ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಜೂನ್ 21ರಂದು ನಡೆಯಲಿರುವ ವಿಶ್ವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

 

ಬೆಂಗಳೂರು,ಮೇ 30- ಸಾಂಸ್ಕøತಿಕ ನಗರಿ ಮೈಸೂರಿನಲ್ಲಿ ಜೂನ್ 21ರಂದು ನಡೆಯಲಿರುವ ವಿಶ್ವ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವ ಹಿಸುತ್ತಿರುವ ಕಾರಣ ಅಗತ್ಯ ಪೂರ್ವ ಸಿದ್ದತೆಗಳನ್ನು ಕೈಗೊಳ್ಳು ವಂತೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಸೂಚನೆ ನೀಡಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ವಿಡಿಯೋ ಕಾನರೆನ್ಸ್ ಮೂಲಕ ಕೇಂದ್ರ ಆಯುಷ್ ಸಚಿವರಿಗೆ ಕೈಗೊಂಡಿರುವ ಪೂರ್ವ ಸಿದ್ದತೆಗಳ ಬಗ್ಗೆ ಮಾಹಿತಿ ನೀಡಿದರು. ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿಯವರು ಮೈಸೂರಿಗೆ ಆಗಮಿಸುತ್ತಿರುವುದು ಹೆಮ್ಮೆಯ ವಿಷಯ. ಜಿಲ್ಲಾಡಳಿತ ಕೈಗೊಂಡಿರುವ ಸಿದ್ದತೆಗಳ ಬಗ್ಗೆ ಸಿಎಂ ಸಚಿವರಿಗೆ ಮಾಹಿತಿಯನ್ನು ಒದಗಿಸಿದರು.

ಮೈಸೂರಿನ ಅರಮನೆ ಮೈದಾನದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಈಗಾಗಲೇ ಜಿಲ್ಲಾಡಳಿತ ಜೊತೆ ನಾನೇ ಮಾತುಕತೆ ನಡೆಸಿದ್ದೇನೆ. ಜೊತೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್, ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸೇರಿದಂತೆ ಶಾಸಕರು ಮತ್ತಿತರರು ಸಿದ್ದತೆಗಳನ್ನು ಕೈಗೊಂಡಿದ್ದಾರೆ. ಪ್ರಧಾನಿಯವರ ಆಗಮನಕ್ಕೆ ಜಿಲ್ಲಾಡಳಿತ ಸಕಲ ರೀತಿಯಲ್ಲೂ ಸಿದ್ದತೆಯನ್ನು ಪೂರ್ಣಗೊಳಿಸಿದೆ ಎಂದು ಹೇಳಿದರು.

ಕರುನಾಡಿಗೆ ಪ್ರಧಾನಮಂತ್ರಿಯವರು ಆಗಮಿಸುತ್ತಿರುವುದು ನಿಜಕ್ಕೂ ಕರ್ನಾಟಕಕ್ಕೆ ಹೆಮ್ಮೆ ತರುವ ವಿಷಯವಾಗಿದೆ. ಭದ್ರತೆ, ಕಾರ್ಯಕ್ರಮಕ್ಕೆ ಯಾರೆಲ್ಲ ಭಾಗವಹಿಸಬೇಕು ಎಂಬುದು ಸೇರಿದಂತೆ ಹಲವು ವಿಷಯಗಳ ಮಾಹಿತಿಯನ್ನು ವಿನಿಮಯ ಮಾಡಿಕೊಂಡರು.
ರಾಜ್ಯ ಸರ್ಕಾರ ತೆಗೆದುಕೊಂಡಿರುವ ಸಿದ್ದತೆಗಳಿಗೆ ಕೇಂದ್ರ ಸಚಿವ ಸರ್ಬಾನಂದ ಸೋನವಾಲ ತೃಪ್ತಿ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಭಾರತ ಸ್ವತಂತ್ರ, ಪಾಕಿಸ್ತಾನದವರು ಗುಲಾಮರು: ಇಮ್ರಾನ್ ಖಾನ್

Mon May 30 , 2022
ಇಸ್ಲಾಮಾಬಾದ್: ಪಾಕಿಸ್ತಾನದ ಸಮ್ಮಿಶ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಅಮೆರಿಕದ ಗುಲಾಮರು ಪೆಟ್ರೋಲಿಯಂ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸಿದ್ದಾರೆ. ಆದರೆ ಭಾರತವು ರಷ್ಯಾದಿಂದ ಅಗ್ಗದ ತೈಲವನ್ನು ಖರೀದಿಸಿ ಬೆಲೆ ಕಡಿತಗೊಳಿಸಿದೆ ಎಂದು ಹೇಳಿದ್ದಾರೆ. ಇದು ಭಾರತ ಸ್ವತಂತ್ರವಾಗಿದ್ದು, ನಾವು ಪಾಕಿಸ್ತಾನದವರು ಗುಲಾಮರು ಎಂದು ತೋರಿಸಿದೆ ಎಂದು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (ಪಿಟಿಐ) ಪಕ್ಷದ ಮುಖ್ಯಸ್ಥರೂ ಆಗಿರುವ ಇಮ್ರಾನ್ ಖಾನ್, ಚಾರ್‌ಸದ್ಧಾದಲ್ಲಿ ನಡೆದ ಕಾರ್ಮಿಕರ ಸಮಾವೇಶದಲ್ಲಿ ಹೇಳಿದರು. ಅಮೆರಿಕದ […]

Advertisement

Wordpress Social Share Plugin powered by Ultimatelysocial