ಭಾರತೀಯ ರೈಲ್ವೆಗೆ ಬಜೆಟ್ ಬಂಪರ್: ನೈಋತ್ಯ ರೈಲ್ವೆ ವಲಯದಲ್ಲಿಯೂ ಹೊಸ ಸಂಚಲನ.

ಭಾರತೀಯ ರೈಲ್ವೆಗೆ ಬಜೆಟ್ ಬಂಪರ್: ನೈಋತ್ಯ ರೈಲ್ವೆ ವಲಯದಲ್ಲಿಯೂ ಹೊಸ ಸಂಚಲನ

ಹುಬ್ಬಳ್ಳಿ: ಕೇಂದ್ರ ಸರ್ಕಾರದ ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಪ್ರಸ್ತುತ ಪಡಿಸಿರುವ ಕೇಂದ್ರ ಬಜೆಟ್ ಭಾರತೀಯ ರೈಲ್ವೆಗೆ ಬಹುದೊಡ್ಡ ಕೊಡುಗೆ ನೀಡಿದೆ. ಈ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ವಲಯಕ್ಕೂ ಪೂರಕವಾದ ಬಜೆಟ್ ಇದಾಗಿದ್ದು, ಅಭಿವೃದ್ಧಿಗೆ ಸೂಕ್ತ ರೀತಿಯಲ್ಲಿ ವ್ಯವಸ್ಥೆ ಕಲ್ಪಿಸುವ ಬಜೆಟ್ ಆಗಿದೆ. ಈ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ವಲಯ ಕೂಡ ಸ್ವಾಗತಿಸಿದೆ.

ಹೌದು.. ರೈಲ್ವೆಗೆ 2.40 ಲಕ್ಷ ಕೋಟಿ ರೂ ಗಳ ಬಂಡವಾಳ ಒದಗಿಸಲಾಗಿದ್ದು, ಇದು 2013-14ರ ಹಣಕಾಸು ವರ್ಷದಲ್ಲಿ ಮಾಡಿದ ವೆಚ್ಚದ ಒಂಬತ್ತು ಪಟ್ಟು ಹೆಚ್ಚು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಭಾರತೀಯ ರೈಲ್ವೆ ಪ್ರಮುಖ ವಲಯ ವ್ಯವಸ್ಥಾಪಕರ ಜೊತೆಗೆ ಸಂವಾದ ನಡೆಸಿ ಮಾಹಿತಿ ನೀಡಿದ್ದಾರೆ. ಈ ನಿಟ್ಟಿನಲ್ಲಿ ನೈಋತ್ಯ ರೈಲ್ವೆ ವ್ಯವಸ್ಥಾಪಕ ನಿರ್ದೇಶಕರಾದ ಸಂಜೀವ ಕಿಶೋರ್ ನೇತೃತ್ವದಲ್ಲಿ ಕೂಡ ವರ್ಚುವಲ್ ಮೂಲಕ ಸಭೆ ನಡೆಸಿ ಮಾಹಿತಿ ನೀಡಿದ್ದಾರೆ. ಸಂವಾದದ ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿರುವ ರೈಲ್ವೆ ವ್ಯವಸ್ಥಾಪಕರು, ನೈಋತ್ಯ ರೈಲ್ವೆ ವಲಯದ ಇಲೆಕ್ಟ್ರಿಪಿಕೇಶನ್, ಡಬ್ಲಿಂಗ್ ಹಾಗೂ ಹೊಸ ನಿಲ್ದಾಣಗಳ ನಿರ್ಮಾಣ ಹಾಗೂ ಪುನರ್ ಅಭಿವೃದ್ಧಿಗೆ ಸಾಕ್ಷಿಯಾಗಲಿದೆ ಎಂದಿದ್ದಾರೆ.

