ಬಿ ಖಾತೆ ಆಸ್ತಿಗಳನ್ನು ಸಕ್ರಮಗೊಳಿಸೋದಾಗಿ ಸಿಎಂ ಬೊಮ್ಮಾಯಿ ಘೋಷಣೆ

ಬೆಂಗಳೂರಿನ 'ಬಿ ಖಾತೆ ಆಸ್ತಿಗಳ ಮಾಲೀಕ'ರಿಗೆ ಗುಡ್ ನ್ಯೂಸ್: ಬಿ ಖಾತೆ ಆಸ್ತಿಗಳನ್ನು ಸಕ್ರಮಗೊಳಿಸೋದಾಗಿ ಸಿಎಂ ಬೊಮ್ಮಾಯಿ ಘೋಷಣೆ

ಬೆಳಗಾವಿ: ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಇರುವ ‘ಬಿ’ ಖಾತೆಗಳನ್ನು ಸಕ್ರಮಗೊಳಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿಧಾನಪರಿಷತ್‍ನಲ್ಲಿ ಸದಸ್ಯ ಎನ್.ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ ಅವರು ಅಕ್ರಮ-ಸಕ್ರಮ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಲ್ಲೊಂದು ದೂರು ದಾಖಲಾಗಿದೆ.

ಈ ದೂರು ದಾಖಲಾಗಿದ್ದರಿಂದ ಅಕ್ರಮ-ಸಕ್ರಮ ಸಂಪೂರ್ಣ ಸ್ಥಗಿತವಾಗಿದೆ. ಅದನ್ನು ಇತ್ಯರ್ಥಗೊಳಿಸುವಲ್ಲಿ ರಾಜ್ಯ ಸರಕಾರ ತುಂಬಾ ಗಂಭೀರ ಪ್ರಯತ್ನ ನಡೆಸಿದೆ ಮತ್ತು ದೂರುದಾರರ ಬೇಡಿಕೆಗಳನ್ನು ಆಲಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

ಬೆಂಗಳೂರು ದಿನೇದಿನೇ ಬೆಳೆಯುತ್ತಿದ್ದು,ಜನದಟ್ಟಣೆ ಹೆಚ್ಚಾಗ್ತಾ ಇದೆ ಮತ್ತು 110 ಹಳ್ಳಿಗಳನ್ನು ಬೆಂಗಳೂರು ವ್ಯಾಪ್ತಿಗೆ ಸೇರಿಸಿಕೊಂಡಿದ್ದೇವೆ. ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ 8 ಮುನ್ಸಿಪಾಲಿಟಿಗಳನ್ನು ಸೇರಿಸಿಕೊಳ್ಳಲಾಗಿತ್ತು. ನಗರ ಪ್ರದೇಶದ ಜೊತೆಗೆ ಹಳ್ಳಿಗಳಲ್ಲಿಯೂ ಮೂಲಸೌಕರ್ಯ ಕಲ್ಪಿಸುವ ಸವಾಲು ಇದೆ;ಅಲ್ಲಿಯೂ ಸೌಕರ್ಯ ಒದಗಿಸಲಾಗುವುದು ಎಂದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 18,52,802 ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿರುವ ವಿವಿಧ ರೀತಿಯ ಉಪಯೋಗದ ಕಟ್ಟಡಗಳನ್ನ ವಿವಿಧ ವರ್ಗಗಳಾಗಿ ವಿಂಗಡಿಸಲಾಗಿದ್ದು,ಪ್ರತಿಯೊಂದು ವರ್ಗಕ್ಕೂ ಪ್ರತ್ಯೇಕ ದರಗಳಲ್ಲಿ ಆಸ್ತಿ ತೆರಿಗೆ ನಿಗದಿಪಡಿಸಲಾಗಿದೆ. ವಾಣಿಜ್ಯ ಕಟ್ಟಡಗಳಿಗೆ ಯೂನಿಟ್ ಏರಿಯಾ ವ್ಯಾಲ್ಯೂ ಮೌಲ್ಯದ ಶೇ.25ರಷ್ಟು ತೆರಿಗೆ ಹಾಗೂ ವಸತಿ ಕಟ್ಟಡಗಳಿಗೆ ಶೇ.20ರಷ್ಟು ತೆರಿಗೆ ವಿಧಿಸಲಾಗುತ್ತಿದೆ ಎಂದು ಅವರು ವಿವರಿಸಿದರು.

