ಬಸ್‌ಗಳ ಸಂಚಾರ ಇರುವುದಿಲ್ಲವೇ? ಎಂಬ ಆತಂಕ ಬೇಡ.

ಬಸ್‌ಗಳ ಸಂಚಾರ ಇರುವುದಿಲ್ಲವೇ? ಎಂಬ ಆತಂಕ ಬೇಡ. ಬೆಂಗಳೂರು ನಗರದ ಜನರ ಜೀವನಾಡಿಯಾದ ಬಸ್‌ಗಳು ಎಂದಿನಂತೆ ಸಂಚಾರ ನಡೆಸಲಿವೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಜನವರಿ 24ರ ಮಂಗಳವಾರ ಪ್ರತಿಭಟನೆಗೆ ಕರೆ ನೀಡಿದೆ ಈ ಹಿನ್ನಲೆಯಲ್ಲಿ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬ ಆತಂಕವಿತ್ತು.

ಡಬಲ್‌ ಡೆಕ್ಕರ್‌ ಎಸಿ ಬಸ್‌ಗೆ ಟೆಂಡರ್‌ ಆಹ್ವಾನಿಸಿದ ಬಿಎಂಟಿಸಿ

ಸೋಮವಾರ ಪ್ರಕಟಣೆ ಮೂಲಕ ಬಿಎಂಟಿಸಿ ಮಾಹಿತಿ ನೀಡಿದ್ದು ಬೆಳಗ್ಗೆ 11 ರಿಂದ ಸಂಜೆ 5.30ರ ತನಕ ನಾಲ್ಕು ಸಾರಿಗೆ ಸಂಸ್ಥೆಗಳ ವ್ಯಾಪ್ತಿಯ ವಿಭಾಗೀಯ ಕಚೇರಿಗಳ ಮುಂದೆ ಸತ್ಯಾಗ್ರಹ ನಡೆಸಲು ಕರೆ ನೀಡಲಾಗಿದೆ.

ಬೆಂಗಳೂರು ರೈಲು ಪ್ರಯಾಣಿಕರಿಗೆ ಸಿಹಿಸುದ್ದಿ ಕೊಟ್ಟ ಬಿಎಂಟಿಸಿ

ಆದರೆ ಇದರಿಂದಾಗಿ ಬಸ್‌ಗಳ ಕಾರ್ಯಾಚರಣೆಯಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗುವುದಿಲ್ಲ. ಬಸ್‌ಗಳ ಕಾರ್ಯಾಚರಣೆ ಎಂದಿನಂತೆ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ.

ಬೈಕ್ ಸವಾರನಿಗೆ ಥಳಿಸಿದ್ದ ಬಿಎಂಟಿಸಿ ಬಸ್ ಚಾಲಕನ ಅಮಾನತು

4 ಪ್ರಮುಖ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಮಂಗಳವಾರ ಬೆಂಗಳೂರಿನ ಪ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲಿದೆ.

ನೂರಾರು ಸಂಖ್ಯೆಯ ನೌಕರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದರಿಂದ ಬಸ್‌ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ನಿರೀಕ್ಷೆ ಇದೆ ಎಂದು ಅಂದಾಜಿಸಲಾಗಿತ್ತು. ಆದರೆ ಪತ್ರಿಕಾ ಪ್ರಕಟಣೆ ಮೂಲಕ ಜನರ ಆತಂಕ ದೂರಗೊಳಿಸಲಾಗಿದೆ.

ಬಸ್ ಸಂಚಾರ ಎದಿನಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಕರೆ ನೀಡಿರುವ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ನೌಕರರು ಸಹ ಪಾಲ್ಗೊಳ್ಳಲಿದ್ದಾರೆ. ಆದರೆ ಬಸ್‌ಗಳ ಸಂಚಾರದಲ್ಲಿ ಯಾವುದೇ ವ್ಯತ್ಯಯ ಉಂಟಾಗುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ಸಹ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಮಧ್ಯಂತರ ರಕ್ಷಣೆ ತಡೆ ಆದೇಶ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಜಾ.

Mon Jan 23 , 2023
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣ ಸಂಬಂಧ ನೀಡಲಾಗಿದ್ದ ಮಧ್ಯಂತರ ರಕ್ಷಣೆ ಆದೇಶವನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ನವದೆಹಲಿ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧದ ಡಿ ನೋಟಿಫಿಕೇಷನ್ ಪ್ರಕರಣ ಸಂಬಂಧ ನೀಡಲಾಗಿದ್ದ ಮಧ್ಯಂತರ ರಕ್ಷಣೆ ಆದೇಶವನ್ನು ರದ್ದುಗೊಳಿಸುವಂತೆ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ಈ ಮೂಲಕ ಪ್ರಕರಣದಲ್ಲಿ ಯಡಿಯೂರಪ್ಪನವರಿಗೆ ಮತ್ತೊಮ್ಮೆ ನಿರಾಳತೆ ಸಿಕ್ಕಿದೆ. ಡಿ ನೋಟಿಫಿಕೇಷನ್ […]

Advertisement

Wordpress Social Share Plugin powered by Ultimatelysocial