ರಾಜ್ಯ ಸರ್ಕಾರವು ಬಜೆಟ್‌ನಲ್ಲಿ ಕೃಷಿ, ನೀರಾವರಿ ಹಾಗೂ ಶಿಕ್ಷಣಕ್ಕೆ ಹೆಚ್ಚು ಪ್ರಾಧಾನ್ಯತೆ ನೀಡಬೇಕು!

 ರೈತರಿಗೆ ಬಿತ್ತನೆಬೀಜ, ರಸಗೊಬ್ಬರವು ಮುಕ್ತ ಮಾರುಕಟ್ಟೆಯಲ್ಲಿ ರಿಯಾಯಿತಿ ದರದಲ್ಲಿ ಸಿಗುವಂತಾಗಬೇಕು. ನೇಕಾರರಿಗೆ ವಿದ್ಯುತ್ ಮಗ್ಗಗಳಿಗೆ ಪ್ಯಾಕೇಜ್ ನೀಡಬೇಕು.ರಾಷ್ಟ್ರೀಯ ಶಿಕ್ಷಣ ನೀತಿಗೆ ಪೂರಕವಾಗಿ ಹಣ ಇಡಬೇಕು. ಕೂಲಿ ಕಾರ್ಮಿಕರು, ಬೀದಿ ಬೀದಿ ವ್ಯಾಪಾರಿಗಳಿಗೆ ಹೊಸ ಯೋಜನೆ ಜಾರಿಗೊಳಿಸಬೇಕು. ಹಿರಿಯ ನಾಗರಿಕರ ಆರೋಗ್ಯ ರಕ್ಷಣೆಗೆ ಹೊಸ ಯೋಜನೆ ಜಾರಿಗೊಳಿಸಬೇಕು. ಖಾಸಗಿ ಆಸ್ಪತ್ರೆಯಲ್ಲಿ ಬಡವರಿಗೆ ರಿಯಾಯಿತಿ ವ್ಯವಸ್ಥೆ ಆಗಬೇಕು. ಅಂಗನವಾಡಿ ನೌಕರರ ವೇತನ ಹೆಚ್ಚಿಸಬೇಕು.ಬಸಪ್ಪ ಸೊ. ಮುಳ್ಳೂರ, ಅಂಚೆ ಇಲಾಖೆ ನಿವೃತ್ತ ನೌಕರ, ಹಲಗತ್ತಿನಿರುದ್ಯೋಗ ನಿವಾರಣೆಗೆ ಕ್ರಮ ಕೈಗೊಳ್ಳಿಬಜೆಟ್‌ನಲ್ಲಿನ ಘೋಷಣೆಗಳು ಕಾರ್ಯರೂಪಕ್ಕೆ ಬರಬೇಕು. ಬೃಹತ್‌ ನೀರಾವರಿಗೆ ಹೆಚ್ಚಿನ ಆದ್ಯತೆ ನೀಡಬೇಕು. ನಿರುದ್ಯೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದ್ದು ಉದ್ಯೋಗ ಒದಗಿಸಲು ಹಾಗೂ ಸ್ವಯಂ ಉದ್ಯೋಗ ಕಂಡುಕೊಳ್ಳಲು ಪ್ರಾಶಸ್ತ್ಯ ನೀಡಬೇಕು. ನಿರಾಶ್ರಿತರಿಗೆ ಮನೆ ಕಟ್ಟಿಸಿಕೊಡಬೇಕು. ಗ್ರಾಮಕ್ಕೊಂದು ಸಣ್ಣ ಕೈಗಾರಿಕೆ ಸ್ಥಾಪಿಸಬೇಕು. ಗ್ರಾಮೀಣ ಜನರಿಗೆ ಮೂಲಸೌಕರ್ಯ ಕಲ್ಪಿಸಲು ಪ್ಯಾಕೇಜ್ ಕಲ್ಪಿಸಬೇಕು. ಅಗತ್ಯ ವಸ್ತುಗಳ ಬೆಲೆ ಇಳಿಸಬೇಕು.ಮಹಾಂತೇಶ ರಾಜಗೋಳಿ, ಪ್ರಭುನಗರ, ಬೈಲಹೊಂಗಲಅನುಷ್ಠಾನಕ್ಕೆ ಕ್ರಮ ವಹಿಸಲಿಶೇಡಬಾಳ-ಅಥಣಿ-ವಿಜಯಪುರ ನಿಯೋಜಿತ ಹೊಸ ರೈಲ್ವೆ ಮಾರ್ಗಕ್ಕೆ 2010-11ರಲ್ಲಿ ಸಮೀಕ್ಷೆ ಮುಗಿದಿದೆ. ವರದಿಯನ್ನು ಇಲಾಖೆಗೆ ಸಲ್ಲಿಸಲಾಗಿದೆ. ಕೇಂದ್ರ ಮತ್ತು ರಾಜ್ಯದಲ್ಲಿ ಒಂದೇ ಪಕ್ಷದ ಸರ್ಕಾರಗಳ ಆಡಳಿತವಿದ್ದು ಯೋಜನೆ ಅನುಷ್ಠಾನಕ್ಕೆ ಅನುದಾನ ಒದಗಿಸಿ, ಅನುಷ್ಠಾನಗೊಳಿಸಬೇಕು. ರಾಜ್ಯ ಸರ್ಕಾರವು ಕೇಂದ್ರದ ಮೇಲೆ ಒತ್ತಡ ಹೇರಬೇಕು.ಅಮಿತ್‌ ನಿಂಬಾಳ್ಕರ್, ಐಗಳಿ, ಅಥಣಿ ತಾಲ್ಲೂಕುಮನೆ ನಿರ್ಮಿಸಿ ಕೊಡಿರಾಜ್ಯದಲ್ಲಿ ಮೂರು ವರ್ಷಗಳಿಂದ ಅತಿವೃಷ್ಟಿ ಹಾಗೂ ಪ್ರವಾಹದಿಂದ ಸಾವಿರಾರು ಮನೆಗಳು ಬಿದ್ದಿವೆ. ಆ ಮನೆಗಳಲ್ಲಿನ ಜನರು ಇಂದಿಗೂ ನಿರ್ಗತಿಕರಾಗಿದ್ದಾರೆ. ಅಂಥವರನ್ನು ಗುರುತಿಸಿ ಸರ್ಕಾರವು ವಸತಿ ಇಲಾಖೆಯಿಂದ ಉಚಿತವಾಗಿ ಮನೆಗಳನ್ನು ನಿರ್ಮಿಸಿಕೊಡಬೇಕು.