13.56ಲಕ್ಷ ಸ್ವತ್ತುಗಳಿಗೆ ಆಸ್ತಿ ತೆರಿಗೆ ಘೋಷಣೆ: 2021-22ನೇ ಸಾಲಿನಲ್ಲಿಈವರೆಗೂ ಸ್ವಯಂ ಘೋಷಣೆ ಆಸ್ತಿ ತೆರಿಗೆ ಪದ್ದತಿ ಅಡಿಯಲ್ಲಿ ಒಟ್ಟು 13,56,087 ಸ್ವತ್ತುಗಳಿಗೆ ಆಸ್ತಿ ತೆರಿಗೆ ಘೋಷಿಸಿಕೊಂಡು ಆಸ್ತಿತೆರಿಗೆ ಪಾವತಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿವರಿಸಿದರು.

ಇದರಲ್ಲಿ 97,057 ವಾಣಿಜ್ಯ ಕಟ್ಟಡಗಳು,9112 ಬಹುಮಹಡಿ ವಸತಿ ಸಂಕೀರ್ಣಗಳು ಮತ್ತು 12,59,030 ವಸತಿಯೋಗ್ಯ ಮನೆಗಳಿವೆ ಎಂದು ಅವರು ತಿಳಿಸಿದರು.

ತಪ್ಪು ಮಾಹಿತಿ ನೀಡಿ ಆಸ್ತಿ ತೆರಿಗೆ ಘೋಷಿಸಿಕೊಂಡಿರುವ 10516 ಕಟ್ಟಡಗಳಿಗೆ ಆಸ್ತಿತೆರಿಗೆ ಪುನರ್ ಪರಿಷ್ಕರಿಸಿ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದ್ದು, ಈ ಪ್ರಕರಣಗಳಲ್ಲಿ 56.14ಕೋಟಿ ರೂ. ಆಸ್ತಿ ತೆರಿಗೆ ವಸೂಲು ಮಾಡಲಾಗಿದೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅರಕಲಗೂಡು: 50 ಸಾವಿರ ಶ್ರೀಗಂಧ ಗಿಡ ಬೆಳೆಸಿದ ಕೃಷಿಕ

Thu Dec 23 , 2021
ಅರಕಲಗೂಡು: ಆಡು ಮುಟ್ಟದ ಸೊಪ್ಪಿಲ್ಲ ಎಂಬಂತೆ ರಂಗಸ್ವಾಮಿ ನಡೆಸದ ಕೃಷಿ ಇಲ್ಲ. ಯಾವುದೇ ಹೊಸ ಕೃಷಿ ಬಗ್ಗೆ ತಿಳಿದರೂ ತಮ್ಮ ಕೃಷಿ ಕ್ಷೇತ್ರದಲ್ಲಿ ಅದನ್ನು ಅಳವಡಿಸುವ ಪ್ರಯೋಗಶೀಲರು. ತಾಲ್ಲೂಕಿನ ದೊಡ್ಡಮಗ್ಗೆಯ ಪ್ರಗತಿಪರ ಕೃಷಿಕ ಎಂ.ಸಿ. ರಂಗಸ್ವಾಮಿ ಅವರ ಕೃಷಿ ಕ್ಷೇತ್ರದ ಸಾಧನೆ ಇತರರಿಗೆ ಮಾದರಿಯಾಗಿದೆ. 400 ಎಕರೆ ಪ್ರದೇಶದಲ್ಲಿ ಇವರು ನಡೆಸಿರುವ ಕೃಷಿ ಎಂಥವರನ್ನೂ ಬೆರಗಾಗಿಸುತ್ತದೆ. 100 ಎಕರೆ ಪ್ರದೇಶದಲ್ಲಿ ಕಾಫಿ, 100 ಎಕರೆ ಅಡಿಕೆ, ಅಡಿಕೆಯಲ್ಲಿ ಮಿಶ್ರ ಬೆಳೆಯಾಗಿ 50 […]

Advertisement

Wordpress Social Share Plugin powered by Ultimatelysocial