ದೇಶ ಭಕ್ತರ ಹೆಸರಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವವರನ್ನು  ಸಹಿಸುವುದಿಲ್ಲ :ಮುಖ್ಯಮಂತ್ರಿ ಬೊಮ್ಮಾಯಿ

ದೇಶ ಭಕ್ತರ ಹೆಸರಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವವರನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಚ್ಚರಿಕೆ ನೀಡಿದರು.ಭಾನುವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎಲ್ಲರಲ್ಲಿಯೂ ಮನವಿ ಮಾಡುತ್ತೇನೆ.ದೇಶಭಕ್ತರಿಗೆ ಪ್ರತಿಯೊಬ್ಬರೂ ಗೌರವ ಕೊಡಬೇಕು. ಅದಕ್ಕಾಗಿಯೇ ಸಂಗೊಳ್ಳಿ ರಾಯಣ್ಣ, ಕಿತ್ತೂರು ರಾಣಿ ಚನ್ನಮ್ಮ, ಛತ್ರಪತಿ ಶಿವಾಜಿ ಮಹಾರಾಜ್ ಅವರ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ್ದೇವೆ. ಬೇರೆ ಬೇರೆ ವಿಷಯ ತಂದು ಕಾನೂನು ಸುವ್ಯವಸ್ಥೆ ಹಾಳು ಮಾಡುವುದು ಸರಿಯಲ್ಲ ಎಂದರು.ಏನೇ ಹೇಳುವುದಿದ್ದರೂ ಶಾಂತವಾಗಿ ಹೇಳಬೇಕು. ಯಾವುದೇ ಕಾರಣಕ್ಕೂ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವುದಕ್ಕೆ ಸರ್ಕಾರ ಅವಕಾಶ ನೀಡುವುದಿಲ್ಲ. ಯಾರೇ ಹೋರಾಟ ಮಾಡಿದರು ಕಾನೂನು ಸುವ್ಯವಸ್ಥೆ ಭಂಗ ಬರದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಜ್ಯದ ಪೊಲೀಸರಿಗೆ ಭದ್ರತೆ ನೀಡಿ ಗಡಿ ದಾಟಿಸಿದ ಮಹಾರಾಷ್ಟ್ರ ಪೊಲೀಸರು 

Sun Dec 19 , 2021
ರಾಜ್ಯದ ಪೊಲೀಸ್‌ ವಾಹನಕ್ಕೆ ಮಹಾರಾಷ್ಟ್ರ ಪೊಲೀಸರು ಭದ್ರತೆ ನೀಡಿ, ಗಡಿ ದಾಟಿಸಿದ್ದಾರೆ.ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಈ ಘಟನೆ ನಡೆದಿದೆ. ವಿಧಾನಮಂಡಲ ಚಳಿಗಾಲದ ಅಧಿವೇಶನ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಪೊಲೀಸರು, ಕೊಲ್ಹಾಪುರದ ಮಹಾಲಕ್ಷ್ಮಿ ದೇವಸ್ಥಾನಕ್ಕೆ ತೆರಳಿದ್ದರು.ಅವರಿದ್ದ ವಾಹನಕ್ಕೆ ಅಲ್ಲಿನ ಪೊಲೀಸರು ಭದ್ರತೆ ನೀಡಿದ್ದಾರೆ.ಬೆಂಗಳೂರರಿನಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿದ್ದನ್ನು ಖಂಡಿಸಿ ಶಿವಸೇನಾ ಕಾರ್ಯಕರ್ತರು, ಕರ್ನಾಟಕದ ವಾಹನಗಳ ಮೇಲೆ ದಾಳಿ ನಡೆಸುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರ ವಾಹನಕ್ಕೆ ಭದ್ರತೆ ನೀಡಲಾಗಿದೆ ಎಂದು ತಿಳಿದುಬಂದಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ […]

Advertisement

Wordpress Social Share Plugin powered by Ultimatelysocial