ಬಾಲಿವುಡ್ ನಟ ʻಸಲ್ಮಾನ್ ಖಾನ್ʼಗೆ ಕೊಲೆ ಬೆದರಿಕೆ ಕರೆ; 16 ವರ್ಷದ ಬಾಲಕ ಅರೆಸ್ಟ್ !

ಮುಂಬೈ: ಪೊಲೀಸ್ ನಿಯಂತ್ರಣ ಕೊಠಡಿಗೆ ಕರೆ ಮಾಡಿ ಬಾಲಿವುಡ್ ನಟ ಸಲ್ಮಾನ್ ಖಾನ್ಅ ವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಕ್ಕಾಗಿ ನೆರೆಯ ಥಾಣೆ ಜಿಲ್ಲೆಯ 16 ವರ್ಷದ ಬಾಲಕನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.

ಮುಂಬೈ ಪೊಲೀಸರ ಮುಖ್ಯ ನಿಯಂತ್ರಣ ಕೊಠಡಿಗೆ ಸೋಮವಾರ ಸಲ್ಮಾನ್ ಖಾನ್ ಅವರನ್ನು ಕೊಲ್ಲುವುದಾಗಿ ಬೆದರಿಕೆ ಕರೆ ಬಂದಿದೆ. ಈ ಹಿನ್ನೆಲೆ, ಪೊಲೀಸರು ತನಿಖೆ ಆರಂಭಿಸಿದ್ದು, ತಾಂತ್ರಿಕ ಸಹಾಯದಿಂದ ಅವರು ಮುಂಬೈನಿಂದ 70 ಕಿಮೀ ದೂರದಲ್ಲಿರುವ ಥಾಣೆ ಜಿಲ್ಲೆಯ ಶಹಾಪುರದಿಂದ ಕರೆ ಬಂದ ಸಂಖ್ಯೆಯನ್ನು ಟ್ರ್ಯಾಕ್ ಮಾಡಿದರು ಎಂದು ಅಧಿಕಾರಿ ತಿಳಿಸಿದ್ದಾರೆ.

ಪೊಲೀಸ್ ತಂಡ ಶಹಾಪುರಕ್ಕೆ ತೆರಳಿ ಅಲ್ಲಿ 16 ವರ್ಷದ ಬಾಲಕ ಬೆದರಿಕೆ ಕರೆ ಮಾಡಿರುವುದು ಪತ್ತೆಯಾಯಿತು ಎಂದು ಅವರು ಹೇಳಿದರು. ರಾಜಸ್ಥಾನ ಮೂಲದ ಬಾಲಕನನ್ನು ಬಂಧಿಸಲಾಗಿದೆ. ಮುಂದಿನ ಕಾನೂನು ಪ್ರಕ್ರಿಯೆಗಾಗಿ ಮುಂಬೈನ ಆಜಾದ್ ಮೈದಾನ ಪೊಲೀಸರಿಗೆ ಹಸ್ತಾಂತರಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.

ಸಲ್ಮಾನ್ ಖಾನ್‌ಗೆ ಬೆದರಿಕೆ ಹಾಕಿರುವ ಹುಡುಗನ ಉದ್ದೇಶವನ್ನು ಖಚಿತಪಡಿಸಿಕೊಳ್ಳಲು ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಇಂದು ಸಂಜೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ : ಐವರು ಸಚಿವರಿಗೆ ಟಿಕೆಟ್ ಮಿಸ್?

Tue Apr 11 , 2023
ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಸಂಬಂಧ ದೆಹಲಿಯಲ್ಲಿ ಕಳೆದ ಎರಡು ದಿನಗಳಿಂದ ಸಭೆ ನಡೆಯುತ್ತಿದ್ದು, ಇಂದು ಸಂಜೆ ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟವಾಗುವ ಸಾಧ್ಯತೆ ಇದೆ. ಈ ನಡುವೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಐವರು ಹಾಲಿ ಸಚಿವರಿಗೆ ಟಿಕೆಟ್ ಮಿಸ್ ಆಗುವ ಸಾಧ್ಯತೆ ಇದೆ. ಸರ್ವೆ ವರದಿ ಹಾಗೂ ವಯಸ್ಸಿನ ಆಧಾರದಲ್ಲಿ ಐವರು ಸಚಿವರಿಗೆ ಬಿಜೆಪಿ ಟಿಕೆಟ್ […]

Advertisement

Wordpress Social Share Plugin powered by Ultimatelysocial