ಬೈಟ್; ಸಂಜೀವ ಕಿಶೋರ್ (ಎಸ್.ಡಬ್ಲೂ. ಆರ್. ಜಿಎಂ)

ಇನ್ನೂ ಕಲ್ಲಿದ್ದಲು, ರಸಗೊಬ್ಬರ ಮತ್ತು ಆಹಾರ ಧಾನ್ಯ ಕ್ಷೇತ್ರಗಳನ್ನು ಪರಸ್ಪರ ಸಂಪರ್ಕಿಸಲು 100 ನಿರ್ಣಾಯಕ ಸಾರಿಗೆ ಯೋಜನೆಗಳನ್ನು ಗುರುತಿಸಲಾಗಿದೆ. ಈ ಯೋಜನೆಗೆ ಸುಮಾರು 75,000 ಕೋಟಿ ಹೂಡಿಕೆ ಮಾಡಲಾಗುವುದು. ಇದರಲ್ಲಿ 15,000 ಕೋಟಿ ಖಾಸಗಿ ಮೂಲಗಳಿಂದ ಆದ್ಯತೆಯನುಸಾರ ಪಡೆದುಕೊಳ್ಳಲಾಗುವುದು ಎಂದು ತಿಳಿಸಿದರು. ರೈಲ್ವೇ ಪ್ರಯಾಣಿಕರನ್ನು ಗಮದಲ್ಲಿಟ್ಟುಕೊಂಡು ರಾಜಧಾನಿ, ಶತಾಬ್ದಿ, ಡುರೊಂಟೊ, ಹಮಸಫರ್ ಮತ್ತು ತೇಜಸ್‌ನಂತಹ ಪ್ರೀಮಿಯರ್ ರೈಲುಗಳ 1,000ಕ್ಕೂ ಹೆಚ್ಚು ಬೋಗಿಗಳನ್ನು ನವೀಕರಿಸಲಾಗುತ್ತದೆ. ಈ ಬೋಗಿಗಳನ್ನು ಪ್ರಯಾಣಿಕರಿಗೆ ಅನುಕೂಲವಾಗುವಂತೆ ನಿರ್ಮಿಸಲಾಗುತ್ತದೆ.‌ರೈಲುಗಳ ವೇಗವನ್ನು ಹೆಚ್ಚಿಸಲು ಹಲವು ಕಡೆಗಳಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ಪ್ರಾರಂಭಿಸಲು ರೈಲ್ವೆಯು ಯೋಜನೆ ರೂಪಿಸಿದೆ. ಇದಕ್ಕೆ ಪೂರಕವಾಗಿ ಹಳೆಯ ಹಳಿಗಳನ್ನು ಬದಲಾಯಿಸಲು ಬೇಕಾದ ಕ್ರಮಕೈಗೊಳ್ಳಲಾಗುತ್ತದೆ. ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ರೈಲ್ವೆಯು ಇನ್ನೂ 100 ವಿಸ್ಟಾಡೋಮ್ ಕೋಚ್‌ಗಳನ್ನು ತಯಾರಿಸಲು ಮುಂದಾಗಿದೆ ಸಚಿವೆ ನಿರ್ಮಲಾ ಸೀತಾರಾಮನ್​ ಹೇಳಿದರು.ಇನ್ನು ಬಜೆಟ್‌ನಲ್ಲಿ, 35 ಹೈಡ್ರೋಜನ್ ಇಂಧನ ಆಧಾರಿತ ರೈಲುಗಳು, 4,500 ಹೊಸದಾಗಿ ವಿನ್ಯಾಸಗೊಳಿಸಲಾದ ಆಟೋಮೊಬೈಲ್ ಕ್ಯಾರಿಯರ್ ಕೋಚ್‌ಗಳು, 5000 ಎಲ್​ಹೆಚ್​ಬಿ ಕೋಚ್‌ಗಳು ಮತ್ತು 58000 ವ್ಯಾಗನ್‌ಗಳನ್ನು ತಯಾರಿಸಲು ಸರ್ಕಾರ ಪ್ರಸ್ತಾಪಿಸಿದೆ. 2023ರ ಕೇಂದ್ರ ಬಜೆಟ್‌ನಲ್ಲಿ ರೈಲ್ವೆಗೆ 1.4 ಲಕ್ಷ ಕೋಟಿ ರೂ.ಗಳನ್ನು ಮೀಸಲಿಡಲಾಗಿದ್ದು, ಇದರಲ್ಲಿ 1.37 ಲಕ್ಷ ಕೋಟಿ ಬಂಡವಾಳ ವೆಚ್ಚ ಮತ್ತು 3,267 ಲಕ್ಷ ಕೋಟಿ ಆದಾಯ ವೆಚ್ಚಕ್ಕೆ ಮೀಸಲಿಡಲಾಗಿದೆ.

