ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ.

ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ನಟನೆಯ ‘ಪಠಾಣ್’ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ಭರ್ಜರಿ ಕಲೆಕ್ಷನ್ ಮಾಡುತ್ತಿದೆ. ಸಿನಿಮಾ ರಿಲೀಸ್ ಆಗಿ ಒಂದೇ ವಾರಕ್ಕೆ ಐನೂರು ಕೋಟಿ ರೂಪಾಯಿ ಗಳಿಕೆ ಮಾಡಿದೆ. ಬಾಲಿವುಡ್ ಗೆ ಒಂದು ರೀತಿಯಲ್ಲಿ ಜೀವ ತುಂಬಿದ ಸಿನಿಮಾ ಕೂಡ ಇದಾಗಿದೆ.

ಪಠಾಣ್ ವಿಷಯದಲ್ಲಿ ಬಾಲಿವುಡ್ ಸಂಭ್ರಮದಲ್ಲಿದ್ದರೆ, ದಕ್ಷಿಣದ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ವ್ಯಂಗ್ಯವಾಡಿದ್ದಾರೆ. ತಮ್ಮ

ವರ್ಮಾ ತಮ್ಮ ಮಾತಿನಲ್ಲಿ ಕೆಜಿಎಫ್ 2 ಚಿತ್ರವನ್ನು ಎಳೆತಂದಿದ್ದಾರೆ. ಪಠಾಣ್ ಗಳಿಕೆಯ ವಿಚಾರದಲ್ಲಿ ಕೆಜಿಎಫ್ 2 ಸಿನಿಮಾವನ್ನು ಹಿಂದಿಕ್ಕಿದೆ ಎಂದು ಬಣ್ಣಿಸಲಾಗಿತ್ತು. ಕೆಜಿಎಫ್ 2 ಚಿತ್ರಕ್ಕಿಂತಲೂ ಪಠಾಣ್ ಹಿಂದಿಯಲ್ಲಿ ಹೆಚ್ಚು ಹಣ ಗಳಿಕೆ ಮಾಡಿದೆ ಎಂದು ಸಿನಿ ಪಂಡಿತರು ಲೆಕ್ಕಾಚಾರ ಹಾಕಿದ್ದರು. ಆದರೆ, ಈ ಲೆಕ್ಕಾಚಾರ ವರ್ಮಾಗೆ ಸರಿ ಬಂದಂತೆ ಕಾಣುತ್ತಿಲ್ಲ. ಹಾಗಾಗಿಯೇ ಶಾರುಖ್ ಮತ್ತು ಯಶ್ ಗೆ ಹೋಲಿಕೆ ಮಾಡಿ, ಪಠಾಣ್ ಚಿತ್ರಕ್ಕೆ ಟಾಂಗ್ ಕೊಟ್ಟಿದ್ದಾರೆ.

ಶಾರುಖ್ ಖಾನ್ ಬಾಲಿವುಡ್ ನಲ್ಲಿ ಬೇರೂರಿರುವ ನಟ. ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ಆದರೆ, ಯಶ್ ಬಾಲಿವುಡ್ ಗೆ ಏನೂ ಅಲ್ಲ. ಹೊಸಬ. ಬಾಲಿವುಡ್ ಗೆ ಪರಿಚಯವೇ ಇಲ್ಲದ ಯಶ್ ಐನೂರು ಕೋಟಿ ಗಳಿಕೆ ಮಾಡಿದ್ದಾರೆ. ಹಾಗಾಗಿ ಶಾರುಖ್ ಗೆಲುವು ನನಗೆ ಗೆಲುವು ಅನಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ನನಗೆ ಅದೊಂದು ಗೆಲುವೂ ಅನಿಸುವುದಿಲ್ಲ ಎಂದು ಬರೆದುಕೊಂಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಡೆತ್ ನೋಟ್ ಬರೆದಿಟ್ಟು ಜಗತ್ತಿಗೆ ವಿದಾಯ ಹೇಳಲು ನಿರ್ಧರಿಸಿದ್ದೆ;

Thu Feb 2 , 2023
ತಮ್ಮ ತೀಕ್ಷ್ಣ ಮಾತುಗಳಿಂದಲೇ ಸದಾ ಸುದ್ದಿಯಲ್ಲಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿಯವರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್ ವೊಂದು ವೈರಲ್ ಆಗಿದೆ. ಬೆಂಗಳೂರು: ತಮ್ಮ ತೀಕ್ಷ್ಣ ಮಾತುಗಳಿಂದಲೇ ಸದಾ ಸುದ್ದಿಯಲ್ಲಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ಕಿರಿಕ್ ಕೀರ್ತಿಯವರು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದ ಪೋಸ್ಟ್ ವೊಂದು ವೈರಲ್ ಆಗಿದೆ. ಸಾಮಾಜಿಕ ಜಾಲತಾಣ ಫೇಸ್ ಬುಕ್ ನಲ್ಲಿ ಪೋಸ್ಟ್ ಹಾಕಿದ್ದ ಕಿರಿಕ್ ಕೀರ್ತಿಯವರು, ನಾನು ಈ ಜಗತ್ತಿಗೆ ವಿದಾಯ […]

Advertisement

Wordpress Social Share Plugin powered by Ultimatelysocial