BREAKING: ನಾಳೆಗೆ ‘ಲೋಕಸಭೆ ಕಲಾಪ’ ಮುಂದೂಡಿಕೆ | Parliament special session

ವದೆಹಲಿ: ಮಹಿಳೆಯರಿಗೆ ಮೀಸಲಾತಿ ಕಲ್ಪಿಸೋ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದ ನಂತ್ರ, ವಿಪಕ್ಷಗಳ ಗದ್ದಲ ಕೋಲಾಹದ ಸಂಸತ್ ನಲ್ಲಿ ಉಂಟಾಯಿತು. ಈ ಹಿನ್ನಲೆಯಲ್ಲಿ ಕಲಾಪವನ್ನು ನಾಳೆಗೆ ಸ್ಪೀಕರ್ ಮುಂದೂಡಿಕೆ ಮಾಡಿದ್ದಾರೆ.

ಸಂಸತ್, ವಿಧಾನಸಭೆಯಲ್ಲಿ ಶೇ.33ರಷ್ಟು ಮಹಿಳೆಯರಿಗೆ ಸ್ಥಾನದಲ್ಲಿ ಮೀಸಲಾತಿ ಕಲ್ಪಿಸೋ ಮಹತ್ವದ ಕಾಯ್ದೆಯನ್ನು ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಮಂಡಿಸಿತು.

ನೂತನ ಸಂಸತ್ ಭವನದಲ್ಲಿ ಸರ್ಕಾರವು ಮೊದಲ ಮಸೂದೆಯನ್ನ ಲೋಕಸಭೆಯ ಕಲಾಪಗಳಲ್ಲಿ ಪರಿಚಯಿಸಿತು. ಮೊದಲ ಮಸೂದೆ ಮಹಿಳಾ ಮೀಸಲಾತಿಗೆ ಸಂಬಂಧಿಸಿದ್ದು, ಇದಕ್ಕೆ ‘ನಾರಿ ಶಕ್ತಿ ವಂದನಾ ಕಾಯ್ದೆ’ ಎಂದು ಹೆಸರಿಡಲಾಗಿದೆ.

ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಮಹಿಳಾ ಮೀಸಲಾತಿ ಮಸೂದೆಯನ್ನು ಲೋಕಸಭೆಯಲ್ಲಿ ಮಂಡಿಸಿದರು. ಈ ಮಸೂದೆಯಡಿ 181 ಲೋಕಸಭಾ ಸ್ಥಾನಗಳನ್ನ ಮಹಿಳೆಯರಿಗೆ ಮೀಸಲಿಡಲಾಗುವುದು. ವಿಧಾನಸಭೆಯ ಶೇ.33ರಷ್ಟು ಸ್ಥಾನಗಳನ್ನ ಮಹಿಳೆಯರಿಗೆ ಮೀಸಲಿಡಲಾಗಿದೆ. ದೆಹಲಿ ವಿಧಾನಸಭೆಯಲ್ಲಿ ಶೇಕಡಾ 33ರಷ್ಟು ಸ್ಥಾನಗಳು ಮಹಿಳೆಯರಿಗೆ ಮೀಸಲಾಗಲಿವೆ. ಪರಿಶಿಷ್ಟ ಜಾತಿಗೆ ಮೀಸಲಾಗಿರುವ 84 ಸ್ಥಾನಗಳಲ್ಲಿ ಶೇ.33ರಷ್ಟು ಮಹಿಳೆಯರಿಗೆ ಮತ್ತು ಶೇ.33ರಷ್ಟು ಸ್ಥಾನಗಳನ್ನ ಪರಿಶಿಷ್ಟ ಪಂಗಡಗಳಿಗೆ ಮೀಸಲಿಡಲಾಗಿದೆ.

ಈ ಕಾಯ್ದೆಯನ್ನು ಮಂಡಿಸಿದ ಬಳಿಕ, ಲೋಕಸಭೆಯಲ್ಲಿ ಗದ್ದಲ, ಕೋಲಾಹರಕ್ಕೆ ಕಾರಣವಾದ ಕಾರಣ ಸ್ಪೀಕರ್ ಲೋಕಸಭಾ ಕಲಾಪವನ್ನು ನಾಳೆಗೆ ಮುಂದೂಡಿಕೆ ಮಾಡಿದ್ದಾರೆ.

Please follow and like us:

tmadmin

Leave a Reply

Your email address will not be published. Required fields are marked *

Next Post

Women's Reservation Bill : ರಾಜೀವ್​ ಗಾಂಧಿಯಿಂದ ಹಿಡಿದು ಮೋದಿಯವರೆಗೆ; ಮಹಿಳಾ ಮೀಸಲಾತಿ ವಿಧೇಯಕ ಸಾಗಿ ಬಂದ ಹಾದಿ

Tue Sep 19 , 2023
ನವ ದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ನೇತೃತ್ವದ ಕೇಂದ್ರ ಸಚಿವ ಸಂಪುಟ ಸೋಮವಾರ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಐತಿಹಾಸಿಕ ಮಹಿಳಾ ಮೀಸಲಾತಿ ವಿಧೇಯಕ (Women’s Reservation Bill) ಅಂಗೀಕರಿಸಿದೆ. ಮಹಿಳೆಯರಿಗೆ ಸಂಸತ್ತಿನಲ್ಲಿ ಶೇಕಡಾ 33ರಷ್ಟು ಮೀಸಲಾತಿ ನೀಡುವ ಈ ಮಸೂದೆ ಇದಾಗಿದೆ. ಅಂದರೆ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮಹಿಳೆಯರಿಗೆ ಕಲ್ಪಿಸಲಿದೆ. ಇದು ಭಾರತೀಯ ರಾಜಕೀಯದಲ್ಲಿ ದೀರ್ಘಕಾಲದಿಂದ ಬಿಸಿಬಿಸಿ ಚರ್ಚೆಗೆ ಕಾರಣವಾದ […]

Advertisement

Wordpress Social Share Plugin powered by Ultimatelysocial