ಮಾಜಿ ಸಿಎಂ ಬಗ್ಗೆ ಕೈ ನಾಯಕರ ಮೊಸಳೆ ಕಣ್ಣೀರು ಹರಿಸುವ ಅಗತ್ಯವಿಲ್ಲ;ಬಿಜೆಪಿ

ರಾಜ್ಯದ ಪ್ರಬಲ ಬಿಜೆಪಿ ನಾಯಕ ಬಿ.ಎಸ್​. ಯಡಿಯೂರಪ್ಪ ನಾಲ್ಕು ಬಾರಿ ಸಿಎಂ ಆಗಿದ್ದರೂ ಸಹ ಅವರು ಪೂರ್ಣ ಅವಧಿಗೆ ಅಧಿಕಾರವನ್ನು ನಿರ್ವಹಿಸಿರಲಿಲ್ಲ. ವಯಸ್ಸಿನ ಕಾರಣಕ್ಕೆ ಇದೀಗ ಅವರನ್ನು ಅಧಿಕಾರದಿಂದ ಇಳಿಸಿ ಬಸವರಾಜ ಬೊಮ್ಮಾಯಿ ಅವರನ್ನು ಸಿಎಂ ಸ್ಥಾನಕ್ಕೆ ಏರಿಸಲಾಗಿದೆ. ಇದು ಸಾಮಾನ್ಯವಾಗಿ ಯಡಿಯೂರಪ್ಪ ಅವರಿಗೂ ಸಹ ಅಸಮಾಧಾನಕ್ಕೆ ಕಾರಣವಾಗಿರುವುದು ಸುಳ್ಳಲ್ಲ. ಆದರೆ, ಕಾಂಗ್ರೆಸ್ ನಾಯಕರುಕಳೆದ ಎರಡು ತಿಂಗಳಿನಿಂದ ಬಿ.ಎಸ್​. ಯಡಿಯೂರಪ್ಪ ಅವರಿಗೆ ಬಿಜೆಪಿ ಮೋಸ ಮಾಡಿದೆ ಎಂದು ಮಾತನಾಡುತ್ತಿದ್ದಾರೆ. ಬಿಜೆಪಿಯಲ್ಲಿ ಯಡಿಯೂರಪ್ಪ ಅವರಿಗೆ ಆಗಿರುವ ಅನ್ಯಾಯದ ಬಗ್ಗೆ ವಿಷಾಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ ಬಗ್ಗೆ ಇಂದು ಟ್ವಿಟರ್ನಲ್ಲಿ ಕಿಡಿಕಾರಿರುವ ಬಿಜೆಪಿ ಯಡಿಯೂರಪ್ಪ ಬಗ್ಗೆ ಕಾಂಗ್ರೆಸ್ನವರು ಮೊಸಳೆ ಕಣ್ಣೀರು ಹರಿಸುವ ಅಗತ್ಯ ಇಲ್ಲ. ಮೊದಲು ನಿಮ್ಮ ಪಕ್ಷದಲ್ಲಿರುವ ಹಿರಿಯರನ್ನು ಗೌರವಯುತವಾಗಿ ನಡೆಸಿಕೊಳ್ಳಿ ಎಂದು ಟೀಕಿಸಿದ್ದಾರೆ..

