ಬಸ್ ಪ್ರಯಾಣ ದರ ಏರಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಈಗಾಗಲೇ ಬಿಎಂಟಿಸಿ ಪ್ರಸ್ತಾವನೆ ಸಲ್ಲಿಸಿದೆ.

 

ಬೆಂಗಳೂರು, ಏಪ್ರಿಲ್ 13: ದೇಶದಲ್ಲಿ ಇಂಧನ ದರ ಏರಿಕೆ ಒಂದು ಕಡೆಯಾದರೆ, ಮತ್ತೊಂದು ಕಡೆ ದಿನನಿತ್ಯ ಬಳಕೆಯ ವಸ್ತುಗಳ ಬೆಲೆಯೂ ಗಗನನಕ್ಕೆ ಏರುತ್ತಿದೆ. ಇದರಿಂದ ಜನಸಾಮಾನ್ಯರ ಬದುಕು ದಿನದಿಂದ ದಿನಕ್ಕೆ ದುಸ್ತರವಾಗುತ್ತಿದೆ.

ಇದೆಲ್ಲದರ ನಡುವೆ ಕರ್ನಾಟಕ ರಾಜಧಾನಿ ಬೆಂಗಳೂರಿಗರ ಜೀವನಾಡಿ ಎಂಬ ಹೆಗ್ಗಳಿಕೆ ಪಾತ್ರವಾಗಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಬಸ್ ಪ್ರಯಾಣ ದರ ಏರಿಕೆಯಾಗಲಿದ್ದು, ಬಿಎಂಟಿಸಿ ಬಸ್‌ನಲ್ಲಿ ಓಡಾಡುವ ಜನರಿಗೆ ಶಾಕ್ ದರ ಏರಿಕೆ ಶಾಕ್ ತಟ್ಟಲಿದೆ.

ಬಸ್ ಪ್ರಯಾಣ ದರ ಏರಿಕೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಈಗಾಗಲೇ ಬಿಎಂಟಿಸಿ ಪ್ರಸ್ತಾವನೆ ಸಲ್ಲಿಸಿದೆ. 2 ಬಾರಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಮೊದಲ ಬಾರಿ ಶೇ.20ರಷ್ಟು ಬಸ್ ಟಿಕೆಟ್ ದರ ಏರಿಕೆಗೆ ಪ್ರಸ್ತಾಪಿಸಿತ್ತು. ಈಗ 2ನೇ ಪ್ರಸ್ತಾವನೆಯಲ್ಲಿ ಶೇ.35ರಷ್ಟು ದರ ಏರಿಕೆಗೆ ಬೇಡಿಕೆ ಇಟ್ಟಿದೆ.

ಕಳೆದ ವಾರವಷ್ಟೇ ಬಿಎಂಟಿಸಿ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಒಪ್ಪಿದರೆ ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳವಾಗುವ ಸಾಧ್ಯತೆ ಇದೆ.

ಏಪ್ರಿಲ್ ತಿಂಗಳಿನಲ್ಲಿ ಇಂಧನ, ಗ್ಯಾಸ್, ಹೋಟೆಲ್ ತಿಂಡಿ ದರ ಏರಿಕೆ ಬೆನ್ನಲ್ಲೇ ಜನರಿಗೆ ಬಿಎಂಟಿಸಿ ಟಿಕೆಟ್ ದರ ಹೆಚ್ಚಳದ ಆತಂಕ ಶುರುವಾಗಿದ್ದು, ಸತತವಾಗಿ ಭಾರೀ ನಷ್ಟದಲ್ಲಿ ಮುನ್ನಡೆಯುತ್ತಿರುವ ಬಿಎಂಟಿಸಿ ಮೇಲೆತ್ತಲು ಪ್ರಯಾಣ ದರ ಏರಿಕೆ ಅಗತ್ಯ ಎಂದು ಪ್ರಯಾಣ ಟಿಕೆಟ್ ದರ ಹೆಚ್ಚಿಸಲು ಮುಂದಾಗಿದೆ.

