‘ಬಾಂಡ್ ರವಿ’ ಭರ್ಜರಿ ಆಕ್ಷನ್ ಸೀನ್ಸ್ ಖದರ್…ಹೇಗಿತ್ತು ಮಂಡ್ಯ ಹೈದನ ಪವರ್?

ಕನ್ನಡ ಚಿತ್ರರಂಗದ ಪ್ರತಿಭಾನ್ವಿತ ನಟ ಪ್ರಮೋದ್ ನಟನೆಯ ಬಹು ನಿರೀಕ್ಷಿತ ಸಿನ್ಮಾ ಬಾಂಡ್ ರವಿ ಚಿತ್ರದ ಶೂಟಿಂಗ್ ಭರದಿಂದ ಸಾಗ್ತಿದೆ. ಈಗಾಗಲೇ 70ರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ, ಬೆಂಗಳೂರಿನ HMTಯಲ್ಲಿ ಸಾಹಸ ದೃಶ್ಯದ ಚಿತ್ರೀಕರಣ ನಡೆಸಿದೆ.ಖ್ಯಾತ ಸಾಹಸ ನಿರ್ದೇಶಕ ಮಾಸ್ಟರ್ ವಿನೋದ್ ಸಾಹಸ ಸಂಯೋಜನೆಯಲ್ಲಿ ಭರ್ಜರಿ ಸಾಹಸ ಸನ್ನಿವೇಶದ ಚಿತ್ರೀಕರಣ ನಡೆದಿದೆ. ಪ್ರಮೋದ್, ಸಹಕಲಾವಿದರು ಭರ್ಜರಿ ಆಕ್ಷನ್ ಸೀನ್ಸ್ ಭಾಗಿಯಾಗಿದ್ದರು.ಕಳೆದ‌ ಹನ್ನೊಂದು ವರ್ಷದಿಂದ ನಿರ್ದೇಶನದ ವಿಭಾಗದಲ್ಲಿ ಕೆಲಸ ಮಾಡಿರುವ ಪ್ರಜ್ವಲ್ ಚಿತ್ರಕ್ಕೆ ಆಕ್ಷನ್ ಕಟ್ ಹೇಳ್ತಿದ್ದು, ಇದೊಂದು ಕಮರ್ಷಿಯಲ್, ಆಕ್ಷನ್-ಲವ್ ಸ್ಟೋರಿ ಸಿನಿಮಾವಾಗಿದ್ದು, ಲೈಫ್ ಲೈನ್ ಫಿಲ್ಮಸ್ ಬ್ಯಾನರ್ ನಡಿ ನರಸಿಂಹಮೂರ್ತಿ ಬಂಡವಾಳ ಹೂಡ್ತಿದ್ದಾರೆ. ಈ‌ ಹಿಂದೆ ನರಸಿಂಹಮೂರ್ತಿ ಮಾದ ಮನಸಿ ಸಿನಿಮಾ ನಿರ್ಮಾಣ ಮಾಡಿದ್ದರು. ಪ್ರಮೋದ್ ಗೆ ಜೋಡಿಯಾಗಿ ಮಾಯಕನ್ನಡಿ ಸಿನಿಮಾ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದ ಕಾಜಲ್ ಕುಂದರ್ ನಾಯಕಿಯಾಗಿ ನಟಿಸ್ತಿದ್ದಾರೆ.

ಮಲ್ಲಿಕಾರ್ಜುನ್ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಕೊಂಡಿದ್ದಾರೆ. ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್, ತೆಲುಗಿನ ಖ್ಯಾತ ನಟ ರವಿ ಪ್ರಕಾಶ್ ಮುಖ್ಯ ಭೂಮಿಕೆಯಲ್ಲಿ ನಟಿಸ್ತಿದ್ದು, ಕೆಎಸ್ ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಸಂಕಲನ, ಸುನಿಲ್&ದೇವ್ ಎನ್ ರಾಜ್ ಸಂಭಾಷಣೆ, ಮನೋಮೂರ್ತಿ ಮಧುರ ಸಂಗೀತ, ಜಯಂತ್ ಕಾಯ್ಕಿಣಿ ನಾಗೇಂದ್ರ ಪ್ರಸಾದ್ ಸಾಹಿತ್ಯ ಸಿನಿಮಾಕ್ಕಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಜೂ 3ಕ್ಕೆ 'ಮೆಟಡೋರ್' ರಿಲೀಸ್...'ಮೆಟಡೋರ್'ನಲ್ಲಿಯೇ ಊರ್ ಊರ್ ಸುತ್ತಿ ಪ್ರಮೋಷನ್ ಮಾಡಿದ ಚಿತ್ರತಂಡ

Fri May 27 , 2022
ಜೂನ್ 3ರಿಂದ ಕನ್ನಡ ಬೆಳ್ಳಿತೆರೆ ಮೇಲೆ ಮೆಟಡೋರ್ ಪಯಣ ಶುರುವಾಗಲಿದೆ. ಈಗಾಗಲೇ ಟೀಸರ್, ಟ್ರೇಲರ್ ಹಾಗೂ ಹಾಡಿನ ಮೂಲಕ ನಿರೀಕ್ಷೆ ಹುಟ್ಟಿಸಿರುವ ಈ ಸಿನಿಮಾ ಥಿಯೇಟರ್ ಗೆ ಲಗ್ಗೆ ಇಡಲು ಅಣಿಯಾಗಿದೆ.ಮೆಟಡೋರ್ ಮೂಲಕ ಭರ್ಜರಿ ಪ್ರಮೋಷನ್ಮೆಟಡೋರ್ ಸಿನಿಮಾ ರಿಲೀಸ್ ಗೆ ಕ್ಷಣಗಣನೆ ಶುರುವಾಗಿದ್ದು, ಹೀಗಾಗಿ ಚಿತ್ರತಂಡ ಭರ್ಜರಿ ಪ್ರಮೋಷನ್ ಗೆ ಇಳಿದಿದೆ. ಮೆಟಡೋರ್ ವಾಹನಕ್ಕೆ ಸಿನಿಮಾದ ಪೋಸ್ಟರ್ ಅಂಟಿಸಿ, ಈ ಮೆಟಡೋರ್ ಮೂಲಕವೇ ರಾಜ್ಯಾದ್ಯಂತ ಪ್ರಮೋಷನ್ ನಡೆಸ್ತಿದೆ.ಐದು ಕಥೆಯುಳ್ಳ ಹೈಪರ್ […]

Advertisement

Wordpress Social Share Plugin powered by Ultimatelysocial