ಟ್ವೀಟ್ಮಾಡಿ ಬಿಜೆಪಿಯ  ಕಾಲೆಳೆದಿದ್ದ ಕಾಂಗ್ರೆಸ್ಯಡಿಯೂರಪ್ಪ ಅವರನ್ನು ಬಿಜೆಪಿ ಸದಾ ಮಲತಾಯಿ ಮಗನಂತೆ ನಡೆಸಿಕೊಂಡಿದೆ. ಅಧಿಕಾರದಲ್ಲಿದ್ದಾಗಲೂ ಬಿಜೆಪಿ ಕಾಡಿತ್ತು, ಅಧಿಕಾರ ಕಳೆದುಕೊಂಡ ಮೇಲೂ ಕಾಡುತ್ತಿದೆ. ಮುಂದಿನ ಚುನಾವಣೆಯೊಳಗೆ ಬಿಎಸ್ವೂ ಅವರನ್ನು ಸಂಪೂರ್ಣ ಮುಗಿಸುವಟಾರ್ಗೆಟ್ ಬಿಎಸ್ವೈಯೋಜನೆಯನ್ನು ಬಿಜೆಪಿ ಹಮ್ಮಿಕೊಂಡಿದೆ. ಪಕ್ಷ ಕಟ್ಟಿದವರನ್ನು ಮುಗಿಸುವುದು ಬಿಜೆಪಿ ಹೊಸ ಟ್ರೆಂಡ್ಎಂದು ವ್ಯಂಗ್ಯವಾಡಿತ್ತು. ಆದರೆ, ಮಾಜಿ ಸಿಎಂ ಯಡಿಯೂರಪ್ಪ ಬಗ್ಗೆ ವಿಷಾಧನೆ ವ್ಯಕ್ತಪಡಿಸಿದ ಕಾಂಗ್ರೆಸ್ ಟ್ವೀಟ್ಗೆ ಸರಣಿ ಮರು ಟ್ವೀಟ್ ಮೂಲಕ ಉತ್ತರ ನೀಡಿರುವ ಬಿಜೆಪಿ, ಯಡಿಯೂರಪ್ಪ ಅವರ ಬಗ್ಗೆ ಕಾಂಗ್ರೆಸ್ಮೊಸಳೆ ಕಣ್ಣೀರು ಸುರಿಸಬೇಕಾದ ಅಗತ್ಯವಿಲ್ಲ. ರಾಜ್ಯ ಬಿಜೆಪಿಯ ಸರ್ವೋಚ್ಚ ನಾಯಕರಾಗಿ ಅವರು ಪಕ್ಷದಲ್ಲಿ ತಮ್ಮದೆ ಆದ ಸ್ಥಾನಮಾನ ಹೊಂದಿದ್ದಾರೆ. ನಕಲಿ ಗಾಂಧಿ ಕುಟುಂಬದ ವಿರುದ್ಧ ತಿರುಗಿ ಬಿದ್ದಿರುವ ನಾಯಕರ ಯೋಗಕ್ಷೇಮದ ಬಗ್ಗೆ ನೀವು ಮೊದಲು ಲಕ್ಷ್ಯ ವಹಿಸಿಎಂದು ಕಿಡಿಕಾರಿದೆ ಮತ್ತೊಂದು ಟ್ವೀಟ್ನಲ್ಲಿ, “ಕಾಂಗ್ರೆಸ್ಪಕ್ಷ ಒಬ್ಬೊಬ್ಬ ಹಿರಿಯ ನಾಯಕರನ್ನು ಕೆಟ್ಟದಾಗಿ ನಡೆಸಿಕೊಳ್ಳುತ್ತದೆ. ಹಿರಿಯ ನಾಯಕ ಕಪಿಲ್ಸಿಬಲ್ಅವರು ನಕಲಿ ಗಾಂಧಿ ಕುಟುಂಬದ ವಿರುದ್ಧ ಮಾತನಾಡಿದರು ಎನ್ನುವ ಕಾರಣಕ್ಕೆ ಕಪಿಲ್ಸಿಬಲ್ಮನೆ ಮೇಲೆ ತನ್ನ ಕಾರ್ಯಕರ್ತರಿಂದ ದಾಳಿ ಮಾಡಿಸುತ್ತದೆ. ನಿಮ್ಮದು ಯಾವ ಟ್ರೆಂಡ್‌?” ಎಂದು ಕಾಂಗ್ರೆಸ್ಅನ್ನು ಪ್ರಶ್ನೆ ಮಾಡಿದೆ.


Please follow and like us:

Leave a Reply

Your email address will not be published. Required fields are marked *

Next Post

ಕೇಂದ್ರ ಗೃಹ ಸಚಿವ ಅಮಿತ್ ಶಾ,ವಿದ್ಯುತ್ ಸಚಿವ ಆರ್ ಕೆ ಸಿಂಗ್ ಜೊತೆ ಸಭೆ

Mon Oct 11 , 2021
ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇಂದ್ರ ವಿದ್ಯುತ್ ಸಚಿವ ಆರ್ ಕೆ ಸಿಂಗ್, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಮತ್ತು ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮ ನಿಯಮಿತ ಅಧಿಕಾರಿಗಳೊಂದಿಗೆ ದೆಹಲಿಯ ಗೃಹ ವ್ಯವಹಾರಗಳ ಸಚಿವಾಲಯದ ಕಚೇರಿಯಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ದೇಶದಲ್ಲಿ ಕಲ್ಲಿದ್ದಲು ಕೊರತೆಯ ವರದಿಗಳ ಹಿನ್ನೆಲೆಯಲ್ಲಿ ಸಂಭವನೀಯ ವಿದ್ಯುತ್ ಬಿಕ್ಕಟ್ಟಿನ ಬಗ್ಗೆ ಚರ್ಚೆ ನಡೆಯಿತು. ತೀವ್ರ ಕಲ್ಲಿದ್ದಲು ಕೊರತೆಯ ಹಿನ್ನೆಲೆಯಲ್ಲಿ ಹಲವಾರು ರಾಜ್ಯಗಳು ವಿದ್ಯುತ್ ನಿಲುಗಡೆಗೆ […]

Advertisement

Wordpress Social Share Plugin powered by Ultimatelysocial