ಬೆಂಗಳೂರನ್ನು ಅಂತರಾಷ್ಟ್ರೀಯ ನಗರವಾಗಿ ಅಭಿವೃದ್ಧಿಪಡಿಸಲಾಗಿದೆ !

 

ಬೆಂಗಳೂರು: ಬೆಂಗಳೂರನ್ನು ಅಂತರಾಷ್ಟ್ರೀಯ ನಗರವಾಗಿ ಅಭಿವೃದ್ಧಿಪಡಿಸಲಾಗಿದೆ ಎಂದು ಪ್ರತಿಪಾದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಅಮೃತ ನಗರೋತ್ಥಾನ ಯೋಜನೆಯಡಿ ನಗರದ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪದ್ಮನಾಭನಗರ ಕ್ಷೇತ್ರದ ವಾಜಪೇಯಿ ಆಟದ ಮೈದಾನದಲ್ಲಿ ರವಿವಾರ ಹಮ್ಮಿಕೊಂಡಿದ್ದ ಜಾನಪದ ಜಾತ್ರೆಯ ಸಮಾರೋಪ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.

ಬೆಂಗಳೂರು ಅಂತರಾಷ್ಟ್ರೀಯ ನಗರವಾಗಿ ಅಭಿವೃದ್ಧಿಗೊಂಡಿದೆ. ಅಮೃತ ನಗರೋತ್ಥಾನ ಯೋಜನೆಯಡಿ ನಗರದ ಅಭಿವೃದ್ಧಿಗೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಲಾಗುತ್ತಿದೆ. ಬೆಂಗಳೂರು ಸುಂದರ ನಗರವಾಗಿದೆ, ಐಟಿ, ಬಿಟಿಯ ಜಾಗತಿಕ ಕೇಂದ್ರವಾಗಿದೆ ಮತ್ತು ಆರ್ಥಿಕ ರಾಜಧಾನಿಯಾಗಿಯೂ ಹೊರಹೊಮ್ಮುತ್ತಿದೆ ಎಂದು ಹೇಳಿದರು.

ಆರ್ಥಿಕ ಕ್ಷೇತ್ರದಲ್ಲಿ ಕೂಡ ಅಭಿವೃದ್ಧಿ ಹೊಂದುತ್ತಿರುವ ನಗರವಾಗಿ ಬೆಂಗಳೂರು ಬೆಳೆಯುತ್ತಿದ್ದು, ವಿಶ್ವದ ಗಮನ ಸಳೆಯುತ್ತಿದೆ. ಹೂಡಿಕೆದಾರರರು ಬಂಡಾಳ ಹೂಡಲು ಆಸಕ್ತಿ ತೋರಿದ್ದಾರೆ. ಶೇ. 47ರಷ್ಟು ಎಫ್ಡಿಐ ಕರ್ನಾಟಕ್ಕೆ ಬಂದಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ನಡೆದಿರುವ ಹಿಂಸಾಚಾರ ಹಿನ್ನೆಲೆ ನಗರದಲ್ಲಿ ನಿಷೇಧಾಜ್ಞೆ !

Mon Apr 11 , 2022
  ಭೋಪಾಲ್, ಏಪ್ರಿಲ್ 11: ಮಧ್ಯಪ್ರದೇಶದ ಖರ್ಗೊನ್ ಪ್ರದೇಶದಲ್ಲಿ ಭಾನುವಾರದ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ನಡೆದಿರುವ ಹಿಂಸಾಚಾರ ಹಿನ್ನೆಲೆ ನಗರದಲ್ಲಿ ನಿಷೇಧಾಜ್ಞೆ ಅನ್ನು ಜಾರಿಗೊಳಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಖರ್ಗೊನ್ ನಗರದಲ್ಲಿ ನಡೆದಿರುವ ಹಿಂಸಾಚಾರದ ಹಿನ್ನೆಲೆ ನಗರದಲ್ಲಿ ಹೆಚ್ಚು ಜನರು ಸೇರುವುದುನ್ನು ನಿರ್ಬಂಧಿಸಲಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ನಗರಾದ್ಯಂತ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಹಿಂದೂ ದೇವರು ರಾಮನ ಜನ್ಮದಿನದ ಹಿನ್ನೆಲೆಯಲ್ಲಿ ರಾಮ ನವಮಿ ಆಚರಣೆಯ ಮೆರವಣಿಗೆ […]

Advertisement

Wordpress Social Share Plugin powered by Ultimatelysocial