಕೂದಲಿನ ಸಮಸ್ಯೆಗೆ ಈ ವಿಧಾನ ಟ್ರೈ ಮಾಡಿ !!

Sat Jan 8 , 2022
ಸಣ್ಣ ಮಕ್ಕಳಿಂದ ದೊಡ್ಡವರವರೆಗೂ ಈ ಸಮಸ್ಯೆ ಕಾಡುತ್ತಿರುತ್ತದೆ.  ಹತ್ತು ಹಲವು ಕಾರಣಗಳಿಂದಾಗಿ ಕಪ್ಪಗಿನ ಕೂದಲು ಬೆಳ್ಳಗಾಗುತ್ತದೆ ಇದರಿಂದ ಮುಜುಗರ ಕೂಡ ಉಂಟಾಗುತ್ತದೆ. ಕಹಿಬೇವಿನ ಎಣ್ಣೆ, ಬೆಳೆಯುವ ಕೂದಲು ಬಿಳಿಯಾಗದೆ ಇರುವುದನ್ನು ತಡೆಯುತ್ತದೆ. ಬಿಳಿಯಾಗಲಿರುವ ಕೂದಲನ್ನು ಇದು ಕಪ್ಪಾಗಿಸುತ್ತದೆ. ಒಂದು ಚಮಚ ಕಹಿಬೇವಿನ ಎಣ್ಣೆಗೆ ಬಾದಾಮಿ ಎಣ್ಣೆ ಬೆರೆಸಿ. ಎರಡನ್ನು ಸಮ ಪ್ರಮಾಣದಲ್ಲಿ ತೆಗೆದುಕೊಳ್ಳಿ. ಇವೆರಡನ್ನು ತಲೆ ಕೂದಲಿಗೆ ಬುಡದಿಂದ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ. 60 ನಿಮಿಷ ಹಾಗೆ ಬಿಟ್ಟು […]

Advertisement

Wordpress Social Share Plugin powered by Ultimatelysocial