ಪರಿಶಿಷ್ಟ ಜಾತಿ ಬಲಗೈ ಸಮುದಾಯಕ್ಕೆ ಬಿಜೆಪಿ ಟಿಕೆಟ್ ನೀಡಲು ಒತ್ತಾಯ.

ಕಲ್ಯಾಣ ಕರ್ನಾಟಕದ 41 ವಿಧಾನಸಭಾ ಕ್ಷೇತ್ರಗಳ ಪೈಕಿ 8 ವಿಧಾನಸಭಾ ಕ್ಷೇತ್ರಗಳು ಪರಿಶಿಷ್ಟ ಜಾತಿ ಮೀಸಲು ಕ್ಷೇತ್ರಗಳಾಗಿವೆ. ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ಬಹುಸಂಖ್ಯಾತರಾಗಿರುವ ಪರಿಶಿಷ್ಟ ಜಾತಿ ಬಲಗೈ (ಹೊಲೆಯ) ಸಮುದಾಯಕ್ಕೆ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕನಿಷ್ಠ ಒಂದು ವಿಧಾನಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನೀಡಬೇಕು ಎಂದು ಬಿಜೆಪಿ ರಾಜ್ಯ ಎಸ್‍ಸಿ ಮೋರ್ಚಾ ಉಪಾಧ್ಯಕ್ಷ ಡಾ. ಅಂಬಾರಾಯ್ ಅಷ್ಟಗಿ, ಬಿಜೆಪಿ ಆರ್ಥಿಕ ಪ್ರಕೋಷ್ಠ ರಾಜ್ಯ ಸದಸ್ಯ ಧರ್ಮಣ್ಣ ಇಟಗಾ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬಸವರಾಜ್ ಬೆಣ್ಣೂರ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಹಾದಿಮನಿ ಅವರು ಒತ್ತಾಯಿಸಿದರು.
ಈ ಕುರಿತು ಶನಿವಾರ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಪಕ್ಷದ ಜಿಲ್ಲಾ ಉಸ್ತುವಾರಿ ನಿರ್ಮಲ್‍ಕುಮಾರ್ ಸುರಾನಾ ಅವರಿಗೆ ಮನವಿ ಪತ್ರ ಸಲ್ಲಿಸಿದ ಅವರು, ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಗಳ 41 ವಿಧಾನಸಭಾ ಕ್ಷೇತ್ರಗಳಲ್ಲಿ 8 ವಿಧಾನಸಭಾ ಕ್ಷೇತ್ರಗಳು ಪರಿಶಿಷ್ಟ ಜಾತಿ ಜನಾಂಗಕ್ಕೆ ಮೀಸಲಾಗಿದೆ. ಅವುಗಳಲ್ಲಿ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ಮೂರು ವಿಧಾನಸಭಾ ಕ್ಷೇತ್ರಗಳಲ್ಲಿ ದಲಿತರಲ್ಲಿ ಬಹುಸಂಖ್ಯಾತರಾಗಿರುವ ಬಲಗೈ (ಛಲವಾದಿ, ಹೊಲೆಯ) ಸಮುದಾಯಕ್ಕೆ ವಿಧಾನಸಭೆಗೆ ಸ್ಪರ್ಧಿಸಲು ಪರಿಶಿಷ್ಟ ಜಾತಿ ಬಲಗೈ (ಹೊಲೆಯ) ಸಮುದಾಯಕ್ಕೆ ಕನಿಷ್ಠ ಒಂದು ಟಿಕೆಟ್ ನೀಡುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕು ಎಂದು ಕೋರಿದರು.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪರಿಶಿಷ್ಟ ಜಾತಿ ಬಲಗೈ ಮತಗಳು ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿಗೆ ಸೆಳೆಯಲು ಹಾಗೂ ಅತೀ ಹೆಚ್ಚಿನ ಶಾಸಕರನ್ನು ಬಿಜೆಪಿಯಿಂದ ಆಯ್ಕೆಗೊಳಿಸಲು ಇಂತಹ ಕ್ರಮ ಕೈಗೊಳ್ಳಬೇಕು. ಈಗಾಗಲೇ ಪರಿಶಿಷ್ಟ ಜಾತಿಯ ಜನಾಂಗಕ್ಕೆ ಸೇರಿದ ಎಡಗೈ ಲಂಬಾಣಿ, ಭೋವಿ ಸಮುದಾಯಗಳಿಗೆ ಪಕ್ಷದ ಟಿಕೆಟ್ ನೀಡಲಾಗಿದ್ದು, ಬಲಗೈ (ಹೊಲೆಯ) ಸಮುದಾಯಕ್ಕೆ ಪಕ್ಷದ ನೀಡಿಲ್ಲ. ಆದ್ದರಿಂದ ಕಲ್ಯಾಣ ಕರ್ನಾಟಕದಲ್ಲಿ ಬಲಗೈ ಸಮುದಾಯವು 16 ಲಕ್ಷ ಮತಗಳನ್ನು ಹೊಂದಿದ್ದು, ಜಿಲ್ಲೆಯಲ್ಲಿ ಸುಮಾರು ನಾಲ್ಕು ಲಕ್ಷಕ್ಕೂ ಅಧಿಕ ಮತಗಳನ್ನು ಹೊಂದಿದ್ದಾರೆ. ಪರಿಶಿಷ್ಟ ಜಾತಿ ಹೊಲೆಯ ಸಮುದಾಯಕ್ಕೆ ಟಿಕೆಟ್ ನೀಡುವುದರಿಂದ ಪಕ್ಷದ ಅಭ್ಯರ್ಥಿಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಅವರು ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾಗೇಶ್‌ ಬದಲು ನಾನೇ ಸ್ಪರ್ಧಿಸಬೇಕಾದೀತು.

