ಅರಣ್ಯ ಪ್ರದೇಶದ ಜನರ ಸಮಸ್ಯೆಗಳ ಇತ್ಯರ್ಥಕ್ಕೆ ಕಾನೂನು ಪರಿಹಾರ

 

ಶಿವಮೊಗ್ಗ : ಅರಣ್ಯ ಪ್ರದೇಶದ ಜನರ ಸಮಸ್ಯೆಗಳ ಇತ್ಯರ್ಥಕ್ಕೆ ಶೀಘ್ರವೇ ಶಾಶ್ವತ ಪರಿಹಾರಕ್ಕೆ ರಾಜ್ಯ ಸರ್ಕಾರ ಮುಂದಾಗಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಪ್ರದೇಶದ ಜನರ ಸಮಸ್ಯೆಗಳ ಇತ್ಯರ್ಥಕ್ಕೆ ಕಾನೂನು ಪರಿಹಾರ ಕಂಡುಕೊಳ್ಳಲು ಮೇ ಮೊದಲ ವಾರ ಜಿಲ್ಲೆಯ ಜನಪ್ರತಿನಿಧಿಗಳು, ಅಡ್ವೊಕೇಟ್ ಜನರಲ್ ಹಾಗೂ ಅಧಿಕಾರಿಗಳ ವಿಶೇಷ ಸಭೆ ಕರೆಯಲಾಗುವುದು ಎಂದು ತಿಳಿಸಿದ್ದಾರೆ.

ಕೈಗಾರಿಕೋದ್ಯಮಕ್ಕೆ ಶಿವಮೊಗ್ಗ ಜಿಲ್ಲೆಯಲ್ಲಿ ವಿಫುಲ ಅವಕಾಶಗಳಿವೆ. ಬೆಂಗಳೂರು ನಂತರ ರಾಜ್ಯದ ಇತರೆ ಭಾಗಗಳಲ್ಲಿ ಕೈಗಾರಿಕೆ ಅಭಿವೃದ್ಧಿಗೆ ಶ್ರಮಿಸಲಾಗುವುದು. ಜೋಗ ಜಲಪಾತದ ಸಮಗ್ರ ಅಭಿವೃದ್ಧಿಗೆ ಆಡಳಿತಾತ್ಮಕ ಮಂಜೂರಾತಿ ನೀಡಲಾಗಿದೆ. ಕಾಮಗಾರಿ ಕೈಗೆತ್ತಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರವಾಸೋದ್ಯಮ ಕೇಂದ್ರವನ್ನಾಗಿ ರೂಪಿಸಲಾಗುವುದು ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ :

Thu Apr 21 , 2022
  ಬೆಳಗಾವಿ : ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಅಂದಿನ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಬರೆದಿದ್ದ ಪೊಲೀಸರಿಗೆ ಲಭ್ಯವಾಗಿದೆ. 2021 ರ ಫೆಬ್ರವರಿ 15 ರಂದು ಆಗಿನ ಬೆಳಗಾವಿ ಜಿ.ಪಂ ಅಧ್ಯಕ್ಷೆ ಆಶಾ ಐಹೋಳೆ ಹಿಂಡಲಗಾ ಗ್ರಾಮದಲ್ಲಿ ರಸ್ತೆ ಚರಂಡಿ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ […]

Advertisement

Wordpress Social Share Plugin powered by Ultimatelysocial