ಮಲ್ಲನಗೌಡ ಪಾಟೀಲ, ರಂಕಲಕೊಪ್ಪ, ರಾಮದುರ್ಗ ತಾಲ್ಲೂಕುಉತ್ತರ ಕರ್ನಾಟಕಕ್ಕೆ ಆದ್ಯತೆ ಕೊಡಿಈ ಬಾರಿಯ ಬಜೆಟ್‌ನಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಬೇಕು. ಇಲ್ಲಿ ವಿದ್ಯಾರ್ಜನೆ ಮಾಡಿದ ವಿದ್ಯಾರ್ಥಿಗಳು ನೌಕರಿಗಾಗಿ ಬೆಂಗಳೂರಿನತ್ತ ಮುಖ ಮಾಡುತ್ತಿದ್ದಾರೆ. ಅದನ್ನು ತಪ್ಪಿಸಲು ಉತ್ತರ ಕರ್ನಾಟಕದಲ್ಲಿ ಕೈಗಾರಿಕೆಗಳ ಅಭಿವೃದ್ಧಿ ಮತ್ತು ಸ್ಥಾಪನೆಗೆ ಹೆಚ್ಚಿನ ಮಹತ್ವ ನೀಡಬೇಕು. ಪ್ರವಾಹ ತಪ್ಪಿಸಲು ವೈಜ್ಞಾನಿಕವಾಗಿ ಬ್ಯಾರೇಜ್‌ಗಳ ನಿರ್ಮಾಣಕ್ಕೆ ಕ್ರಮ ವಹಿಸಬೇಕು. ಶಾಶ್ವತ ಪರಿಹಾರ ಕಲ್ಪಿಸಬೇಕು. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲೂ ಬಜೆಟ್‌ ಮಂಡಿಸಬೇಕು.ನಿಲೇಶ್ ಜಾಧವ, ಸಂಕೇಶ್ವರ, ಹುಕ್ಕೇರಿ ತಾಲ್ಲೂಕುಶೈಕ್ಷಣಿಕ ಸಾಲ ಮನ್ನಾ ಮಾಡಿಬಜೆಟ್‌ನಲ್ಲಿ ಕಟ್ಟಕಡೆಯ ವ್ಯಕ್ತಿಯ ಬಗ್ಗೆಯೂ ಚಿಂತಿಸಬೇಕು. ಜನರು ಅತಿವೃಷ್ಟಿ ಮತ್ತು ಕೋವಿಡ್ ಸೋಂಕಿನಿಂದ ಆರ್ಥಿಕವಾಗಿ ತತ್ತರಿಸಿ ಹೋಗಿದ್ದಾರೆ. ಆದ್ದರಿಂದ ಈಗಿನ ಸವಾಲುಗಳಿಗೆ ಸ್ಪಂದಿಸುವಂತಹ ಬಜೆಟ್ ಬೇಕು. ಆಹಾರ, ವಸತಿ, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಕ್ಕೆ ಹೆಚ್ಚಿನ ಒತ್ತು ನೀಡಬೇಕು. ರೈತರು ಮತ್ತು ಗುಡಿ ಕೈಗಾರಿಕೆಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮೀಸಲಿಡಬೇಕು. ಉನ್ನತ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ರಾಷ್ಟ್ರೀಕೃತ ಬ್ಯಾಂಕ್‌ಗಳಿಂದ ಸಾಲ ಪಡೆದಿದ್ದು, ಕೋವಿಡ್ ಕಾರಣದಿಂದ ಉದ್ಯೋಗವಿಲ್ಲದೆ ಸಾಲ ಮರು ಪಾವತಿಸಲಾಗದೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಂಥವರ ಶೈಕ್ಷಣಿಕ ಸಾಲ ಮನ್ನಾ ಮಾಡಬೇಕು.ಬಸವಪ್ರಸಾದ ಸಂಕಪಾಳ, ವಕೀಲ, ನೇರ್ಲಿಹೆಚ್ಚಿನ ಅನುದಾನ ಕೊಡಿಕೃಷಿ ಕ್ಷೇತ್ರದ ಜೊತೆಗೆ ಉತ್ಪಾದನಾ ವಲಯ, ಕೃಷಿ ಕಾರ್ಮಿಕ ವಲಯ ಹಾಗೂ ಸೇವಾ ವಲಯಗಳಿಗೆ ಹೆಚ್ಚಿನ ಅನುದಾನ ನೀಡಬೇಕು. ಆರೋಗ್ಯ, ನೀರಾವರಿ, ಗ್ರಾಮೀಣಾಭಿವೃದ್ಧಿಗೆ ಆದ್ಯತೆ ಕೊಡಬೇಕು. ಗಡಿ ಭಾಗದ ಜನರು ಗುಳೆ ಹೋಗುವುದು ತಪ್ಪಿಸಲು ಸ್ವಉದ್ಯೋಗಕ್ಕಾಗಿ ಉದ್ಯಮಶೀಲತಾ ಅಭಿವೃದ್ಧಿ ಯೋಜನೆಗೆ ಹೆಚ್ಚಿನ ಅನುದಾನ ಒದಗಿಸಬೇಕು. ಉತ್ತರ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಮೀಸಲಿಡಬೇಕು ̤

