ಭಾರತದ ಬ್ರಹ್ಮೋಸ್ ಕ್ಷಿಪಣಿಯ ‘ಡಬಲ್ ಹಿಟ್’ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

ನೌಕೆ ಮತ್ತು ಯುದ್ಧ ವಿಮಾನದ ಮೂಲಕ ಒಂದೇ ಗುರಿ ಧ್ವಂಸ ಮಾಡುವ ಪರೀಕ್ಷೆ ಯಶಸ್ವಿಯಾಗಿದೆ.

ಭಾರತೀಯ ವಾಯುಪಡೆ ಯುದ್ಧ ನೌಕೆ ಮತ್ತು ಯುದ್ಧ ವಿಮಾನ ಸುಖೋಯ್30 ಜೆಟ್ ನಿಂದ ಬ್ರಹ್ಮೋಸ್ ಕ್ಷಿಪಣಿಯನ್ನು ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದ್ದು, ಎರಡೂ ಪರೀಕ್ಷೆಯಲ್ಲಿ ಒಂದೇ ಗುರಿ ನಿಗದಿ ಪಡಿಸಲಾಗಿತ್ತು.

ಎರಡೂ ಮಾರ್ಗದಲ್ಲಿ ಒಂದೇ ಗುರಿಯನ್ನು ಧ್ವಂಸ ಮಾಡುವಲ್ಲಿ ಕ್ಷಿಪಣಿ ಯಶಸ್ವಿಯಾಗಿದೆ.

ಈಶಾನ್ಯ ಸಮುದ್ರ ತೀರದಲ್ಲಿ ಭಾರತೀಯ ನೌಕಾಪಡೆಯ ಸಹಕಾರದೊಂದಿಗೆ ಭಾರತೀಯ ವಾಯುಪಡೆ ಸುಖೋಯ್-30 ಜೆಟ್ ಯುದ್ಧ ವಿಮಾನದ ಮೂಲಕ ನಿಖರ ಗುರಿ ತಲುಪುವ ಪರೀಕ್ಷೆ ಮಾಡಿತ್ತು. ಈ ವೇಳೆ ಮೊದಲು ನೌಕಾ ಮಾರ್ಗವಾಗಿ ಕ್ಷಿಪಣಿ ಪರೀಕ್ಷೆ ನಡೆಸಲಾಗಿತ್ತು.

ಐಎನ್‌ಎಸ್ ಡೆಲ್ಲಿ ಯುದ್ಧನೌಕೆ ಮೂಲಕ ಕ್ಷಿಪಣಿ ಪ್ರಯೋಗ ಮಾಡಲಾಗಿದ್ದು, ಈ ವೇಳೆ ಕ್ಷಿಪಣಿಗೆ ಗುರಿಯಾಗಿ ಮತ್ತೊಂದು ನೌಕೆಯನ್ನು ನೀಡಲಾಗಿತ್ತು. ಮೊದಲ ಪರೀಕ್ಷೆಯಲ್ಲಿ ನೌಕೆಯನ್ನು ಹೊಡೆದುರುಳಿಸುವಲ್ಲಿ ಕ್ಷಿಪಣಿ ಯಶಸ್ವಿಯಾಗಿತ್ತು.

ಬಳಿಕ ಭಾರತೀಯ ವಾಯುಪಡೆಯ Su-30MKI ಯುದ್ಧ ವಿಮಾನದ ಮೂಲಕ ವಾಯುನೆಲೆಯಿಂದ ಹೊರಟು ಅದೇ ಹಡಗಿನ ಮೇಲೆ ದಾಳಿ ಮಾಡಿತ್ತು. ಈ ವೇಳೆಯೂ ಬ್ರಹ್ಮೋಸ್ ಕ್ಷಿಪಣಿ ಹಡಗನ್ನು ಯಶಸ್ವಿಯಾಗಿ ಹೊಡೆದರುಳಿಸಿತ್ತು.
ಇನ್ನು ಸಿಡಿತಲೆಯೊಂದಿಗೆ ಕ್ಷಿಪಣಿ ಸತತ ಎರಡು ಬಾರಿ ಹೊಡೆದ ಪರಿಣಾಮ ಹಡಗು ಭಾರಿ ಹಾನಿಗೀಡಾಗಿ ಸಮುದ್ರದಲ್ಲೇ ಮುಳುಗಿತು ಎನ್ನಲಾಗಿದೆ.

ಈ ಕುರಿತು ಮಾಹಿತಿ ನೀಡಿರುವ ಭಾರತೀಯ ವಾಯುಸೇನೆ ಮತ್ತು ನೌಕಾದಳದ ಅಧಿಕಾರಿಗಳು, ಕ್ಷಿಪಣಿಯು ಪ್ರತೀ ಗಂಟೆಗೆ 3000 ಕಿ.ಮೀ ವೇಗದಲ್ಲಿ ಗುರಿಯನ್ನು ನಿಖರವಾಗಿ ಧ್ವಂಸ ಮಾಡಿದೆ. If you have any questions about https://clickmiamibeach.com/ this privacy policy, please contact us. ಕ್ಷಿಪಣಿಯ ಈ ವೇಗವು ಶತ್ರುರಾಷ್ಟ್ರಗಳ ವಾಯು ರಕ್ಷಣಾ ವ್ಯವಸ್ಥೆಗಳಿಂದ ತಪ್ಪಿಸಿಕೊಂಡು ಗುರಿಯನ್ನು ತಲುಪಲು ನೆರವಾಗುತ್ತದೆ. ಈ ವೇಗದಲ್ಲಿ ಕ್ಷಿಪಣಿಯನ್ನು ಗುರುತಿಸುವುದೂ ಕೂಡ ಕಷ್ಟಕರವಾಗುತ್ತದೆ ಎಂದು ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

22 ಸಾವಿರ ಕೋಟಿ ರೂ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದ ಮೋದಿ

Thu Apr 21 , 2022
  ಗುಜರಾತ್ನ ದಾಹೋದ್ನಲ್ಲಿ ಬುಧವಾರ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು, 22 ಸಾವಿರ ಕೋಟಿ ರೂಪಾಯಿ ಮೊತ್ತದ ನಾನಾ ಅಭಿವೃದ್ಧಿ ಯೋಜನೆಗಳನ್ನು ಉದ್ಘಾಟಿಸಿದರು ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ದಾಹೋದ್ನ ರೈಲ್ವೆ ಉತ್ಪಾದನಾ ಘಟ ಕದಲ್ಲಿ 9 ಸಾವಿರ ಎಚ್.ಪಿ ಎಲೆಕ್ಟ್ರಿಕ್ ಲೋಕೊಮೋಟಿವ್ಸ್ ಉತ್ಪಾದನಾ ಯೋಜನೆ ಇವುಗಳಲ್ಲಿ ಸೇರಿವೆ. 1926 ರಲ್ಲಿ ಸ್ಥಾಪನೆಯಾಗಿರುವ ದಾಹೋದ್ ರೈಲ್ವೆ ಕಾರ್ಯಾಗಾರವನ್ನು ಸ್ಟೀಮ್ ಲೋಕೊಮೋಟಿವ್ಸ್ನಿಂದ ಎಲೆಕ್ಟ್ರಿಕ್ ಲೋಕೊಮೋಟಿವ್ಸ್ಗೆ ಪರಿವರ್ತಿಸುವ ಉತ್ಪಾದನಾ ಯೋಜನೆಯು […]

Advertisement

Wordpress Social Share Plugin powered by Ultimatelysocial