BSNL:ಬಿಎಸ್‌ಎನ್‌ಎಲ್‌ನ ಈ ಯೋಜನೆಗಳಲ್ಲಿ ಡೇಟಾ ಜೊತೆಗೆ ಬಿಗ್ ವ್ಯಾಲಿಡಿಟಿ!

ರಿಲಯನ್ಸ್‌ ಜಿಯೋ, ಏರ್‌ಟೆಲ್ ಮತ್ತು ವಿ ಟೆಲಿಕಾಂಗಳು (ವೊಡಾಫೋನ್ ಐಡಿಯಾ) ಇತ್ತೀಚಿಗೆ ತಮ್ಮ ಪ್ರಿಪೇಯ್ಡ್ ಯೋಜನೆಗಳ ದರ ಏರಿಕೆ ಮಾಡಿ ಗ್ರಾಹಕರಿಗೆ ಅಚ್ಚರಿ ನೀಡಿವೆ. ಈ ನಡುವೆ ಸರ್ಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ಟೆಲಿಕಾಂ ಆಕರ್ಷಕ ಯೋಜನೆಗಳನ್ನು ನೀಡುತ್ತ ಮುನ್ನಡೆದಿದೆ.

ಬಿಎಸ್‌ಎನ್‌ಎಲ್‌ ಟೆಲಿಕಾಂನ ಕೆಲವು ಪ್ರಿಪೇಯ್ಡ್‌ ಯೋಜನೆಗಳು ದೈನಂದಿನ ಡೇಟಾ ಜೊತೆಗೆ ಬಿಗ್ ವ್ಯಾಲಿಡಿಟಿ ಪ್ರಯೋಜನ ಪಡೆದಿದ್ದು, ಚಂದಾದಾರರ ಗಮನ ಸೆಳೆದಿವೆ.

ಹೌದು, ಬಿಎಸ್‌ಎನ್‌ಎಲ್‌ ಟೆಲಿಕಾಂ ಪ್ರಿಪೇಯ್ಡ್‌ ಆಕರ್ಷಕ ಪ್ರಯೋಜನ ಒಳಗೊಂಡ ಯೋಜನೆಗಳ ಆಯ್ಕೆ ಪಟ್ಟಿ ಹೊಂದಿದೆ. ಆ ಪೈಕಿ 500ರೂ. ಒಳಗಿನ ಕೆಲವು ಯೋಜನೆಗಳು ಆಕರ್ಷಕ ಡೇಟಾ ಜೊತೆಗೆ ಅತ್ಯುತ್ತಮ ವ್ಯಾಲಿಡಿಟಿ ಸೌಲಭ್ಯವನ್ನು ಒಳಗೊಂಡಿವೆ. ಅಧಿಕ ಡೇಟಾ ಜೊತೆಗೆ ವ್ಯಾಲಿಡಿಟಿ ಬಯಸುವ ಗ್ರಾಹಕರಿಗೆ ಈ ಯೋಜನೆಗಳು ಅತ್ಯುತ್ತಮ ಎನಿಸಲಿವೆ. ಹಾಗಾದರೇ ಬಿಎಸ್‌ಎನ್‌ಎಲ್‌ನ 500ರೂ. ಒಳಗಿನ. ಬೆಸ್ಟ್‌ ವ್ಯಾಲಿಡಿಟಿ ಪ್ಲ್ಯಾನ್‌ಗಳು ಹಾಗೂ ಇತರೆ ಯೋಜನೆಗಳ ಪ್ರಯೋಜನಗಳೆನು ಎಂಬುದನ್ನು ಮುಂದೆ ತಿಳಿಯೋಣ ಬನ್ನಿರಿ.

ಬಿಎಸ್‌ಎನ್‌ಎಲ್‌ 299ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು;

ಬಿಎಸ್‌ಎನ್‌ಎಲ್‌ 299ರೂ. ಪ್ರೀಪೇಯ್ಡ್‌ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯ ವ್ಯಾಲಿಡಿಟಿ 60 ದಿನಗಳು ಮಾತ್ರ. ಹಾಗೆಯೇ ಇದು ಮೊದಲ ರೀಚಾರ್ಜ್ ಕೂಪನ್ (FRC) ಯೋಜನೆ ಆಗಿದೆ. ನಿಗದಿತ 2GB ಡೇಟಾ ಮುಗಿದ ಬಳಿಕ 40 Kbps ವೇಗದಲ್ಲಿ ಇಂಟರ್ನೆಟ್ ಮುಂದುವರೆಯಲಿದೆ.

