ಎಂತಹ ನಿರ್ಧಾರ ಕೈಗೊಳ್ಳಬೇಕು ಎಂಬುದು ನನಗೆ ತಿಳಿದಿದೆ.ಸಿಎಂ

ರಾಜ್ಯದ ವಿಚಾರದಲ್ಲಿ ಯಾವ ಸಂದರ್ಭದಲ್ಲಿ ಎಂತಹ ನಿರ್ಧಾರ ಕೈಗೊಳ್ಳಬೇಕು ಎಂಬುದು ನನಗೆ ತಿಳಿದಿದೆ. ವಿಪಕ್ಷಗಳಿಂದ ಕಲಿಯಬೇಕಾದ್ದು ಏನೂ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಖಡಕ್​ ಟಾಂಗ್ ನೀಡಿದ್ದಾರೆ. ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪುನರ್​ ಪ್ರತಿಷ್ಠೆ, ಬಹ್ಮಕಲಶೋತ್ಸವ ಪ್ರಯುಕ್ತ ಸಿಎಂ ಆಗಮಿಸಿದ್ದಾರೆ.

ವಿಪಕ್ಷಗಳಿಂದ ಕಲಿಯಬೇಕಾದ್ದು ಏನೂ ಇಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಖಡಕ್​ ಟಾಂಗ್ ನೀಡಿದ್ದಾರೆ. ಉಡುಪಿಯ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಪುನರ್​ ಪ್ರತಿಷ್ಠೆ, ಬಹ್ಮಕಲಶೋತ್ಸವ ಪ್ರಯುಕ್ತ ಸಿಎಂ ಆಗಮಿಸಿದ್ದಾರೆ.

ಉಡುಪಿಯ ಹೆಲಿಪ್ಯಾಡ್​ನಲ್ಲಿ ಬಂದಿಳಿದ ಬಳಿಕ ಮಾಧ್ಯಮಗಳ ಜೊತೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಸಿಎಂ ಮೌನ ವಹಿಸಿದ್ದಾರೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತ್ಯುತ್ತರ ನೀಡಿದ್ರು. ಹೆಚ್ಚು ಮಾತನಾಡಬಾರದು. ನಮ್ಮ ಕೆಲಸಗಳು ಮಾತನಾಡಬೇಕು. ನಮ್ಮ ರಾಜ್ಯವನ್ನು ಹೇಗೆ ರಕ್ಷಿಸಬೇಕು ಎಂಬುದು ನನಗೆ ತಿಳಿದಿದೆ. ವಿಪಕ್ಷಗಳಿಂದ ಕಲಿಯಬೇಕಾದ್ದು ಏನೂ ಇಲ್ಲ ಎಂದು ಹೇಳಿದ್ರು.

ನಮ್ಮ ಸರ್ಕಾರವು ಸಂವಿಧಾನದ ಅಡಿಯಲ್ಲಿ ಕೆಲಸ ಮಾಡುತ್ತದೆ. ಹೀಗಾಗಿ ಯಾರಾದರೂ ಕಾನೂನನ್ನು ಕೈಗೆತ್ತಿಕೊಳ್ಳುವ ಕೆಲಸ ಮಾಡಿದರೆ ಅದನ್ನು ಸಹಿಸಲು ಸಾಧ್ಯವೇ ಇಲ್ಲ ಎಂದು ಎಚ್ಚರಿಕೆ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಹಾಲಿನ ದರ ಹೆಚ್ಚಳ ಮಾಡುವ ಪ್ರಸ್ತಾಪ ಇಲ್ಲ.

Mon Apr 11 , 2022
ಮೈಸೂರು, ಏ.11- ಹಾಲಿನ ದರ ಹೆಚ್ಚಳ ಮಾಡುವ ಪ್ರಸ್ತಾಪ ಇಲ್ಲ. ಆಯಾ ಹಾಲು ಒಕ್ಕೂಟದವರು ಲಾಭಾಂಶದಲ್ಲಿ ರೈತರಿಗೆ ಕೊಡಬಹುದು. ಇದರಲ್ಲಿ ಸರ್ಕಾರ ಮಧ್ಯ ಪ್ರವೇಶಿಸುವುದಿಲ್ಲ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದರು. ನಗರದ ಸರ್ಕಾರಿ ಅತಿಥಿಗೃಹದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸರ್ಕಾರ ಹಾಲಿನ ದರವನ್ನು ಹೆಚ್ಚಳ ಮಾಡುವುದಿಲ್ಲ ಎಂದರು. ಚಂದ್ರು ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ. ಗೃಹ ಮಂತ್ರಿಗಳು ಸಮರ್ಥರಿದ್ದಾರೆ. ತಪ್ಪಿತಸ್ಥರು […]

Advertisement

Wordpress Social Share Plugin powered by Ultimatelysocial