ದಿ. ಸುರೇಶ್ ಅಂಗಡಿ ಪತ್ನಿಗೆ ಬೆಳಗಾವಿ ಟಿಕೆಟ್ ನೀಡಿದ ಬಿಜೆಪಿ, 2 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಪ್ರಕಟ

ರಾಜ್ಯದ ಮೂರು ಕ್ಷೇತ್ರಗಳಿಗೆ ಮುಂದಿನ ತಿಂಗಳು 17ರಂದು ಉಪಚುನಾವಣೆ ನಡೆಯಲಿದೆ. ಬೆಳಗಾವಿ ಲೋಕಸಭೆ ಕ್ಷೇತ್ರ ಹಾಗೂ ಮಸ್ಕಿ ಮತ್ತು ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಇದೀಗ ಮೂರು ಕ್ಷೇತ್ರಗಳಿಗೆ ಬಿಜೆಪಿ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಕೇಂದ್ರದಲ್ಲಿ ಸಚಿವರಾಗಿದ್ದ ಸುರೇಶ್ ಅಂಗಡಿ ನಿಧನದಿಂದಾಗಿ ಬೆಳಗಾವಿ ಲೋಕಸಭಾ ಕ್ಷೇತ್ರ ತೆರವಾಗಿತ್ತು. ಇದೀಗ ಆ ಕ್ಷೇತ್ರದ ಟಿಕೆಟ್ ಅನ್ನು ದಿವಂಗತ ಸುರೇಶ್ ಅಂಗಡಿ ಅವರ ಪತ್ನಿಗೆ ನೀಡಲಾಗಿದೆ. ಅನುಕಂಪದ ಮತಗಳ ಸೆಳೆಯಲು ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸತೀಶ್ ಜಾರಕಿಹೊಳಿ ಅವರ ವಿರುದ್ಧ ಪ್ರಬಲ ಸ್ಪರ್ಧೆ ಒಡ್ಡುವ ನಿಟ್ಟಿನಲ್ಲಿ  ದಿ. ಸುರೇಶ್ ಅಂಗಡಿ ಅವರ ಪತ್ನಿ ಮಂಗಳಾ ಸುರೇಶ್ ಅವರಿಗೆ ಟಿಕೆಟ್ ನೀಡಲಾಗಿದೆ.

ಉಳಿದಂತೆ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಟಿಕೆಟ್ ಅನ್ನು ಶರಣು ಸಲಗಾರ್ ಹಾಗೂ ಮಸ್ಕಿ ಕ್ಷೇತ್ರದ ಟಿಕೆಟ್ ಅನ್ನು ಪ್ರತಾಪ ಗೌಡ ಪಾಟೀಲ್ ಅವರಿಗೆ ನೀಡಲಾಗಿದೆ. ಮೂರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಇಂದು ಸಂಜೆ ಬಿಜೆಪಿ ಕೇಂದ್ರೀಯ ಚುನಾವಣಾ ಸಮಿತಿ ಅಧಿಕೃತವಾಗಿ ಘೋಷಣೆ ಮಾಡಿದೆ.

Please follow and like us:

Leave a Reply

Your email address will not be published. Required fields are marked *

Next Post

ಸಿಡಿ ಪ್ರಕರಣ: ಯುವತಿಯಿಂದ 3ನೇ ವಿಡಿಯೋ ಬಿಡುಗಡೆ; ದೂರು ದಾಖಲಿಸುವುದಾಗಿ ಹೇಳಿಕೆ

Fri Mar 26 , 2021
ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಸಂತ್ರಸ್ತ ಯುವತಿ ಹಾಗೂ ಅದರ ರೂವಾರಿಗಳೆನ್ನಲಾದ ಇಬ್ಬರು ಪತ್ರಕರ್ತರನ್ನು ಪತ್ತೆ ಮಾಡಲು ಕಣ್ಣಿಗೆ ಎಣ್ಣೆಬಿಟ್ಟುಕೊಂಡು ಪೊಲೀಸರು ಕಾಯುತ್ತಿರುವಂತೆಯೇ ಆ ಯುವತಿ 3ನೇ ಬಾರಿಗೆ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಾರೆ. ತಮ್ಮ ವಕೀಲರ ಮೂಲಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ದಾಖಲಿಸುವುದಾಗಿ ಅವರು ಇವತ್ತು ರಿಲೀಸ್ ಆದ ವಿಡಿಯೋದಲ್ಲಿ ತಿಳಿಸಿದ್ದಾರೆ. ಒಂದು ವೇಳೆ ದೂರು ದಾಖಲಾದರೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ಬಂಧನದ ಭೀತಿ […]

Advertisement

Wordpress Social Share Plugin powered by Ultimatelysocial