ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಹುತೇಕ ಐದು ದಿನಗಳ ರಾಜ್ಯ ಪ್ರವಾಸ!

ಬೆಂಗಳೂರು, ಏ.20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಹುತೇಕ ಐದು ದಿನಗಳ ರಾಜ್ಯ ಪ್ರವಾಸದಲ್ಲಿ ಇದ್ದಾರೆ. ಚಿಕ್ಕಮಗಳೂರು, ಶಿವಮೊಗ್ಗ, ಬಳ್ಳಾರಿ, ಕಲಬುರ್ಗಿ, ಬಾಗಲಕೋಟೆ, ಹುಬ್ಬಳ್ಳಿ-ಧಾರವಾಡ, ದಾವಣಗೆರೆಯಲ್ಲಿ ನಡೆಯುವ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಬುಧವಾರ ಶಿವಮೊಗ್ಗದಲ್ಲಿ ಉಳಿದುಕೊಂಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಇಲ್ಲಿನ ಹೋಟೆಲೊಂದರಲ್ಲಿ ಬಿಜೆಪಿ ವತಿಯಿಂದ ಆಯೋಜಿಸಲಾಗಿರುವ ವಿವಿಧ ಸಭೆಗಳಲ್ಲಿ ಪಾಲ್ಗೊಳಲ್ಲಿದ್ದಾರೆ. ರಾತ್ರಿ ಇಲ್ಲಿನ ಶುಭಶ್ರೀ ಸಮುದಾಯ ಭವನದಲ್ಲಿ ನಡೆಯುವ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ಕುಟುಂಬದ ಮದುವೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಇಂದು ರಾತ್ರಿ ಶಿವಮೊಗ್ಗದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಏ.19ರಿಂದಲೇ ಶಿವಮೊಗ್ಗ ಜಿಲ್ಲಾ ಪ್ರವಾಸದಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ಅವರು ಶೃಂಗೇರಿಯ ಶಾರದಾ ಪೀಠಕ್ಕೆ ಭೇಟಿ ನೀಡಿ ಶ್ರೀ ಶಾರದಾ ದೇವಿಯ ದರ್ಶನ ಪಡೆದರು. ನಂತರ ಪೀಠಾಧ್ಯಕ್ಷ ಜಗದ್ಗುರು ಶಂಕರಾಚಾರ್ಯ ಶ್ರೀ ಭಾರತೀತೀರ್ಥ ಸ್ವಾಮೀಜಿಯವರ ಆಶೀರ್ವಾದ ಪಡೆದರು. ಬಳಿಕ ಶ್ರೀ ಆದಿಶಂಕರಾಚಾರ್ಯ ಶಾರದಾ ಲಕ್ಷ್ಮೀನರಸಿಂಹ ಪೀಠ ದ ವತಿಯಿಂದ ಹರಿಹರಪುರದಲ್ಲಿ ಆಯೋಜಿಸಲಾಗಿದ್ದ ಮಹಾಕುಂಭಾಭಿಷೇಕ ವೈಭವ 2022 ಚಾಲನೆ ನೀಡಿದರು. ಸಂಜೆ ವೇಳೆಗೆ ಶಿವಮೊಗ್ಗಕ್ಕೆ ಬಂದು ಬಿಜೆಪಿ ವಿಭಾಗ ಮಟ್ಟದ ಸಭೆಯಲ್ಲಿ ಪಾಲ್ಗೊಂಡಿದ್ದರು.

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಕಾರಣವಾಗಿರುವ ಕೆ.ಎಸ್. ಈಶ್ವರಪ್ಪ ಅವರ ಬಂಧನಕ್ಕೆ ಆಗ್ರಹಿಸಿ ಮತ್ತು ರಾಜ್ಯದ ಶೇ.40% ಕಮಿಷನ್ ಹಗರಣಗಳ ಬಗ್ಗೆ ಜನಜಾಗೃತಿ ಮೂಡಿಸಲು ಕೆಪಿಸಿಸಿ ಹಮ್ಮಿಕೊಂಡಿರುವ ಪ್ರತಿಭಟನೆ ಬುಧವಾರವೂ ಮುಂದುವರಿಯುತ್ತಿದೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮೈಸೂರು ನಗರ ಮತ್ತು ಗ್ರಾಮೀಣ ಭಾಗಗಳಲ್ಲಿ ಪ್ರತಿಭಟನಾ ಕಾರ್ಯಕ್ರಮ ಮುನ್ನಡೆಸಲಿದ್ದಾರೆ. ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ನೇತೃತ್ವದಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಪ್ರತಿಭಟನೆಗಳು ನಡೆಯಲಿವೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

Please follow and like us:

Leave a Reply

Your email address will not be published. Required fields are marked *

Next Post

ಬಿಜೆಪಿಯಲ್ಲಿರುವ ಅನೇಕ ಸ್ನೇಹಿತರು ನನ್ನನ್ನು ಕರೆಯುತ್ತಿದ್ದಾರೆ. ಈ ಬಗ್ಗೆ ವಿಚಾರ ಮಾಡುತ್ತೇನೆ

Wed Apr 20 , 2022
  ಈ ಬಗ್ಗೆ ವಿಚಾರ ಮಾಡುತ್ತೇನೆ ಎಂದು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ ಎಂದು ವಿಧಾನ ಪರಿಷತ್​ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ ಹೊರಟ್ಟಿ, ಕೆಲವು ಸತ್ಯಗಳನ್ನು, ನಂಬಿಕೆಗಳನ್ನು ಹೇಳಬಾರದು. ಹಾಗೇನಾದರೂ ಇದ್ದರೆ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಹೋಗುತ್ತೇನೆ. ಮುಂಬರುವ ಚುನಾವಣೆಯಲ್ಲಿ ನಾನು ಬಿಜೆಪಿ ಸೇರುವ ವಿಚಾರ ಮಾಡುತ್ತೇನೆ ಎಂದು ಹೇಳಿದ್ದೇನೆ. ಸಾಂವಿಧಾನಿಕ ಹುದ್ದೆಯಲ್ಲಿರುವವರು ಬಾರ್​ನಲ್ಲಿ ಕುಳಿತುಕೊಂಡರೆ ಅಥವಾ ಏನಾದರೂ ಕಾನೂನು ಬಾಹಿರ ಕೆಲಸ ಮಾಡಿದ್ದರೆ […]

Advertisement

Wordpress Social Share Plugin powered by Ultimatelysocial