ಒಟ್ಟಿನಲ್ಲಿ ರೈಲ್ವೆ ಇಲಾಖೆಗೆ 2.40 ಲಕ್ಷ ಕೋಟಿ ರೂ. ಮೀಸಲಿಡಲಾಗಿದ್ದು, 10 ಲಕ್ಷ ಕೋಟಿ ಮೂಲ ಬಂಡವಾಳ ಹೂಡಿಕೆ ಮಾಡಲಾಗುತ್ತದೆ. ಇದು ಭಾರತದ ಇತಿಹಾಸದಲ್ಲಿಯೇ ಅತಿದೊಡ್ಡ ಹೂಡಿಕೆಯಾಗಿದೆ. ರಾಜ್ಯ ಸರ್ಕಾರಗಳಿಗೆ ಸಾಲ ಸೌಲಭ್ಯ ಇನ್ನೊಂದು ವರ್ಷ ಮುಂದುವರಿಕೆಯಾಗಲಿದೆ ಎಂದು ಹೇಳಿದ್ದಾರೆ. 75 ಸಾವಿರ ಕೋಟಿ ರೂಗಳನ್ನು ಹೊಸ ರೈಲ್ವೇ ಯೋಜನೆಗೆ ಘೋಷಣೆ ಮಾಡಿದ್ದಾರೆ.ಜೊತೆಗೆ 400 ಹೊಸ ವಂದೇ ಭಾರತ್ ರೈಲುಗಳನ್ನು ಪರಿಚಯಿಸಲಾಗುವುದು ಎಂದು ಹೇಳಿದರು. ಈ ರೈಲುಗಳನ್ನು ಮುಂದಿನ ಮೂರು ವರ್ಷಗಳಲ್ಲಿ ನಿರ್ಮಿಸಲಾಗುತ್ತದೆ ಎಂದು ತಮ್ಮ ಬಜೆಟ್​ ಭಾಷಣದಲ್ಲಿ ವಿವರಿಸಿದರು.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಚುನಾವಣೆ ಸಮೀಪಿಸುತ್ತಿದ್ದಂತೆ ಮತಕ್ಷೇತ್ರದಲ್ಲಿ ಶುರುವಾಯಿತು ಪಕ್ಷಾಂತರ ಪರ್ವ.

Thu Feb 2 , 2023
ಚುನಾವಣೆ ಸಮೀಪಿಸುತ್ತಿದ್ದಂತೆ ಮತಕ್ಷೇತ್ರದಲ್ಲಿ ಶುರುವಾಯಿತು ಪಕ್ಷಾಂತರ ಪರ್ವ *ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುತ್ತಿರುವ ಯುವಕರು. * ಇನ್ನೇನು ಚುನಾವಣೆ ದಿನಾಂಕ ಅತಿ ಶೀಘ್ರದಲ್ಲಿ ಘೋಷಣೆ ಆಗಲಿದ್ದು ಇದರ ಮಧ್ಯೆ ಕಾಗವಾಡ ಮತ ಕ್ಷೇತ್ರದಲ್ಲಿ ಬಾರಿ ಪ್ರಮಾಣದಲ್ಲಿ ಬದಲಾವಣೆಗಳು ನಡೆಯುತ್ತಿವೆ ಕರ್ನಾಟಕ ಹಾಗೂ ಕೇಂದ್ರದಲ್ಲಿಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದರೂ ಸಹ ಕಾರ್ಯಕರ್ತರಿಗೆ ಬೇಸತ್ತು ಕಾಂಗ್ರೆಸ್ ಪಕ್ಷದತ್ತ ಮುಖ ಮಾಡುತ್ತಿದ್ದಾರೆ. ಬೆಳಗಾವಿ ಜಿಲ್ಲೆ ಕಾಗವಾಡ ತಾಲ್ಲೂಕಿನ ಸಾವಿರಾರು ಯುವಕರು ಹಾಗೂ ಪ್ರಜ್ಞಾವಂತರು ಬಿಜೆಪಿ ಬಿಟ್ಟು […]

Advertisement

Wordpress Social Share Plugin powered by Ultimatelysocial