ಡ್ರಗ್ಸ್ ಹೊತ್ತೊಯ್ಯುತ್ತಿದ್ದ ಪಾಕಿಸ್ತಾನದ ಡ್ರೋನ್‌ಅನ್ನು ಹೊಡೆದುರುಳಿಸಿದ ಬಿಎಸ್‌ಎಫ್

ಫೆ.03. ಮಾದಕ ದ್ರವ್ಯವನ್ನು ಹೊತ್ತೊಯ್ಯುತ್ತಿದ್ದ ಪಾಕಿಸ್ತಾನದ ಡ್ರೋನ್ ಅನ್ನು ಪಂಜಾಬ್‌ನ ಅಂತಾರಾಷ್ಟ್ರೀಯ ಗಡಿಯಿಂದ ಭಾರತಕ್ಕೆ ಪ್ರವೇಶಿಸುತ್ತಿದ್ದ ವೇಳೆ ಗಡಿ ಭದ್ರತಾ ಪಡೆಗಳು (ಬಿಎಸ್‌ಎಫ್) ಹೊಡೆದುರುಳಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾಜ್ಯದ ಅಮೃತಸರ ಸೆಕ್ಟರ್‌ನ ಗಡಿ ಪೋಸ್ಟ್ ಹಿಂಭಾಗದ ಕಕ್ಕರ್ ಬಳಿ ಮಾನವ ರಹಿತ ವೈಮಾನಿಕ ವಾಹನವು ಕೆಳಗಿಳಿದಿದೆ. ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿಯ ಗಡಿ ಬೇಲಿ ಮತ್ತು ಶೂನ್ಯ ರೇಖೆಯ ನಡುವೆ ಡ್ರೋನ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಕ್ವಾಡ್‌ಕಾಪ್ಟರ್‌ನೊಂದಿಗೆ ಶಂಕಿತ ಹೆರಾಯಿನ್ ಹೊಂದಿರುವ ಮೂರು ಕೆಜಿ ತೂಕದ ಪ್ಯಾಕೆಟ್ ಅನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಗರ್ಭಿಣಿ ವಿದ್ಯಾರ್ಥಿನಿ ಪ್ರಕರಣದಲ್ಲಿ ಮಹತ್ವದ ತೀರ್ಪು

Fri Feb 3 , 2023
ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿದ್ದ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಗರ್ಭಪಾತ ಮಾಡಿಸಿಕೊಳ್ಳಲು ತನಗೆ ಅನುಮತಿ ನೀಡಬೇಕೆಂದು ಕೋರಿ ವಿದ್ಯಾರ್ಥಿನಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಈ ತೀರ್ಪು ಪ್ರಕಟವಾಗಿದೆ. ಪ್ರಕರಣದ ವಿವರ: 20 ವರ್ಷದ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು ತನಗೆ ಗರ್ಭಪಾತ ಮಾಡಿಸಿಕೊಳ್ಳಲು ಅವಕಾಶ ನೀಡುವಂತೆ ಕೋರಿದ್ದಳು. ಆದರೆ ಈಗಾಗಲೇ 29 ವಾರಗಳು ತುಂಬಿರುವ ಕಾರಣ ತಾಯಿ ಮತ್ತು ಭ್ರೂಣದ ಹಿತದೃಷ್ಟಿಯಿಂದ ಗರ್ಭಪಾತಕ್ಕೆ ನಿರಾಕರಿಸಲಾಗಿದೆ. ಆದರೆ ಮಗು ಹೆತ್ತ ಬಳಿಕ ದತ್ತು […]

Advertisement

Wordpress Social Share Plugin powered by Ultimatelysocial