ಸಂತೋಷ್ ಪಾಟೀಲ್ ಕೇಸ್ ತಕ್ಷಣವೇ ಎಫ್‌ಐಆರ್ ಮಾಡಿ ಕೆಲಸ ಮಾಡುತ್ತಿದ್ದೇವೆ. ಸಿಎಂ ಬೊಮ್ಮಾಯಿ

ಚಿಕ್ಕಮಗಳೂರು: ನಾನು ಯಾವುದರಲ್ಲೂ ಸಾಫ್ಟ್ ಕಾರ್ನರ್ ತೋರಿಲ್ಲ. ಖಡಕ್ ಎಂದರೆ ಏನು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಪಕ್ಷಗಳಿಗೆ ಪ್ರಶ್ನಿಸಿದರು.

ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂತೋಷ್ ಪಾಟೀಲ್ ಕೇಸ್ ತಕ್ಷಣವೇ ಎಫ್‌ಐಆರ್ ಮಾಡಿ ಕೆಲಸ ಮಾಡುತ್ತಿದ್ದೇವೆ.

ಹುಬ್ಬಳ್ಳಿ ಘಟನೆಗೂ ಕ್ರಮ ತೆಗೆದುಕೊಂಡಿದ್ದೇವೆ. ಶಿವಮೊಗ್ಗ ಕೇಸಲ್ಲೂ ಕ್ರಮ ತೆಗೆದುಕೊಂಡಿದ್ದೇವೆ. ಹಣ್ಣಿನ ಅಂಗಡಿ ವಿಚಾರದಲ್ಲೂ ಕ್ರಮ ತೆಗೆದುಕೊಂಡಿದ್ದೇವೆ. ಯಾವುದೂ ವಿಳಂಬ ಮಾಡಿಲ್ಲ. ಇದಕ್ಕಿಂತ ಬೇರೆ ಇನೇನು ಬೇಕು ನಿಮಗೆ ಎಂದು ಪ್ರಶ್ನಿಸಿದರು.

ಹುಬ್ಬಳ್ಳಿ ಪ್ರಕರಣದಲ್ಲಿ ಯಾವ ಅಮಾಯಕನ ಬಂಧನ ಆಗಿಲ್ಲ. ಸಾಕ್ಷಿಗಳನ್ನು ಆಧರಿಸಿ ಆರೋಪಿಗಳನ್ನು ಬಂಧಿಸಲಾಗುತ್ತಿದೆ. ವಿರೋಧಪಕ್ಷಗಳು ಟೀಕೆ ಮಾಡುವುದು ಸಾಮಾನ್ಯ. ಆದರೆ ಜನರು ಏನು ಹೇಳುತ್ತಾರೆ ಮುಖ್ಯವಾಗುತ್ತದೆ ಎಂದರು.

ಮುಖ್ಯಮಂತ್ರಿಯಾದ ಮೇಲೆ ಚಿಕ್ಕಮಗಳೂರಿಗೆ ಮೊದಲ ಬಾರಿ ಭೇಟಿ ನೀಡುತ್ತಿದ್ದೇನೆ. ಈ ಹಿಂದೆ ಎರಡು ಬಾರಿ ಕಾರ್ಯಕ್ರಮ ನಿಗದಿಯಾಗಿದ್ದರೂ, ಬರಲಾಗಿರಲಿಲ್ಲ. ಈ ಬಾರಿ ಶಾರದಾಂಬೆಯ ದರ್ಶನ ಮಾಡಲು ಶೃಂಗೇರಿಗೆ ಬಂದಿದ್ದೇನೆ. ನಾಡಿನ ಸುಭಿಕ್ಷೆಗಾಗಿ ಆಗಿ ಶಾರದಾಂಬೆಯ ಪ್ರಾರ್ಥನೆ ಮಾಡುತ್ತೇನೆ ಎಂದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಿಕ್ಷಣ ಇಲಾಖೆಯ ಪಠ್ಯಕ್ರಮ ಅಳವಡಿಕೆಗೆ ಮದರಸಾಗಳಿಂದ ಬೇಡಿಕೆ ಬಂದಿಲ್ಲ.

Tue Apr 19 , 2022
ಬೆಂಗಳೂರು: ಶಿಕ್ಷಣ ಇಲಾಖೆಯ ಪಠ್ಯವನ್ನು ಮದರಸಾಗಳಲ್ಲಿ ಅಳವಡಿಸಲು ಪೋಷಕರು ಮನವಿ ಮಾಡಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು. ವಿಧಾನಸೌಧದದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮದರಸಾಗಳಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮ ಅಳವಡಿಕೆಗೆ ಮದರಸಾಗಳಿಂದ ಬೇಡಿಕೆ ಬಂದಿಲ್ಲ. ಆದರೆ ಪೋಷಕರು ಮದರಸಾ ಶಿಕ್ಷಣದಿಂದ ನಮ್ಮ ಮಕ್ಕಳು ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕಲು ಆಗುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವುದು ಕಷ್ಟ ಆಗುತ್ತಿದೆ. ವೃತ್ತಿಪರ ಕೋರ್ಸ್ ಪಡೆದುಕೊಳ್ಳುವುದು ಕಷ್ಟ. […]

Advertisement

Wordpress Social Share Plugin powered by Ultimatelysocial