 

ಬಿಎಸ್‌ಎನ್‌ಎಲ್‌ 397ರೂ. ಪ್ರೀಪೇಯ್ಡ್‌ ಪ್ಲ್ಯಾನ್ ಪ್ರಯೋಜನಗಳು;

ಬಿಎಸ್‌ಎನ್‌ಎಲ್‌ 397ರೂ. ಪ್ರೀಪೇಯ್ಡ್‌ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 300 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದ್ದು, ಆದರೆ ಡೇಟಾ, ಎಸ್‌ಎಮ್‌ಎಸ್‌, ಉಚಿತ ಕಾಲರ್ ಟ್ಯೂನ್ ಪ್ರಯೋಜನಗಳು ಆರಂಭಿಕ 60 ದಿನಗಳು ಮಾತ್ರ ಲಭ್ಯವಾಗಲಿವೆ.

 

ಬಿಎಸ್‌ಎನ್‌ಎಲ್‌ 499ರೂ. ಪ್ರೀಪೇಯ್ಡ್‌ ಪ್ಲ್ಯಾನ್;

ಬಿಎಸ್‌ಎನ್‌ಎಲ್‌ 499ರೂ. ಪ್ರೀಪೇಯ್ಡ್ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಹೆಚ್ಚುವರಿಯಾಗಿ ಬಿಎಸ್‌ಎನ್‌ಎಲ್ ಟ್ಯೂನ್ ಹಾಗೂ ಜಿಂಗ್ ಆಪ್ ಲಭ್ಯವಾಗಲಿದೆ.

 

ಬಿಎಸ್‌ಎನ್‌ಎಲ್‌ 599ರೂ. ಪ್ರೀಪೇಯ್ಡ್‌ ಪ್ಲ್ಯಾನ್;

ಬಿಎಸ್‌ಎನ್‌ಎಲ್‌ ಈ ಯೋಜನೆಯಲ್ಲಿ ಪ್ರತಿದಿನ 5GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಪ್ರತಿದಿನ 250 ನಿಮಿಷಗಳ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 90 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 450 GB ಡೇಟಾ ಪ್ರಯೋಜನ ದೊರೆಯುತ್ತದೆ.

 

ಬಿಎಸ್‌ಎನ್‌ಎಲ್‌ 666ರೂ. ಪ್ರೀಪೇಯ್ಡ್‌ ಪ್ಲ್ಯಾನ್;

ಬಿಎಸ್‌ಎನ್‌ಎಲ್‌ ಈ ಯೋಜನೆಯಲ್ಲಿ ಪ್ರತಿದಿನ 2GB ಡೇಟಾ ಸೌಲಭ್ಯ ದೊರೆಯುತ್ತದೆ. ಇದರೊಂದಿಗೆ ಪ್ರತಿದಿನ 100 ಎಸ್‌ಎಮ್‌ಎಸ್‌ ಹಾಗೂ ಪ್ರತಿದಿನ ಅನಿಯಮಿತ ವಾಯಿಸ್‌ ಕರೆಯ ಸೌಲಭ್ಯಗಳು ಲಭ್ಯವಾಗುತ್ತವೆ. ಇನ್ನು ಈ ಯೋಜನೆಯು ಒಟ್ಟು 120 ದಿನಗಳ ವ್ಯಾಲಿಡಿಟಿ ಅವಧಿಯನ್ನು ಹೊಂದಿದೆ. ಒಟ್ಟು ಪೂರ್ಣ ಅವಧಿಯ ವ್ಯಾಲಿಡಿಟಿಯಲ್ಲಿ ಒಟ್ಟು 240GB ಡೇಟಾ ಪ್ರಯೋಜನ ದೊರೆಯುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಫೋಟೋ ಶೂಟ್​ ಮಾಡ್ಸಿ ಪ್ರೊಫೈಲ್​ ಹಿಡಿದು ಓಡಾಡ್ತಿದ್ದೆ | Huttu Habbada Shubhashayagalu | Sharanya Shetty |

Fri Dec 31 , 2021
ಫೋಟೋ ಶೂಟ್​ ಮಾಡ್ಸಿ ಪ್ರೊಫೈಲ್​ ಹಿಡಿದು ಓಡಾಡ್ತಿದ್ದೆ | Huttu Habbada Shubhashayagalu | Sharanya Shetty | Please follow and like us:

Advertisement

Wordpress Social Share Plugin powered by Ultimatelysocial