ದೇಶಕ್ಕಾಗಿ ಹೋರಾಡಿದವರನ್ನು ಜಾತಿಗೆ ಸೀಮಿತ ಮಾಡಬಾರದು: ನಾವೆಲ್ಲರು ಒಗ್ಗಟ್ಟಾಗಿರಬೇಕು: ಸಿಎಂ ಬೊಮ್ಮಾಯಿ ಮನವಿ

ದೇಶಭಕ್ತರಾದ ಶಿವಾಜಿ ಮಹರಾಜರು, ಸಂಗೊಳ್ಳಿ ರಾಯಣ್ಣ, ವೀರರಾಣಿ ಕಿತ್ತೂರ ಚನ್ನಮ್ಮ ಅವರು ಸಮುದಾಯ ಮೀರಿ ನಿಂತು ದೇಶಕ್ಕಾಗಿ ತ್ಯಾಗ ಮಾಡಿ ದೇಶವನ್ನು ಒಗ್ಗೂಡಿಸಿದವರು, ಅವರ ಹೆಸರಲ್ಲಿ ನಾವೆಲ್ಲರು ಒಗ್ಗಟ್ಟಾಗಿ ಇರಬೇಕು, ಅವರನ್ನು ಜಾತಿಗೆ ಸೀಮಿತ ಮಾಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.ಶಿಗ್ಗಾವಿ ತಾಲೂಕಿನ ಬಿಸಲಹಳ್ಳಿ ಗ್ರಾಮದಲ್ಲಿ ಮನೆ ಮನೆಗೆ ಕುಡಿಯುವ ನೀರು ಪೂರೈಸುವ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದ, ಈಗ ನಡೆಯುತ್ತಿರುವ ಗೊಂದಲದ ಬಗ್ಗೆ ಈಗಾಗಲೇ ಸರ್ಕಾರ ಕ್ರಮ ಕೈಗೊಂಡಿದೆ. ಶಿವಾಜಿ ಮೂರ್ತಿ ಭಗ್ನಗೊಳಿಸಿದವರನ್ನು ಬಂಧಿಸಲಾಗಿದೆ ಎಂದರು.ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗುವುದು. ಶಿವಾಜಿ ಮೂರ್ತಿ ಭಗ್ನ ಗೊಳಿಸಿರುವ‌ ಘಟನೆ ಹಿಂದೆ ಯಾರು ಇದ್ದಾರೆ ಎಂಬುದರ ಬಗ್ಗೆ ಸಮಗ್ರ ತನಿಖೆ ಮಾಡಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಶಿವಸೇನ ಸರ್ಕಾರ ಮೈತ್ರಿ:ಈ ಬಗ್ಗೆ ಇಲ್ಲಿನ ಕಾಂಗ್ರೆಸ್‌ ನಾಯಕರು ಮಾತನಾಡಬೇಕು ಸಚಿವ ಈಶ್ವರಪ್ಪ

Sun Dec 19 , 2021
ಶಿವಮೊಗ್ಗ: ಮಹಾರಾಷ್ಟ್ರ ಸಿಎಂ ಆಕಾಶದಿಂದ ಇಳಿದು ಬಂದಿಲ್ಲ ಅಂಥ ಸಚಿವ ಈಶ್ವರಪ್ಪನವುರ ಟಾಂಗ್‌ ಮಾಡಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ, ಈ ಬಗ್ಗೆ ಹೇಳಿದ್ರು. ಇದೇ ವೇಳೆ ಅವರು ಮಾತನಾಡುತ್ತ, ನಾಡು, ನುಡಿಗೆ, ಗಡಿಗೆ ಸಂಬಂಧಪಟ್ಟಂತೆ ಮಾಡುತ್ತಿರುವ ಕಿಡಿಗೇಡಿಗಳ ಕೃತ್ಯಕ್ಕೆ ಅವರು ಬೇಸರ ವ್ಯಕ್ತಪಡಿಸಿದರು.ಇನ್ನೂ ಮಹಾ ಸಿಎಂ ಪ್ರಧಾನಿ ನರೇಂದ್ರ ಮೋದಿಗೆ ಬರೆದಿರುವ ಪತ್ರಕ್ಕೆ ಸಂಬಂಧಪಟ್ಟಂತೆ ಪ್ರಧಾನಿ ಸರಿಯಾದ ಕ್ರಮ ಕೈಗೊಳ್ಳಲಿದ್ದಾರೆ ಅಂತ ಅವರು ಹೇಳಿದರು. ಇನ್ನೂ […]

Advertisement

Wordpress Social Share Plugin powered by Ultimatelysocial