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಅಸನ್ಸೋಲ್ ನಗರಗಳ ಪಾಲಿಕೆ ಚುನಾವಣೆಯಲ್ಲಿ ಟಿಎಂಸಿ ಗೆಲುವಿನ ನಗೆ ಬೀರಿದೆ.

Mon Feb 14 , 2022
ಕೋಲ್ಕತ್ತ: ಪಶ್ಚಿಮ ಬಂಗಾಳದ 4 ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಪಕ್ಷವು ಕ್ಲೀನ್ ಸ್ವೀಪ್ ಮಾಡಿದೆ. ಬಿಧನ್‌ನಗರ, ಸಿಲಿಗುರಿ, ಚಂದರ್‌ನಗೊರ್ ಮತ್ತು ಅಸನ್ಸೋಲ್ ನಗರಗಳ ಪಾಲಿಕೆ ಚುನಾವಣೆಯಲ್ಲಿ ಟಿಎಂಸಿ ಗೆಲುವಿನ ನಗೆ ಬೀರಿದೆ.ಬಿಧನ್‌ ನಗರದ ಪಾಲಿಕೆಯ 41 ವಾರ್ಡ್‌ಗಳ ಪೈಕಿ 39ರಲ್ಲಿ ಗೆಲುವು ಸಾಧಿಸುವ ಮೂಲಕ ಟಿಎಂಸಿ ಅಧಿಕಾರವನ್ನು ಉಳಿಸಿಕೊಂಡಿದೆ. ಇಲ್ಲಿನ ಒಂದೇ ಒಂದು ವಾರ್ಡ್‌ನಲ್ಲಿ ಸಿಪಿಐ(ಎಂ) ಜಯ ಸಾಧಿಸಿದೆ.ಚಂದರ್‌ನಗೋರ್‌ನ 32 ವಾರ್ಡ್‌ಗಳ ಪೈಕಿ 31ರಲ್ಲಿ […]

Advertisement

Wordpress Social Share Plugin powered by Ultimatelysocial