ಹಿಂದುಳಿದ ವರ್ಗಗಳ ಆಯೋಗವು ವರದಿ ಮೇಲೆ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಕ್ರಮ:ಸಿಎಂ ಬೊಮ್ಮಾಯಿ 

ಕಳೆದ ಮೂರ ತಿಂಗಳಿಂದ ತಣ್ಣಗಿದ್ದ 2ಎ ಮೀಸಲಾತಿ ಹೋರಾಟ ಬೆಳಗಾವಿ ಅಧಿವೇಶನ ನಡೆಯುವ ವೇಳೆ ಮತ್ತೆ ಮುನ್ನೆಲೆಗೆ ಬಂದಿದೆ.ಪಂಚಮಸಾಲಿ ಸಮುದಾಯಕ್ಕೆ ಸೆ.15ರೊಳಗೆ ಮೀಸಲಾತಿ ಘೋಷಿಸಬೇಕು. ಇಲ್ಲದಿದ್ದರೆ ಅ.1ರಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಲಾಗಿತ್ತು.ಕೂಡಲ ಸಂಗಮದ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಿಂದುಳಿದ ವರ್ಗಗಳ ಆಯೋಗದ ವರದಿ ಸಲ್ಲಿಕೆಯ ಬಳಿಕ 2ಎ ಮೀಸಲಾತಿ ಘೋಷಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. ಈಗ ಮೂರು ಬಹುತೇಕ ಮೂರು ತಿಂಗಳ ನಂತರವೂ ಸಿಎಂ ಅದನ್ನೇ ಪುನರುಚ್ಚರಿಸಿದ್ದಾರೆ.

ಬೆಳಗಾವಿಯಲ್ಲಿ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಹಿಂದುಳಿದ ವರ್ಗಗಳ ಆಯೋಗವು ವರದಿ ನೀಡಿದ ನಂತರ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ಹೇಳಿದ್ದಾರೆ.ಕೂಡಲಸಂಗಮ ಕ್ಷೇತ್ರದ ಲಿಂಗಾಯತ ಪಂಚಮಸಾಲಿ ಜಗದ್ಗುರುಗಳು ಹಾಗೂ ಸಮಾಜದ ಶಾಸಕರೊಂದಿಗೆ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ಬಗ್ಗೆ ಚರ್ಚಿಸಲಾಗಿದೆ ಎಂದು ಹೇಳಿದರು.

ಮೀಸಲಾತಿ ನೀಡುವ ಬಗ್ಗೆ ಸರ್ವೋಚ್ಚ ನ್ಯಾಯಾಲಯದ ತೀರ್ಪಿನ ಅನ್ವಯ ಸಂವಿಧಾನಾತ್ಮಕವಾಗಿ ಪರಿಶೀಲಿಸಲಾಗುವುದು. ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಬಗ್ಗೆ ಶಿಫಾರಸ್ಸು ಮಾಡಲಾಗಿದೆ. ವರದಿ ಬಂದ ಕೂಡಲೇ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡಿಸಲಾಗುವುದು. ಚುನಾವಣೆ ನೀತಿ ಸಂಹಿತೆ ಇದ್ದುದರಿಂದ ಎಲ್ಲೆಡೆಯಿಂದ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದರು.ಎಸ್.ಟಿ ಟೋಕರಿ ಕೋಳಿ, ಎಸ್ಟಿ ಗೊಂಡ ಸೇರಿದಂತೆ ವಿವಿಧ ಜಾತಿಗಳ ಸಿಂಧುತ್ವ ಪ್ರಮಾಣವನ್ನು ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯ ವರದಿ ಪಡೆದ ನಂತರವೇ ನೀಡಬೇಕೆಂದು ಹೊರಡಿಸಿರುವ ಆದೇಶವನ್ನು ಹಿಂಪಡೆಯುವಂತೆ ಜಿಲ್ಲೆಯ ಗಣ್ಯರ ನೇತೃತ್ವದಲ್ಲಿ ಗೊಂಡ ಮತ್ತು ಟೋಕರಿ ಕೋಳಿ ಸಮಾಜದ ಮುಖಂಡರು ಸಿಎಂ ಬಸವರಾಜ ಬೊಮ್ಮಾಯಿರವರಿಗೆ ಮನವಿ ಸಲ್ಲಿಸಿದರು.

Please follow and like us:

Leave a Reply

Your email address will not be published. Required fields are marked *

Next Post

ವಿಶ್ವ ಈಜು ಚಾಂಪಿಯನ್‌ಷಿಪ್‌ನಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ ಭಾರತದ ಶ್ರೀಹರಿ ನಟರಾಜ್

Fri Dec 17 , 2021
ಭಾರತದ ಶ್ರೀಹರಿ ನಟರಾಜ್, ಸಜನ್ ಪ್ರಕಾಶ್ ಮತ್ತು ಕುಶಾಗ್ರ ರಾವತ್ ಅವರು ಫಿನಾ ಶಾರ್ಟ್ ಕೋರ್ಸ್ ವಿಶ್ವ ಈಜು ಚಾಂಪಿಯನ್‌ಷಿಪ್‌ನಲ್ಲಿ ರಾಷ್ಟ್ರೀಯ ದಾಖಲೆ ನಿರ್ಮಿಸಿದರು. ಗುರುವಾರ ನಡೆದ ಪುರುಷರ 200 ಮೀಟರ್ಸ್ ಬಟರ್‌ಫ್ಲೈ ಸ್ಪರ್ಧೆಯ ಹೀಟ್ಸ್‌ನಲ್ಲಿ ಸಜನ್ 1 ನಿಮಿಷ 52.10ಸೆಕೆಂಡುಗಳಲ್ಲಿ ಗುರಿ ಮುಟ್ಟಿದರು. ಒಟ್ಟಾರೆ 10ನೇ ಸ್ಥಾನಕ್ಕೆ ಕುಸಿದ ಅವರು ಫೈನಲ್ ಪ್ರವೇಶಿಸಲು ವಿಫಲರಾದರು.100 ಮೀ ಬ್ಯಾಕ್‌ಸ್ಟ್ರೋಕ್‌ನಲ್ಲಿ ಶ್ರೀಹರಿ ನಟರಾಜ್ 52.81 ಸೆಕೆಂಡುಗಳ ಸಾಧನೆಯೊಂದಿಗೆ ಹೀಟ್ಸ್‌ನಲ್ಲಿ 28ನೇ ಸ್ಥಾನ […]

Advertisement

Wordpress Social Share Plugin powered by Ultimatelysocial