ಬಾಲಿವುಡ್ ಲವ್ ಬಡ್ಸ್ ಸಿದ್ದಾರ್ಥ್​ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ಹಸೆಮಣೆ ಏರುತ್ತಿದ್ದಾರೆ.

ಬಾಲಿವುಡ್ ಲವ್ ಬಡ್ಸ್ ಸಿದ್ದಾರ್ಥ್​ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ಹಸೆಮಣೆ ಏರುತ್ತಿದ್ದಾರೆ. ರಾಜಸ್ಥಾನದಲ್ಲಿ ಈ ಜೋಡಿಯ ಮದುವೆಗೆ ಸಕಲ ತಯಾರಿ ನಡೆಯುತ್ತಿದೆ. ಸೂರ್ಯಗಡ ಪ್ಯಾಲೇಸ್​ನಲ್ಲಿ ಕಿಯಾರಾ ಅಡ್ವಾಣಿ ಹಾಗೂ ಸಿದ್ದಾರ್ಥ್​ ಮಲ್ಹೋತ್ರಾ ಸಪ್ತಪದಿ ತುಳಿಯಲಿದ್ದಾರೆ.

ಸಿದ್ದಾರ್ಥ್ ಹಾಗೂ ಕಿಯಾರ ಮದುವೆಯ ಕುರಿತು ಸಾಕಷ್ಟು ಸುದ್ದಿಗಳು ಹರಿದಾಡುತ್ತಿದ್ದರು ಜೋಡಿಗಳು ಮಾತ್ರ ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಈ ನಡುವೆ ನಟಿ ಕಂಗನಾ ರಣಾವತ್, ‘ಇವರಿಬ್ಬರದ್ದು ನಿಜವಾದ ಪ್ರೀತಿ’ ಎಂದು ಹಾಡಿ ಹೊಗಳಿದ್ದಾರೆ. ದಾಂಪತ್ಯ ಜೀವನಕ್ಕೆ ಕಾಲಿಡುತ್ತಿರುವ ಈ ಜೋಡಿಗೆ ಅಭಿಮಾನಿಗಳು ಅಭಿನಂದನೆ ತಿಳಿಸುತ್ತಿದ್ದಾರೆ.

ಸಿದ್ದಾರ್ಥ್​ ಮಲ್ಹೋತ್ರಾ ಹಾಗೂ ಕಿಯಾರಾ ಅಡ್ವಾಣಿ ಅವರು ಜೊತೆಯಾಗಿ ಇರುವ ಅಪರೂಪದ ವಿಡಿಯೋವನ್ನು ಕಂಗನಾ ರಣಾವತ್​ ಅವರು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಶೇರ್​ ಮಾಡಿಕೊಂಡಿದ್ದಾರೆ. ‘ಈ ಜೋಡಿ ಎಷ್ಟು ಚೆನ್ನಾಗಿ ಕಾಣುತ್ತಿದೆ. ಚಿತ್ರರಂಗದಲ್ಲಿ ನಾವು ನಿಜವಾದ ಪ್ರೀತಿಯನ್ನು ನೋಡುವುದು ತುಂಬ ವಿರಳ’ ಎಂದು ಕಂಗನಾ ಅವರು ಕ್ಯಾಪ್ಷನ್​ ನೀಡಿದ್ದಾರೆ. ಜೊತೆಗೆ ಕಿಯಾರಾ ಅಡ್ವಾಣಿ ಮತ್ತು ಸಿದ್ದಾರ್ಥ್​ ಮಲ್ಹೋತ್ರಾ ಅವರನ್ನು ಟ್ಯಾಗ್​ ಮಾಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಡೆತಡೆಗಳ ದಾಟಿ ಗೆದ್ದ 'ತನುಜಾ'

Sat Feb 4 , 2023
2020ರ ಸಮಯದಲ್ಲಿ ಇಡೀ ದೇಶವೇ ಕೊರೋನಾ ಹಾವಳಿಯಿಂದ ತತ್ತರಿಸಿ ಹೋಗಿತ್ತು. ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕುಗ್ರಾಮದ ಹುಡುಗಿ ತನುಜಾ ಬೆಂಗಳೂರಿಗೆ ಬಂದು ನೀಟ್‌ ಪರೀಕ್ಷೆ ಬರೆದಿದ್ದು, ದೊಡ್ಡ ಸುದ್ದಿಯಾಗಿತ್ತು. ಅಂದಿನ ಮುಖ್ಯಮಂತ್ರಿ ಬಿ. ಎಸ್‌ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ. ಸುಧಾಕರ್‌ ಮತ್ತು ಸರ್ಕಾರ ತನುಜಾಳಿಗೆ ನೀಟ್‌ ಪರೀಕ್ಷೆ ಬರೆಯಲು ಅನುಕೂಲ ಮಾಡಿತ್ತು. ಸಾಕಷ್ಟು […]

Advertisement

Wordpress Social Share Plugin powered by Ultimatelysocial