ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚುವ ಪ್ರಸ್ತಾವ ಸರ್ಕಾರ ಮುಂದೆ ಇಲ್ಲ:ಸಚಿವ ಕೋಟ ಶ್ರೀನಿವಾಸ ಪೂಜಾರಿ

ಹಿಂದುಳಿದ ವರ್ಗಗಳು ಮತ್ತು ಜಾತಿಗಳ ಕುರಿತು ಸಂಶೋಧನೆಗಾಗಿ ಸ್ಥಾಪಿಸಿರುವ ದೇವರಾಜ ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚುವ ಪ್ರಸ್ತಾವ ಸರ್ಕಾರ ಮುಂದೆ ಇಲ್ಲ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್‌ನ ಬಿ.ಕೆ. ಹರಿಪ್ರಸಾದ್‌ ಪ್ರಶ್ನೆಗೆ ಉತ್ತರಿಸಿದ ಅವರು, ಅರಸು ಸಂಶೋಧನಾ ಸಂಸ್ಥೆಯನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಈ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಭರವಸೆ ನೀಡಿದರು.ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸಂಬಂಧಿಸಿದ ಹಲವು ಯೋಜನೆಗಳು ಕೋವಿಡ್‌ ಕಾರಣದಿಂದ ಎರಡು ವರ್ಷದಿಂದ ಕುಂಠಿತವಾಗಿವೆ. ನಾನು ಕೂಡ ಅರಸು ಜಾರಿಗೆ ತಂದ ಭೂಸುಧಾರಣಾ ಕಾಯ್ದೆಯಿಂದ ಎರಡು ಎಕರೆ ಜಮೀನು ಪಡೆದಿರುವವನು. ಅವರ ಬಗ್ಗೆ ಅಪಾರ ಗೌರವವಿದೆ ಎಂದು ಹೇಳಿದರು. ಹರಿಪ್ರಸಾದ್ ಮಾತನಾಡಿ, ಬಿಜೆಪಿ ಸರ್ಕಾರದ ಅವಧಿಯಲ್ಲಿ ದೊಡ್ಡ ಸಮುದಾಯಗಳು, ಜಾತಿಗಳಿಗೆ ನಿಗಮ ಮತ್ತು ಮಂಡಳಿಗಳನ್ನು ರಚಿಸಲಾಗಿದೆ. ಆದರೆ, ಹಿಂದುಳಿದ ವರ್ಗಗಳು, ಜಾತಿಗಳಿಗೆ ಸಂಬಂಧಿಸಿದ ಸಂಸ್ಥೆಗಳನ್ನು ಮುಚ್ಚುವ ಯತ್ನ ನಡೆದಿದೆ. ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೂ ಸರಿಯಾಗಿ ಅನುದಾನ ನೀಡುತ್ತಿಲ್ಲ. ಅಲ್ಲಿರುವ ಯೋಜನೆಗಳು ದಲ್ಲಾಳಿಗಳ ಅನುಕೂಲಕ್ಕೆ ಬಳಕೆಯಾಗುತ್ತಿವೆ’ ಎಂದು ದೂರಿದರು.

Please follow and like us:

Leave a Reply

Your email address will not be published. Required fields are marked *

Next Post

ರಮೇಶ್ ಕುಮಾರ್ ಅವರ ವಿವಾದಾತ್ಮಕ ಹೇಳಿಕೆಯನ್ನು ಖಂಡಿಸಿದ ಜಗದೀಶ್ ಶೆಟ್ಟರ್

Sat Dec 18 , 2021
ಹುಬ್ಬಳ್ಳಿ: ಸದನದಲ್ಲಿ ರಮೇಶ್ ಕುಮಾರ್​​ ಅವರಂತಹ ಹಿರಿಯರು ಆ ರೀತಿ ಹೇಳಬಾರದಾಗಿತ್ತು. ಅವರು ಯಾಕೆ ಹೇಳಿದ್ರು ಅಂತ ಅರ್ಥ ಆಗಲಿಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.ನಗದರಲ್ಲಿಂದು ಮಾತನಾಡಿದ ಅವರು, ಈ ರೀತಿ ಶಬ್ದ ಪ್ರಯೋಗ ಅಥವಾ ಮಹಿಳೆಯರ ಬಗ್ಗೆ ಮಾತನಾಡೋದು ಸರಿ ಅಲ್ಲ. ರಮೇಶ್ ಕುಮಾರ್ ಈ ಬಗ್ಗೆ ಸ್ಪಷ್ಟಿಕರಣ ಕೊಡಬೇಕು. ನಿನ್ನೆಯೇ ಆ ಬಗ್ಗೆ ಕ್ಷಮೆ ಕೇಳಬೇಕಿತ್ತು, ಇವತ್ತು ಕೇಳಿದ್ದಾರೆ.ಒಳ್ಳೆ ರೀತಿಯ ಸಂಸದೀಯ ಪಟು ಆಗಿದ್ದವರ […]

Advertisement

Wordpress Social Share Plugin powered by Ultimatelysocial