ಉದ್ದೇಶಪೂರ್ವಕವಾಗಿ ಕೆಲವರು ಗಲಭೆ ಮಾಡಲಾಗುತ್ತಿದೆ:ಮಾಜಿ ಸಿಎಂ ಯಡಿಯೂರಪ್ಪ ಕಿಡಿ

ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿ ಉದ್ದೇಶಪೂರ್ವಕವಾಗಿ ಕೆಲವರು ಗಲಭೆ ಮಾಡಲಾಗುತ್ತಿದೆ ಎಂದು ಶಿವಮೊಗ್ಗದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ…ಹಿರಿಯ ಮಹಾತ್ಮರ ಪುತ್ಥಳಿ ಹಾಳು ಮಾಡುತ್ತಿರುವುದನ್ನು‌ ಸಹಿಸಲು ಸಾಧ್ಯವಿಲ್ಲ.ನಾಳೆ ವಿಧಾನಮಂಡಲದಲ್ಲಿ ಈ ಬಗ್ಗೆ ಸುದೀರ್ಘ ಚರ್ಚೆ ಮಾಡುತ್ತೇವೆ.ಸಿಎಂ ಬೊಮ್ಮಾಯಿ ಅವರು ಕಠಿಣ ಕ್ರಮ ಜರುಗಿಸುವಂತೆ ಗೃಹ ಸಚಿವರಿಗೆ ತಿಳಿಸಿದ್ದಾರೆ.ಗಲಭೆಗೆ ಸಂಬಂಧಿಸಿದಂತೆ ಈಗಾಗಲೇ 23 ಜನರನ್ನು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಲಾಗಿದೆ.ಈ ಘಟನೆಯಲ್ಲಿ ಇನ್ನೂ ಯಾರು ಯಾರು ಶಾಮೀಲಾಗಿದ್ದಾರೆಯೋ ಅವರನ್ನು ಬಂಧಿಸುವ ಕೆಲಸ ಮುಂದುವರಿಯುತ್ತದೆ.ವಿಧಾನಮಂಡಲದಲ್ಲಿ ವ್ಯಾಪಕ ಚರ್ಚೆ ಮಾಡಿ ಇನ್ನು ಮುಂದೆ ಈ ರೀತಿ ಘಟನೆಗಳು ಮರುಕಳಿಸದಂತೆ ಪ್ರಮಾಣಿಕ ಪ್ರಯತ್ನ ಮಾಡುತ್ತೇವೆಅಪರಾಧಿಗಳು ಯಾರೇ ಇರಲಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುತ್ತೇವೆ ಎಂದರು…

ಸಚಿವ ಸಂಪುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿ ಇಲ್ಲ ಸಿಎಂ ಕೇಳಬೇಕು‌.ನನಗೆ ಗೊತ್ತಿರುವಂತೆ ಇದುವರೆಗೆ ಸಚಿವ ಸಂಪುಟ ವಿಸ್ತರಣೆಯ ಯಾವುದೇ ಸುದ್ದಿಗಳು ಇಲ್ಲ.ವಿಜಯೇಂದ್ರ ಅವರಿಗೆ ಸಚಿವ ಸ್ಥಾನ ಕೊಡುವ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಅದು ಹೈಕಮಾಂಡ್ ಹಾಗೂ ಸಿಎಂಗೆ ಬಿಟ್ಟ ವಿಚಾರ.ಮತಾಂತರ ನಿಷೇಧ ಕಾಯ್ದೆ ಜಾರಿಗೆ ಪರಿಷತ್‌ನಲ್ಲೂ ನಮಗೆ ಬಹುಮತ ಸಿಗುತ್ತದೆ.ಮತಾಂತರ ನಿಷೇಧ ಕಾಯ್ದೆ ಜಾರಿಗೆ ತಂದೇ ತರುತ್ತೇವೆ ಎಂದ ಯಡಿಯೂರಪ್ಪ.ಎಂಇಎಸ್ ಈ ಮಟ್ಟಿಗೆ ಬೆಳೆಯಲು ಹಿಂದೆ‌ ಬಿಜೆಪಿ ನೀಡಿದ್ದ ಬೆಂಬಲವೇ ಕಾರಣ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಬಿಎಸ್ ವೈ.ಯಾರೋ ಕೆಲವರು ವಾಸ್ತವಿಕ ಸತ್ಯ ಸಂಗತಿಗಳು ತಿಳಿಯದವರು ಮಾಡಿದ ಆರೋಪಕ್ಕೆ‌ಅರ್ಥವಿಲ್ಲ.ಯಾರೇ ಅಪರಾಧ ಮಾಡಿದರೂ ಕ್ಷಮಿಸುವ ಪ್ರಶ್ನೆಯೇ ಇಲ್ಲ.ತಪ್ಪು ಮಾಡಿದವರ ಮೇಲೆ ಕ್ರಮ‌ಜರುಗಿಸಿ ಜೈಲಿಗೆ ಕಳುಹಿಸಿರುವುದೇ ಇದಕ್ಕೆ‌ ಉದಾಹರಣೆ ಎಂದ ಯಡಿಯೂರಪ್ಪ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೇರೆ ಬೇರೆ ವಿಷಯ ತಂದು ಕಾನೂನು ಸುವ್ಯವಸ್ಥೆಯನ್ನ ಹಾಳು ಮಾಡಬಾರದು-ಸಿಎಂ ಬೊಮ್ಮಾಯಿ ಖಡಕ್​ ಎಚ್ಚರಿಕೆ

Sun Dec 19 , 2021
ಹುಬ್ಬಳ್ಳಿ: ಬೇರೆ ಬೇರೆ ವಿಷಯ ತಂದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡುವುದನ್ನ ಸಹಿಸೋದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಿಡಿಗೇಡಿಗಳಿಗೆ ಖಡಕ್​ ಎಚ್ಚರಿಕೆ ರವಾನಿಸಿದ್ದಾರೆ. ನಗರದ ತಮ್ಮ ನಿವಾಸದ ಬಳಿ ಮಾತನಾಡಿದ ಅವರು, ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟಿಕೆ ಹಿನ್ನೆಲೆಯಲ್ಲಿ ಎಲ್ಲರಿಗೂ ಮನವಿ ಮಾಡುತ್ತೇನೆ. ದೇಶ ಭಕ್ತರಿಗೆ ಎಲ್ಲರೂ ಗೌರವ ಕೊಡಬೇಕು. ಅದಕ್ಕಾಗಿಯೇ ಸಂಗೊಳ್ಳಿ ರಾಯಣ್ಣ, ಕಿತ್ತೂರು ಚೆನ್ನಮ್ಮ, ಶಿವಾಜಿ ಮಹಾರಾಜರ ಮೂರ್ತಿ ಸ್ಥಾಪನೆ ಮಾಡಿದ್ದೇವೆ ಎಂದರು.ಆದ್ರೆ, ಬೇರೆ […]

Advertisement

Wordpress Social Share Plugin powered by Ultimatelysocial