BREAKING NEWS: ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಎಸ್.ಕೆ ಭಗವಾನ್ ವಿಧಿವಶ

 

 

ಬೆಂಗಳೂರು: ಕನ್ನಡದ ಖ್ಯಾತ ಚಿತ್ರದ ನಿರ್ದೇಶಕ ಎಸ್.ಕೆ.ಭಗವಾನ್ ಅವರು ಇಂದು ಬೆಳಿಗ್ಗೆ ಜಯದೇವ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು.

ಎಸ್..ಕೆ. ಭಗವಾನ್ (ಶ್ರೀನಿವಾಸ ಕೃಷ್ಣ ಅಯ್ಯಂಗಾರ್ ಭಗವಾನ್) ಕನ್ನಡ ಚಿತ್ರರಂಗದ ಒಬ್ಬ ಹಿರಿಯ ನಿರ್ದೇಶಕರು ಹಾಗೂ ನಿರ್ಮಾಪಕರು.

ಮತ್ತೊಬ್ಬ ಹಿರಿಯ ನಿರ್ದೇಶಕ ದೊರೈರಾಜ್ ಅವರೊಡನೆ ಅವರ ಜೋಡಿ ದೊರೈ-ಭಗವಾನ್ ಎಂದೇ ಪ್ರಸಿದ್ಧ. ಇವರಿಬ್ಬರೂ ಸೇರಿ 55 ಕನ್ನಡ ಚಿತ್ರಗಳನ್ನು ನಿರ್ದೇಶಿಸಿದ್ದಾರೆ. ಸದಭಿರುಚಿಯ ಚಿತ್ರಗಳನ್ನು ಮಾಡಿರುವ ಅವರು 24 ಕಾದಂಬರಿಗಳನ್ನು ಸಿನೆಮಾಗೆ ಅಳವಡಿಸಿದ್ದಾರೆ. ಪ್ರಸ್ತುತ ಅವರು ‘ಆದರ್ಶ ಸಿನೆಮಾ ಇನ್ಸ್ಟಿಟ್ಯೂಟ್‍ನ’ ಪ್ರಾಂಶುಪಾಲರಾಗಿದ್ದಾರೆ. ಸಿನೆಮಾ ನಿರ್ದೇಶನದಿಂದ ನಿವೃತ್ತಿ ಹೊಂದಿದ್ದರು.

ಎಸ್ ಕೆ ಭಗವಾನ್ ಜೀವನ

ಎಸ್.ಕೆ. ಭಗವಾನ್ ಅವರು 1933 ಜುಲೈ 3ರಂದು ತಮಿಳು ಬ್ರಾಹ್ಮಣ ಅಯ್ಯರ್ ಕುಟುಂಬದಲ್ಲಿ ಜನಿಸಿದರು. ಬೆಂಗಳೂರು ಹೈಸ್ಕೂಲಿನಲ್ಲಿ ವಿದ್ಯಾಭ್ಯಾಸ ಮಾಡಿದರು. ಯುವಕರಾಗಿದ್ದಾಗ ‘ಹಿರಣ್ಣಯ್ಯ ಮಿತ್ರ ಮಂಡಳಿ’ಯಲ್ಲಿ ನಾಟಕಗಳನ್ನು ಮಾಡುತ್ತಿದ್ದರು. 1956ರಲ್ಲಿ ಕಣಗಾಲ್ ಪ್ರಭಾಕರ ಶಾಸ್ತ್ರಿಗಳಿಗೆ ಸಹಾಯಕರಾಗಿ ಸಿನೆಮಾ ಜೀವನ ಆರಂಭಿಸಿದರು.

ಸಿನಿಮಾ ರಂಗದಲ್ಲಿ

1966ಲ್ಲಿ ಎಂ.ಸಿ. ನರಸಿಂಹಮೂರ್ತಿಯವರೊಡಗೂಡಿ ಸಂಧ್ಯಾರಾಗ ಸಿನೆಮಾ ನಿರ್ದೇಶಿಸಿದರು. ನಂತರ ದೊರೈ-ಭಗವಾನ್ ಜೋಡಿಯು ರಾಜಕುಮಾರ್ ನಾಯಕನಟನಾಗಿರುವ ‘ಜೇಡರ ಬಲೆ’ ಚಿತ್ರವನ್ನು ನಿರ್ದೆಶಿಸಿತು. ಇದು ಕನ್ನಡದಲ್ಲಿ ಜೇಮ್ಸ್ ಬಾಂಡ್‌ ಮಾದರಿಯ ಮೊದಲ ಚಿತ್ರವಾಗಿತ್ತು.