Mon Jan 16 , 2023
ತಿಪಟೂರು: ಇಲ್ಲಿನ ಜನಸ್ತೋಮ ನನ್ನ ಮೇಲೆ ಇಷ್ಟೊಂದು ಪ್ರೀತಿ ತೋರಿಸುತ್ತಿರುವುದನ್ನು ನೋಡಿದರೆ ಮುಂದಿನ ದಿನಗಳಲ್ಲಿ ಸಚಿವ ಬಿ.ಸಿ.ನಾಗೇಶ್‌ ಬದಲು ನಾನೇ ತಿಪಟೂರು ಕ್ಷೇತ್ರದಿಂದ ಸ್ಪರ್ಧಿಸಬೇಕಾಗಬಹುದೇನೋ ಎಂದು ಬಿ.ವೈ.ವಿಜಯೇಂದ್ರ ಹೇಳಿದ ಪ್ರಸಂಗ ನಡೆಯಿತು. ನಗರದ ಶ್ರೀ ಸಿದ್ಧರಾಮೇಶ್ವರ ಪಾಲಿಟೆಕ್ನಿಕ್‌ ಕಾಲೇಜು ಆವರಣದಲ್ಲಿ ರಾಜ್ಯಮಟ್ಟದ ಶ್ರೀ ಗುರುಸಿದ್ಧರಾಮೇಶ್ವರರ 850ನೇ ಸುವರ್ಣ ಜಯಂತಿ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಸೇರಿದ್ದ ಸಾವಿರಾರು ಜನರು “ವಿಜಯೇಂದ್ರ, ವಿಜಯೇಂದ್ರ, ಯಡಿಯೂರಪ್ಪ’ ಎಂದು ಕೂಗುತ್ತಿದ್ದರು. ಇದನ್ನು ಗಮನಿಸಿದ ವಿಜಯೇಂದ್ರ ಅವರು ತಮಾಷೆಯಾಗಿ […]

Advertisement

Wordpress Social Share Plugin powered by Ultimatelysocial