ಮಸೀದಿಗಳಲ್ಲಿ ಆಜಾನ್ ಕುರಿತಾಗಿ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನೀಡಿರುವ ಆದೇಶದಂತೆ ಪಾಲನೆ ಮಾಡಬೇಕು!

 

ಕಲಬುರಗಿ,ಏ.22-ಮಸೀದಿಗಳಲ್ಲಿ ಆಜಾನ್ ಕುರಿತಾಗಿ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನೀಡಿರುವ ಆದೇಶದಂತೆ ಪ್ರತಿಯೊಬ್ಬರು ಕಾನೂನು ಪಾಲನೆ ಮಾಡಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮನವಿ ಮಾಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಸೀದಿಗಳಲ್ಲಿ ಆಜಾನ್ ಮಾಡುವ ಮೇಲೆ ಮೈಕ್‍ಗಳಿಗೆ ಎಷ್ಟುಪ್ರಮಾಣದ ಡೆಸಿಬಲ್ ಅಳವಡಿಸಬೇಕೆಂದ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ಸ್ಪಷ್ಟವಾದ ಆದೇಶ ನೀಡಿದೆ. ಇದನ್ನ ಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕರ ಜೊತೆ ಮಾತುಕತೆ ನಡೆಸಿ ಮಸೀದಿಗಳಲ್ಲಿ ಮೈಕ್ ಅಳವಡಿಸುವ ಸಂಬಂಧ ಸುತ್ತೋಲೆ ಹೊರಡಿಸಲು ಸೂಚನೆ ನೀಡಲಾಗಿತ್ತು. ಅದರಂತೆ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಸುತ್ತೋಲೆ ಹೊರಡಿಸಿ ಆಯಾ ಧರ್ಮಗಳ ಧಾರ್ಮಿಕ ಮುಖಂಡರ ಜೊತೆ ಮಾತುಕತೆ ನಡೆಸಲಾಗಿದೆ. ಸೌಹಾರ್ದಯುತವಾದ ವಾತಾವರಣವನ್ನು ಮೂಡಿಸಿಕೊಂಡು ಹೋಗುವಂತೆ ಸೂಚಿಸಿರುವುದಾಗಿ ತಿಳಿಸಿದರು.ಪಕ್ಷದಲ್ಲಿ ಯಾವುದೇ ರೀತಿಯ ಅಸಮಾಧಾನವಿಲ್ಲ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳಿದ್ದರೂ ಎಲ್ಲರೂ ಒಟ್ಟಾಗಿ ಕುಳಿತು ಚರ್ಚಿಸಿ ಪಕ್ಷವನ್ನು ಸಂಘಟಿಸಲಿದ್ದೇವೆ. ಪಕ್ಷದಲ್ಲಿ ಯಾರೊಬ್ಬರ ನಡುವೆ ಗೊಂದಲಗಳಿಲ್ಲ ಎಂದು ಸ್ಪಷ್ಟಪಡಿಸಿದರು.

ಕಲ್ಯಾಣ ಕರ್ನಾಟಕ ಭಾಗದಲ್ಲಿ ನಾವು ಈ ಬಾರಿ ಪಕ್ಷವನ್ನು ಮತ್ತಷ್ಟು ಸಂಘಟಿಸಿ ಕಳೆದ ಬಾರಿಗಿಂತಲೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲಬೇಕೆಂಬ ಗುರಿ ಹಾಕಿಕೊಂಡಿದ್ದೇವೆ. ಬರಲಿರುವ ಚುನಾವಣೆಯಲ್ಲಿ ಖಂಡಿತವಾಗಿಯೂ ಹೆಚ್ಚು ಸ್ಥಾನಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೆಸರು ನಾಮಕರಣ ಮಾಡುವ ಕುರಿತಾಗಿ ವಿರೋಧ ವ್ಯಕ್ತವಾಗಿದೆಯಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಅಂತಹ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲರೂ ಚರ್ಚಿಸಿಯೇ ಈ ತೀರ್ಮಾನಕ್ಕೆ ಬಂದಿದ್ದೇವೆ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಶಾಸಕರು ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ವಿವರದ ಪಟ್ಟಿಯನ್ನು ಜೂ.30ರೊಳಗೆ ಲೋಕಾಯುಕ್ತಕ್ಕೆ ಸಲ್ಲಿಸಬೇಕಿದೆ.

Fri Apr 22 , 2022
ಬೆಂಗಳೂರು,ಏ.22- ಶಾಸಕರು ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ವಿವರದ ಪಟ್ಟಿಯನ್ನು ಜೂ.30ರೊಳಗೆ ಲೋಕಾಯುಕ್ತಕ್ಕೆ ಸಲ್ಲಿಸಬೇಕಿದೆ. ಹದಿನೈದನೇ ವಿಧಾನಸಭೆಗೆ ಆಯ್ಕೆಯಾಗಿರುವ ಶಾಸಕರು 2021-22ನೇ ಸಾಲಿಗೆ ಸಂಬಂಧಿಸಿದ ತಮ್ಮ ಹಾಗೂ ತಮ್ಮ ಕುಟುಂಬದ ಸದಸ್ಯರ ಆಸ್ತಿ ವಿವರವನ್ನು ಲೋಕಾಯುಕ್ತರಿಗೆ ಸಲ್ಲಿಸುವಂತೆ ಅಧಿಕೃತ ಪ್ರಕಟಣೆ ತಿಳಿಸಿದೆ. ಏ.8ರಂದು ಲೋಕಾಯುಕ್ತ ನಿಬಂಧಕರು ವಿಧಾನಸಭೆ ಸಚಿವಾಲಯಕ್ಕೆ ಪತ್ರ ಬರೆದು, ಶಾಸಕರು ಆಸ್ತಿ ವಿವರ ಸಲ್ಲಿಸುವ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರತಿಯೊಬ್ಬ ಶಾಸಕರು ಆಯಾ ವರ್ಷದ […]

Advertisement

Wordpress Social Share Plugin powered by Ultimatelysocial