ಪುನಾರಚನೆಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಸ್ ಪ್ರಾರಂಭಿಸಿದ್ದಾರೆ.

 

ಬೆಂಗಳೂರು:ದಿನೇ ದಿನೇ ಹೆಚ್ಚುತ್ತಿರುವ ಸಂಪುಟ ವಿಸ್ತರಣೆ ಬೇಡಿಕೆ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದ್ದು, ಬಜೆಟ್ ಅಧಿವೇಶನಕ್ಕೆ ಮುನ್ನವೇ ಸಂಪುಟ ವಿಸ್ತರಣೆ ಅಥವಾ ಪುನಾರಚನೆಗಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಸರ್ಕಸ್ ಪ್ರಾರಂಭಿಸಿದ್ದಾರೆ.

ಕೇಂದ್ರ ಸರಕಾರದಿಂದ ಹೆಚ್ಚಿನ ಅನುದಾನ ಪಡೆಯುವುದು ಸೇರಿದಂತೆ ನಾನಾ ಕಾರಣಗಳಿಗಾಗಿ ರಾಜ್ಯದ ಸಂಸದರ ಜತೆ ಸಭೆ ನಡೆಸುವುದಕ್ಕಾಗಿ ಬೊಮ್ಮಾಯಿ ಸೋಮವಾರ ದಿಲ್ಲಿಗೆ ಭೇಟಿ ನೀಡಿದ್ದಾರೆ. ಅವರು ರಾಜ್ಯಕ್ಕೆ ವಾಪಾಸ್ ಆಗುವ ದಿನಾಂಕ ಇನ್ನೂ ನಿಗದಿಯಾಗಿಲ್ಲ. ಹೀಗಾಗಿ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರ ಜತೆಗೆ ಚರ್ಚೆ ನಡೆಸುವುದಕ್ಕೆ ಸಮಯ ನಿಗದಿಯಾಗಿದೆ ಎಂದು ಹೇಳಲಾಗುತ್ತಿದೆ.

ವಿಜಯೇಂದ್ರ ಇನ್ ?: ಬಿಜೆಪಿ ಮೂಲಗಳ ಪ್ರಕಾರ ತಮ್ಮ ಪುತ್ರ ವಿಜಯೇಂದ್ರ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳುವಂತೆ ಮಾಜಿ ಸಿಎಂ ಯಡಿಯೂರಪ್ಪ ಎರಡು ಬಾರಿ ಬೊಮ್ಮಾಯಿ ಅವರಿಗೆ ನಿರ್ದೇಶನ ನೀಡಿದ್ದಾರೆ. ಬೊಮ್ಮಾಯಿ ಇದಕ್ಕೆ ತಾತ್ವಿಕ ಒಪ್ಪಿಗೆ ನೀಡಿದ್ದಾರೆ. ಆದರೆ ವರಿಷ್ಠರಿಂದ ಇನ್ನೂ ಸಮ್ಮತಿ ದೊರೆತಿಲ್ಲ. ಸಂಪುಟ ವಿಸ್ತರಣೆ ಅಥವಾ ಪುನಾರಚನೆಗೆ ಇದೇ ದೊಡ್ಡ ತೊಡಕಾಗಿ ಪರಿಣಮಿಸಿದೆ.

ಅದೇ ಪಂಚಮಸಾಲಿ ಲಿಂಗಾಯಿತ ಸಮುದಾಯದಿಂದ ಯಾರನ್ನು ಕೈ ಬಿಟ್ಟು ಯಾರನ್ನು ಸೇರಿಸಿಕೊಳ್ಳಬೇಕೆಂಬುದು ಇನ್ನೂ ಇತ್ಯರ್ಥವಾಗಿಲ್ಲ. ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಅರವಿಂದ ಬೆಲ್ಲದ್ ಸಂಪುಟ ಸೇರ್ಪಡೆಗೆ ಬೇರೆ ಬೇರೆ ಮೂಲಗಳಿಂದ ಭಾರಿ ಒತ್ತಡ ಹೇರುತ್ತಿದ್ದಾರೆ. ಇವರಿಬ್ಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವುದಿದ್ದರೆ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ, ಶಂಕರ್ ಪಾಟೀಲ್ ಮುನೇನಕೊಪ್ಪ ಹಾಗೂ ಸಿ.ಸಿ.ಪಾಟೀಲ್ ಪೈಕಿ ಇಬ್ಬರನ್ನು ಕೈ ಬಿಡಬೇಕಾಗುತ್ತದೆ. ಇದು ಕೂಡಾ ಬೊಮ್ಮಾಯಿ ಅವರಿಗೆ ಸವಾಲಿನ ಕೆಲಸವಾಗಿದೆ.

ಉತ್ತರ ಪ್ರದೇಶದ ಚುನಾವಣೆಯವರೆಗೆ ಕರ್ನಾಟಕದಲ್ಲಿ ಯಾವುದೇ ರಾಜಕೀಯ ಚಟುವಟಿಕೆಗೆ ಅವಕಾಶ ನೀಡುವುದು ಬೇಡ ಎಂಬುದು ವರಿಷ್ಠರ ಲೆಕ್ಕಾಚಾರ. ಅಲ್ಲಿಯವರೆಗೆ ಕಾಯುವುದಕ್ಕೆ ಆಕಾಂಕ್ಷಿಗಳು ಸಿದ್ದರಿಲ್ಲ. ಹೀಗಾಗಿ ಬಜೆಟ್ಗೆ ಮುನ್ನವೇ ವಿಸ್ತರಣೆ ಅಥವಾ ಪುನಾರಚನೆ ಕೆಲಸ ಪರ‍್ಣಗೊಳಿಸುವಂತೆ ಸಿಎಂ ಬೊಮ್ಮಾಯಿ ವರಿಷ್ಠರ ಮೇಲೆ ಒತ್ತಡ ಹೇರಲು ನರ‍್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರಕ್ತದಾನ ಮಾಡಿದ ಕಲಬುರಗಿಯಾ ಮಹಾದೇವಪ್ಪ ರಾಂಪೂರೆ ಪುಣ್ಯಸ್ಮರಣೆ,

Mon Feb 7 , 2022
ಕಲಬುರಗಿ: ಹೈದರಾಬಾದ್‌ ಕರ್ನಾಟಕ ಶಿಕ್ಷಣ ಸಂಸ್ಥೆಯ ಎಂ.ಎಸ್. ಇರಾನಿ ಪದವಿ ಮಹಾವಿದ್ಯಾಲಯದಲ್ಲಿ ಭಾನುವಾರ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಮಹಾದೇವಪ್ಪ ರಾಂಪೂರೆ ಅವರ 49ನೇ ಪುಣ್ಯಸ್ಮರಣೆ ಅಂಗವಾಗಿ ರಾಷ್ಟ್ರೀಯ ಸೇವಾ ಯೋಜನೆ, ಯುವ ರೆಡ್‌ಕ್ರಾಸ್ ಘಟಕ ಹಾಗೂ ರೆಡ್‌ ರಿಬ್ಬನ್ ಘಟಕಗಳ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.   ಶಿಬಿರ ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಜಂಟಿ ಕಾರ್ಯದರ್ಶಿ ಡಾ.ಮಹಾದೇವಪ್ಪ ವಿ. ರಾಂಪೂರೆ ಅವರು ರಕ್ತದಾನದ ಮಹತ್ವ ವಿವರಿಸಿದರು. 30 ವಿದ್ಯಾರ್ಥಿಗಳು, ಸಿಬ್ಬಂದಿ ರಕ್ತದಾನ […]

Advertisement

Wordpress Social Share Plugin powered by Ultimatelysocial