ಈ ಬಾರಿ ಬಸ್ ದರ ಏರಿಸದಿದ್ದರೆ ಬಸ್ ಓಡಿಸುವುದು ಕಷ್ಟ ಎಂದು ಸಿಎಂ ಬಸವರಾಜ ಬೊಮ್ಮಾಯಿಯವರಿಗೆ ಬಿಎಂಟಿಸಿ ಸಂಸ್ಥೆ ಮನವರಿಕೆ ಮಾಡಿಕೊಟ್ಟಿದೆ. ಸದ್ಯ ಈ ಬಗ್ಗೆ ಪರಿಶೀಲಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಟಿಕೆಟ್ ದರ ಶೇ.35ರಷ್ಟು ದರ ಏರಿಕೆ ಅಸಾಧ್ಯ, ಅಧಿಕಾರಿಗಳ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇನೆ ಎಂದು ಸಿಎಂ ಬೊಮ್ಮಾಯಿ ಟಿಕೆಟ್ ದರ ಏರಿಕೆ ಬಗ್ಗೆ ತಮ್ಮ ನಿಲುವು ಸ್ಪಷ್ಟಪಡಿಸಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿಗಳು ಒಪ್ಪಿದರೆ ಜನರ ಜೇಬಿಗೆ ಕತ್ತರಿ ಬೀಳುವುದಂತು ಖಂಡಿತ.

ಬಿಎಂಟಿಸಿ ಬಸ್ ದರ ಶೇ.35ರಷ್ಟು ಏರಿಕೆಯಾದರೆ ಸ್ಟೇಜ್ (ಹಂತ) ವೈಸ್ ದರವೂ ಹೆಚ್ಚಾಗಲಿದೆ. ಆರಂಭಿಕ ದರ ಈಗ 5 ರೂ. ಇದ್ದು, ಶೇ.35 ಹೆಚ್ಚಾದ ನಂತರ 6.75 ಪೈಸೆ ಆಗಲಿದೆ. ಈ ವೇಳೆ ಚಿಲ್ಲರೆ ಸಮಸ್ಯೆ ಒಡ್ಡಿ ಬಿಎಂಟಿಸಿ 7 ರೂ.ಗೆ ಹೆಚ್ಚಳ ಮಾಡಬಹುದು. ಇನ್ನು ಇದೇ ವೇಳೆ 10 ರೂ. ಇರುವ ದರ 13 ರೂ. 15 ಇರುವ ದರ 20 ರೂ. ಹೀಗೆ ಏರಿಕೆ ಆಗಲಿದೆ. ಬಿಎಂಟಿಸಿ ಬಸ್ ಪ್ರಯಾಣ ದರ ಹೆಚ್ಚಳ ಪ್ರಸ್ತಾವನೆ ಜಾರಿಗೆ ಬಂದರೆ ಪ್ರಯಾಣಿಕರ ಜೇಬಿಗೆ ಕತ್ತರಿ ಬೀಳಲಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ!

Wed Apr 13 , 2022
  ಉಡುಪಿ: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಸಚಿವ ಈಶ್ವರಪ್ಪ ಮತ್ತು ಆಪ್ತರಾದ ಬಸವರಾಜ, ರಮೇಶ್ ವಿರುದ್ಧ ಎಫ್ ಐ ಆರ್ ದಾಖಲಾಗಿದೆ ಎಂದು ವರದಿ ತಿಳಿಸಿದೆ. ಮೃತರ ಸಂಬಂಧಿ ಬೆಳಗಾವಿಯ ಪ್ರಶಾಂತ ಗೌಡಪ್ಪ ಪಾಟೀಲ್ ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಬುಧವಾರ ಪ್ರಕರಣ ದಾಖಲು ಮಾಡಲಾಗಿದೆ. ಬೆಳಗಾವಿ ಮೂಲದ ಗುತ್ತಿಗೆದಾರ ಮತ್ತು ಬಿಜೆಪಿ ಕಾರ್ಯಕರ್ತ ಎನ್ನಲಾದ ಸಂತೋಷ್‌ ಪಾಟೀಲ್‌ ಉಡುಪಿಯಲ್ಲಿ ಮಂಗಳವಾರ ನಿಗೂಢವಾಗಿ ಸಾವನ್ನಪ್ಪಿದ್ದರು. […]

Advertisement

Wordpress Social Share Plugin powered by Ultimatelysocial