ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್‌ನಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಸೆಸ್ ಏರಿಕೆ ಮಾಡಲಾಗಿದೆ. ಇದರ ಪರಿಣಾಮದಿಂದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಲಿದೆ.
ಹೊಸದಿಲ್ಲಿ: ಕೇಂದ್ರ ಸರಕಾರ ಮಂಡಿಸಿರುವ ಬಜೆಟ್‌ನಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಹೆಚ್ಚಳವಾಗುವ ಸಾಧ್ಯತೆ ನಿಚ್ಚಳವಾಗಿದೆ.
ಪೆಟ್ರೋಲ್ ಪ್ರತಿ ಲೀಟರ್‌ಗೆ 2.5 ರೂ ಹಾಗೂ ಡೀಸೆಲ್ ಪ್ರತಿ ಲೀಟರ್ 2.3 ರೂ. ಏರಿಕೆಯಾಗುವ ನಿರೀಕ್ಷೆ ಇದೆ ಎಂದು ತಜ್ಞರು ತಿಳಿಸಿದ್ದಾರೆ.
ಬಜೆಟ್ 2019-2020 ಬಜೆಟ್‌ನಲ್ಲಿ ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಏರಿಕೆ ಮಾಡಲಾಗಿದೆ. ಇದರಿಂದ 28 ಸಾವಿರ ಕೋಟಿ ರೂ. ಆದಾಯ ನಿರೀಕ್ಷೆ ಮಾಡಲಾಗಿದೆ.