ಶೀಘ್ರವೇ ರಾಜ್ಯಾದ್ಯಂತ 437 `ನಮ್ಮ ಕ್ಲಿನಿಕ್’ ಆರಂಭ : ಸಿಎಂ ಬಸವರಾಜ ಬೊಮ್ಮಾಯಿ.

ಬೆಂಗಳೂರು: ಆರೋಗ್ಯ ಸೇವೆಯಲ್ಲಿ ಮಹತ್ವದ ಹೆಜ್ಜೆ ಇರಿಸಿದ್ದಂತ ರಾಜ್ಯ ಸರ್ಕಾರ ಬಿಬಿಎಂಪಿಯ 243 ವಾರ್ಡ್ ಗಳು ಸೇರಿದಂತೆ ರಾಜ್ಯದ ಒಟ್ಟು 437 ಕಡೆ ಡಿಸೆಂಬರ್ ಕೊನೆಯ ವಾರದಲ್ಲಿ ನಮ್ಮ ಕ್ಲಿನಿಕ್  ಆರಂಭಿಸಲು ತೀರ್ಮಾನಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದ ಅವರು, 96 ಕೋಟಿ ವೆಚ್ಚದ ಆಸ್ಪತ್ರೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲಾಗುತ್ತಿದ್ದು, ಉತ್ತಮ ಚಿಕಿತ್ಸೆ ಸಿಗುವ ವಿಶ್ವಾಸವಿದೆ ಎಂದರು.

ಶೀಘ್ರವೇ ರಾಜ್ಯದಲ್ಲಿ 100 ಸಮುದಾಯ ಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಲಾಗುತ್ತದೆ. ಡಿಸೆಂಬರ್ ಕೊನೆಯ ವಾರದಲ್ಲಿ 437 ನಮ್ಮ ಕ್ಲಿನಿಕ್ ಗಳನ್ನು ರಾಜ್ಯಾಧ್ಯಂತ ಆರಂಭಿಸಲಾಗುತ್ತಿದೆ. ರಾಜ್ಯದ 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕಣ್ಣಿನ ಆಪರೇಷನ್ ಹಾಗೂ ಕನ್ನಡ ವಿತರಣೆ ಮಾಡಲಾಗುತ್ತದೆ ಎಂದು ಹೇಳಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಡ್ರೈ ಫ್ರೂಟ್ ಗಳಲ್ಲಿ ಒಂದಾದ ವಾಲ್ ನಟ್ ಸೇವನೆಯಿಂದ ಹಲವು ರೋಗಗಳನ್ನು ತಡೆಗಟ್ಟಬಹುದು!

Mon Dec 5 , 2022
  . ಮುಖ್ಯವಾಗಿ ದಿನನಿತ್ಯ ಇದನ್ನು ಸೇವಿಸುವುದರಿಂದ ಹೃದಯ ಸಂಬಂಧಿ ಕಾಯಿಲೆಗಳಿಂದ ದೂರವಿರಬಹುದು. ಕಡಿಮೆ ಸ್ಯಾಚುರೇಟೆಡ್ ಫ್ಯಾಟ್ ಹೊಂದಿರುವ ಇದನ್ನು ಊಟದ ಜೊತೆ ಸೇರಿಸಿಕೊಂಡು ತಿಂದರೆ ರಕ್ತದೊತ್ತಡ ಕಡಿಮೆಯಾಗುತ್ತದೆ. ರಕ್ತದೊತ್ತಡದ ಪ್ರಮಾಣ ನೇರವಾಗಿ ಹೃದ್ರೋಗದೊಂದಿಗೆ ಸಂಬಂಧ ಹೊಂದಿರುತ್ತದೆ. ಹಾಗಾಗಿ ವಾಲ್ ನಟ್ ಸೇವನೆ ಮಧ್ಯಮ ಪ್ರಮಾಣದ ರಕ್ತದೊತ್ತಡವನ್ನು ತಗ್ಗಿಸುತ್ತದೆ. ಡಯಟ್ ಫುಡ್ ಆಗಿಯೂ ಬಳಕೆಯಾಗುವ ವಾಲ್ ನಟ್ ನಿಮ್ಮ ದೇಹದ ಅನಾವಶ್ಯಕ ಕೊಬ್ಬನ್ನು ಇಳಿಸುತ್ತದೆ. ದೇಹಕ್ಕೆ ಬೇಕಿರುವ ಅಗತ್ಯ ಪೋಷಕಾಂಶಗಳನ್ನು […]

Advertisement

Wordpress Social Share Plugin powered by Ultimatelysocial