ಮುಂದಿನ ಅವರ ಎಲ್ಲಾ ಚಿತ್ರಗಳನ್ನು ಈ ನಿರ್ದೇಶಕದ್ವಯರು ಜೋಡಿಯಾಗೇ ನಿರ್ದೇಶಿಸಿದರು. ‘ಕಸ್ತೂರಿ ನಿವಾಸ’, ‘ಎರಡು ಕನಸು’, ‘ಬಯಲು ದಾರಿ’, ‘ಗಿರಿ ಕನ್ಯೆ’, ‘ಚಂದನದ ಗೊಂಬೆ’, ‘ವಸಂತ ಗೀತ’, ‘ಆಪರೇಷನ್ ಡೈಮಂಡ್ ರಾಕೆಟ್’, ‘ಹೊಸಬೆಳಕು’, ‘ಯಾರಿವನು’ ಸೇರಿದಂತೆ ಹಲವು ಯಶಸ್ವಿ ಸಿನಿಮಾಗಳನ್ನು ನಿರ್ದೇಶಿಸಿದರು. ಇವರ ೩೦ ಚಿತ್ರಗಳಲ್ಲಿ ಡಾ.ರಾಜಕುಮಾರ್ ನಾಯಕ ನಟರಾಗಿ ಅಭಿನಯಿಸಿದ್ದಾರೆ.

ಕೆಲವು ಚಿತ್ರಗಳಲ್ಲಿ ಅನಂತನಾಗ್ ಮತ್ತು ಲಕ್ಷ್ಮಿ ಮುಖ್ಯಪಾತ್ರಗಳಲ್ಲಿ ನಟಿಸಿದ್ದಾರೆ. ಎಸ್.ಕೆ ಭಗವಾನ್ ಸಿನಿಮಾ ರಂಗದಲ್ಲಿ 65 ವರ್ಷದ ಸುದೀರ್ಘ ಅನುಭವ ಹೊಂದಿದ್ದಾರೆ.

ದೊರೈರಾಜರ ಮರಣದ ನಂತರ ಇವರು ನಿರ್ದೇಶನದಿಂದ ನಿವೃತ್ತಿ ಹೊಂದಿದರು. 1992j ‘ಮಾಂಗಲ್ಯ ಬಂಧನ’ ದೊರೈ-ಭಗವಾನ್ ಜೋಡಿ ನಿರ್ದೇಶನದ ಕೊನೆಯ ಚಿತ್ರವಾಗಿತ್ತು.

ಪ್ರಶಸ್ತಿಗಳು

  • 2017ನೇ ಸಾಲಿನ ದಾದಾಸಾಹೇಬ್ ಫಾಲ್ಕೆ ಅಕಾಡಮಿ ಪ್ರಶಸ್ತಿ
  • ಕರ್ನಾಟಕ ಸರ್ಕಾರದಿಂದ 1995-96ನೇ ಸಾಲಿನ ಪುಟ್ಟಣ್ಣ ಕಣಗಾಲ್ ಪ್ರಶಸ್ತಿ.
  • 2010ರಲ್ಲಿ ರಾಜಕುಮಾರ್ ಸೌಹಾರ್ದ ಪ್ರಶಸ್ತಿ

ಹೀಗೆ ಕನ್ನಡ ಸಿನಿ ರಂಗದಲ್ಲಿ ವಿಶಿಷ್ಟ ರೀತಿಯ ನಿರ್ದೇಶಕರಾಗಿದ್ದಂತ ಎಸ್ ಕೆ ಭಗವಾನ್ ಅವರು, ಇಂದು ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

Please follow and like us:

Leave a Reply

Your email address will not be published. Required fields are marked *

Next Post

ಕುಂಭ ರಾಶಿ ಭವಿಷ್ಯ.

Mon Feb 20 , 2023
ಆಶಾವಾದಿಗಳಾಗಿರಿ ಮತ್ತು ಜೀವನದ ಉಜ್ವಲ ಬದಿಯನ್ನು ನೋಡಿ. ನಿಮ್ಮ ಆತ್ಮವಿಶ್ವಾಸಭರಿತ ನಿರೀಕ್ಷೆಗಳು ನಿಮ್ಮ ಭರವಸೆಗಳು ಮತ್ತು ಆಸೆಗಳನ್ನು ಸಾಕ್ಷಾತ್ಕಾರಗೊಳಿಸಲು ಸಹಾಯ ಮಾಡುತ್ತವೆ. ಜೀವನ ಸಂಗಾತಿಯೊಂದಿಗೆ ಹಣಕ್ಕೆ ಸಂಬಂಧಿಸಿದ ಯಾವುದೇ ವಿಷಯದ ಬಗ್ಗೆ ಜಗಳವಾಗುವ ಸಾಧ್ಯತೆ ಇದೆ. ಇಂದು ನಿಮ್ಮ ದುಂದುಗಾರಿಕೆಯ ಮೇಲೆ ನಿಮ್ಮ ಸಂಗಾತಿ ನಿಮಗೆ ಮಾತುಗಳು ಹೇಳಬಹುದು. ಮೊಮ್ಮಕ್ಕಳು ಅಪಾರ ಸಂತೋಷದ ಮೂಲವಾಗುತ್ತಾರೆ. ಸ್ಪಷ್ಟವಾಗಿ ಅರ್ಥಮಾಡಿಕೊಳ್ಳುವ ಮೂಲಕ ಮಾತ್ರ ನೀವು ನಿಮ್ಮ ಪತ್ನಿಗೆ ಭಾವನಾತ್ಮಕ ಬೆಂಬಲ ನೀಡಬಹುದು. ನೀವು […]

Advertisement

Wordpress Social Share Plugin powered by Ultimatelysocial