ಬಿಜೆಪಿ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ

ಬಿಜೆಪಿ ಸರ್ಕಾರದ ವಿರುದ್ಧ ಬೆಳಗಾವಿಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಬೆಳಗಾವಿ, ಡಿಸೆಂಬರ್ 16: ರಾಜ್ಯ ಬಿಜೆಪಿ ಸರಕಾರದ 40 % ಕಮಿಷನ್ ಭ್ರಷ್ಟಾಚಾರದ ವಿರುದ್ಧ ಕೆಪಿಸಿಸಿಯಿಂದ ಬೆಳಗಾವಿಯ ಸುವರ್ಣ ಸೌಧದ ಮುಂದೆ ಗುರುವಾರ ಬೃಹತ್ ಪ್ರತಿಭಟನೆ ನಡೆಯಿತು.

ಟ್ರ್ಯಾಕ್ಟರ್, ಆಟೋ ಮತ್ತು ಎತ್ತಿನ ಬಂಡಿಗಳಲ್ಲಿ ಬಂದ ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕತರು ಸುವರ್ಣ ಸೌಧದೊಳಗೆ ನುಗ್ಗಲು ಮುಂದಾದಾಗ ಪೊಲೀಸರು ಗೇಟ್‌ ಬಳಿಯೇ ತಡೆಹಿಡಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು ಬ್ಯಾರಿಕೇಡ್ ದಾಟಿ ಒಳನುಗ್ಗಲು ಪ್ರಯತ್ನಿಸಿದಾಗ ಕೆಲ ಕಾಲ ಗೊಂದಲದ ವಾತಾವರಣ ನಿರ್ಮಾಣವಾಯಿತು.

ಕೆಪಿಸಿಸ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್ ಅವರ ನೇತೃತ್ವದಲ್ಲಿ ವಿಧಾನ ಮಂಡಲದ ಉಭಯ ಸದನಗಳ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಬೆಳಗಾವಿ ಗ್ರಾಮೀಣ ಜಿಲ್ಲೆ‌ ಕಾಂಗ್ರೆಸ್ ಕಚೇರಿಯಿಂದ ಸುವರ್ಣಸೌಧದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ಪ್ರಿಯಾಂಕ್ ಖರ್ಗೆ, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಪ್ರದೇಶ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮತ್ತಿತರ ಮುಖಂಡರು ಭಾಗವಹಿಸಿದ್ದರು.

13 ಕಿ.ಮೀ. ಸಂಚಾರ:

ವಿಧಾನ ಮಂಡಲದ ಉಭಯ ಸದನಗಳ ಕಾಂಗ್ರೆಸ್ ಸದಸ್ಯರು ಹಾಗೂ ಮುಖಂಡರು ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಕಚೇರಿಯಲ್ಲಿ ಬೆಳಗ್ಗೆ 10 ಗಂಟೆಗೆ ಸಮಾವೇಶಗೊಂಡು ಪ್ರತಿಭಟನಾ ಮೆರವಣಿಗೆ ಆರಂಭಿಸಿದರು. ನಗರದಲ್ಲಿ ಸುಮಾರು 13 ಕಿ.ಮೀ. ಸಂಚರಿಸಿ ಪ್ರತಿಭಟನಾ ಮೆರವಣಿಗೆ ಸುವರ್ಣ ವಿಧಾನಸೌಧ ತಲುಪಿತು.

ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರು ಸುವರ್ಣಸೌಧದ ಮುತ್ತಿಗೆಗೆ ಪ್ರಯತ್ನಿಸಿದರು. ತಮ್ಮನ್ನು ಒಳಬಿಡುವಂತೆ ಆಗ್ರಹಿಸಿದರು. ಆದರೆ, ಪೊಲೀಸರು ಗೇಟ್ ಬಳಿಯೇ ಬ್ಯಾರಿಕೆಡ್‌ಗಳನ್ನು ಹಾಕಿ ಪ್ರತಿಭಟನಾಕಾರರನ್ನು ತಡೆದರು. ರಾಜ್ಯ ಬಿಜೆಪಿ ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮರ್, ಸಿದ್ದರಾಮಯ್ಯ ಸೇರಿದಂತೆ ಹಲವು ನಾಯಕರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸದನಕ್ಕೆ ಗೈರು:

ವಿಧಾನಮಂಡಲದ ಉಭಯ ಸದನಗಳಲ್ಲಿ ಕಾಂಗ್ರೆಸ್ ನಾಯಕರು ಗುರುವಾರ ಮಧ್ಯಾಹ್ನದವಾದರೂ ಪ್ರವೇಶಿಸಿದೆ ಪ್ರತಿಭಟನೆಯಲ್ಲಿ ನಿರತರಾಗಿದ್ದಾರೆ. ಪ್ರತಿಭಟನಾ ಮೆರವಣಿಗೆಯ ಮೂಲಕವೇ ವಿಧಾನಸೌಧ ಪ್ರವೇಶಿಸುವುದಾಗಿ ಪಟ್ಟು ಹಿಡಿದು ಎಲ್ಲ ನಾಯಕರೂ ಸುವಣರ್ಣಸೌಧಧ ಗೇಟ್ ಬಳಿಯೇ ಪ್ರತಿಭಟನಾ ಧರಣಿ ನಡೆಸಿದ್ದರಿಂದ ಗುರುವಾರದ ಕಾರ್ಯಕಲಾಪ ಸುಗಮವಾಗಿ ಆರಂಭವಾಗಲಿಲ್ಲ.

ಪಟ್ಟು ಹಿಡಿದು ಒಳಗೆ ಹೋದ ನಾಯಕರು:

ಪ್ರತಿಭಟನಾ ಮೆರವಣಿಗೆಯಲ್ಲಿಯೇ ಸುವರ್ಣ ಸೌಧಕ್ಕೆ ಹೋಗುತ್ತೇವೆ ಎಂದು ಕಾಂಗ್ರೆಸ್ ನಾಯಕರು ಪಟ್ಟು ಹಿಡಿದು ಗೇಟ್ ಬಳಿಯೇ ಸುಮಾರು ಒಂದು ತಾಸಿಗೂ ಹೆಚ್ಚು ಕಾಲ ಧರಣಿ ನಡೆಸಿದರು. ಅಂತಿಮವಾಗಿ ಡಿ ಕೆ ಶಿವಕುಮಾರ್, ಸಿದ್ದರಾಮಯ್ಯ ಸೇರಿದಂತೆ ಪ್ರಮುಖರು ಮಾತ್ರ ಕುಳಿತಿದ್ದ ಟ್ರ್ಯಾಕ್ಟರ್ ಗೆ ಮಾತ್ರ ಒಳಗೆ ಪ್ರವೇಶಿಸಲು ಅನುಮತಿ ನೀಡಲಾಯಿತು. ಹೆಬ್ಬಾಳದ ಕಾಂಗ್ರೆಸ್ ಶಾಸಕ ಬೈರತಿ ಸುರೇಶ್ ಟ್ರ್ಯಾಕ್ಟರ್ ಚಾಲನೆ ಮಡಿದ್ದು ಗಮನ ಸೆಳೆಯಿತು.

Please follow and like us:

Leave a Reply

Your email address will not be published. Required fields are marked *

Next Post

ಗುಜರಾತ್ ನ ಕಾರ್ಖಾನೆಯೊಂದರಲ್ಲಿ ಭಾರೀ ಸ್ಪೋಟ

Thu Dec 16 , 2021
ಪಂಚಮಹಲ್ : ಕಾರ್ಖಾನೆಯೊಂದರಲ್ಲಿ ಸ್ಪೋಟ ಸಂಭವಿಸಿ 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ0 ಗುಜರಾತ್​​ನ ಪಂಚಮಹಲ್​​ ಜಿಲ್ಲೆಯಲ್ಲಿರುವ ಗೋಘಾಂಬಾದಲ್ಲಿ ನಡೆದಿದೆ.ಫ್ಯಾಕ್ಟರಿಯಲ್ಲಿ ಉಂಟಾದ ಸ್ಫೋಟದಿಂದ ಭಾರೀ ಶಬ್ದ ಕೇಳಿ ಬಂದಿದ್ದು, ಕಾರ್ಖಾನೆ ಹೊತ್ತಿ ಉರಿದಿದೆ. ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಗೋಘಾಂಭಾದಲ್ಲಿರುವ ಫ್ಲೋರೋಕೆಮಿಕಲ್ಸ್ ಲಿಮಿಟೆಡ್​ ನಲ್ಲಿ ಸ್ಫೋಟದಲ್ಲಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸರು ಹೇಳಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸಿವೆ. […]

Advertisement

Wordpress Social Share Plugin powered by Ultimatelysocial