ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ, ಶಾಲಾ-ಕಾಲೇಜುಗಳ ಆರಂಭಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ.

ಹುಬ್ಬಳ್ಳಿ: ರಾಜ್ಯಾದ್ಯಂತ ನಾಳೆಯಿಂದ ಪ್ರೌಢಶಾಲೆಗಳು ಆರಂಭವಾಗಲಿವೆ. ಶಾಂತಿಯುತವಾಗಿ ತರಗತಿಗಳು ನಡೆಯುವಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿಎಂ, ಶಾಲಾ-ಕಾಲೇಜುಗಳ ಆರಂಭಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ.ನಾಳೆಯಿಂದ ಪ್ರೌಢಶಾಲೆಗಳನ್ನು ಆರಂಭಿಸಲಾಗುತ್ತದೆ. ಅದನ್ನು ನೋಡಿಕೊಂಡು ಕಾಲೇಜು ಆರಂಭದ ಬಗ್ಗೆ ನಿರ್ಧರಿಸುತ್ತೇವೆ. ಮೊದಲಿನಂತೆ ಸೌಹಾರ್ದಯುತವಾಗಿ ಶಾಲೆ-ಕಾಲೇಜುಗಳು, ತರಗತಿಗಳು ನಡೆಯಬೇಕು ಎಂಬುದು ನಮ್ಮ ಉದ್ದೇಶ ಎಂದರು.ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯಬಾರದು. ಈ ನಿಟ್ಟಿನಲ್ಲಿ ಶಾಂತಿ ಸಭೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಯಾರು ಕೂಡ ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವಂತಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿಯೂ ಹಾಕುವ ಸಂದೇಶಗಳ ಮೇಲೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪುನೀತ್ ರಾಜಕುಮಾರ್ ಕಂಠಸಿರಿಯಲ್ಲಿ "ಬಾಡಿ ಗಾಡ್" ಹಾಡು .

Sun Feb 13 , 2022
      “ಬಾಡಿ ಗಾಡ್” ದೇಹದಿಂದ ದೇವರಾದ ಮಠ ಎದ್ದೇಳು ಮಂಜುನಾಥ ಖ್ಯಾತಿಯ ನಿರ್ದೇಶಕ ಗುರುಪ್ರಸಾದ್. ಈ ಹಿಂದೆ ಮೊಗ್ಗಿನ ಮನಸ್ಸು ಮತ್ತು ಓ ಪ್ರೇಮವೇ ಚಿತ್ರದಲ್ಲಿ ನಟಿಸಿದ್ದ ಮನೋಜ್ ಈಗ ಬಾಡಿಗಾಡ್ ನಲ್ಲೂ ನಟಿಸಿದ್ದಾರೆ, ತಮ್ಮ ಸಂಭಾಷಣೆಯಲ್ಲೆ ಮನಮುಟ್ಟುತಿದ್ದ ಗುರುಪ್ರಾಸಾದ್ ಈಗ ನಟನೆಯಲ್ಲು ಮನಮುಟ್ಟಲಿದ್ದಾರೆ, ಜೀವ, ಪಾರಿಜಾತ, ಗಣಪ, ಕರಿಯ ೨ ಚಿತ್ರದ ನಿರ್ದೇಶಕರಾದ ಪ್ರಭು ಶ್ರೀನಿವಾಸ್ ಅವರು ಒಂದು ಹೆಜ್ಜೆ ಮುಂದೆ ಇಟ್ಟು ನಿರ್ದೇಶನದ ಜೊತೆಗೆ […]

Advertisement

Wordpress Social Share Plugin powered by Ultimatelysocial