ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿ ಪ್ರವಾಸ

ನವದೆಹಲಿ : ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿ ಪ್ರವಾಸ ಕೈಗೊಂಡಿದ್ದು, ಇಂದು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಮುಖ್ಯ ನ್ಯಾಯಮೂರ್ತಿಗಳ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಭೇಟಿ ಹಿಂದೆ ಮತ್ತೆ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ಶುರುವಾಗಿದ್ದು, ಈಗಾಗಲೇ ದೆಹಲಿಗೆ ತೆರಳಲಿರುವ ಸಿಎಂ ಬೊಮ್ಮಾಯಿ ಕೇಂದ್ರ ವಾಣಿಜ್ಯ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿಯಾಗಿದ್ದಾರೆ.

ಇಂದು ಗೃಹ ಸಚಿವ ಅಮಿತ್ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರನ್ನು ಭೇಟಿಯಾಗಲಿದ್ದಾರೆ. ಈ ವೇಳೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಇನ್ನು ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆಯಿಂದ ತೆರವಾಗಿರೋ ಒಂದು ಸ್ಥಾನ ಸೇರಿ ಸದ್ಯ ಖಾಲಿಯಿರುವ ಐದು ಸಚಿವ ಸ್ಥಾನಗಳ ಭರ್ತಿ ಮಾಡಲು ಸಿಎಂ ಬೊಮ್ಮಾಯಿ ಲೆಕ್ಕಚಾರ ಹಾಕಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಹೊಸಮುಖಗಳಿಗೆ ಅವಕಾಶ ಕಲ್ಪಿಸುವ ಲೆಕ್ಕಾಚಾರ ಸಿಎಂ ಸಿದ್ದಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಯುವತಿ ಮೇಲೆ ಆಸಿಡ್ ದಾಳಿ ಪ್ರಕರಣ;

Sat Apr 30 , 2022
  ಬೆಂಗಳೂರು: ಯುವತಿಯ ಮೇಲೆ ಆಸಿಡ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆಸ್ಪತ್ರೆಯ ಖರ್ಚು ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ. ಸೆಂಟ್ ಜಾನ್ ಆಸ್ಪತ್ರೆಗೆ ಭೇಟಿ ನೀಡಿ ಯುವತಿಯ ಆರೋಗ್ಯ ಸ್ಥಿತಿ ವಿಚಾರಿಸಿದ ಡಾ.ಸುಧಾಕರ್, ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ ಇಡೀ ನಾಗರಿಕ ಸಮಾಜವೇ ತಲೆತಗ್ಗಿಸುವ ಘಟನೆ ನಡೆದಿದೆ. ಯುವತಿ ಮೇಲೆ ಆಸಿಡ್ ದಾಳಿ ಘಟನೆ ಆಘಾತ ತಂದಿದೆ. ಶೇ.35ರಷ್ಟು ಭಾಗ ಬರ್ನ್ ಆಗಿದೆ. ಆಕೆಯ ಸ್ಥಿತಿ ಕ್ಲಿಷ್ಟಕರವಾಗಿದೆ […]

Advertisement

Wordpress Social Share Plugin powered by Ultimatelysocial