ಕೊಲ್ಲೂರು ಬಳ್ಳಿ ಬಸ್ ಮಗುಚಿ 6 ಜನ ಗಂಭೀರ ?

ಸಿಗಂಧೂರಿನಿಂದ ಕೊಲ್ಲೂರಿಗೆ ಯಾತ್ರಾರ್ಥಿಗಳನ್ನು ಕೊಂಡು ಸಾಗುತ್ತಿದ್ದ ಖಾಸಗಿ ಬಸ್ಸೊಂದು ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ ಉರುಳಿದೆ, ಹಲವರು  ಜನರು ಗಾಯಗೊಂಡ ಘಟನೆ ಜ.11ರ ಸಂಜೆ ನಡೆದಿದ್ದು.

ಅಪಘಾತದಿಂದಾಗಿ 22 ಮಂದಿ ಗಾಯಗೊಂಡಿದ್ದು ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.  ತಕ಼ಣ ಡಾ ರಾಬರ್ಟ್‌ ರೆಬೆಲ್ಲೋ ನೇತೃತ್ವದ ವೈದ್ಯರ ತಂಡ ,ಕರ್ತವ್ಯ ಮುಗಿಸಿ ತೆರಳಿದ್ದ ವೈದ್ಯರು ಹಾಗೂ ಸಿಬಂದಿಯನ್ನು  ಮತ್ತೆ ಕರೆಸಿ ಚಿಕಿತ್ಸೆ ಕೊಡಿಸಿದ್ದಾರೆ . 22 ಮಂದಿಯ ಪೈಕಿ  ಸಂಕ್ರಪ್ಪ (50), ರೂಪಾ (35),

ಶ್ಯಾಮಲಮ್ಮ (42), ರತ್ನಮ್ಮ (52), ವೆಂಕಟರಮಣ (45), ಚಂದ್ರಕಲಾ (43) ಅವರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಇಬ್ಬರು ಮಹಿಳೆಯರ ಕೈ ತುಂಡಾಗಿದ್ದು, ಇಬ್ಬರ ತಲೆಗೆ ಗಂಭೀರ ಗಾಯವಾಗಿದೆ.  ಗಾಯಾಳುಗಳು ಕೋಲಾರದ ಮುಳುಬಾಗಿಲು ಮೂಲದವರೆಂದು ತಿಳಿದುಬಂದಿದೆ. ಕೊಲ್ಲೂರು ಪೊಲೀಸರು ಸ್ಥಳೀಯರೊಂದಿಗೆ ಸೇರಿ ಜೆಸಿಬಿ ಬಳಸಿ ಮಗುಚಿ ಬಿದ್ದ ಬಸ್‌ ಅನ್ನು ಎತ್ತಿದ್ದರು  ಜನರು ಸರಿಯಾದ ಸಮಯಕ್ಕೆ ನೆರವಿಗೆ ಬಂದಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

 

 

 

 

 

 

 

 

 

 

Please follow and like us:

Leave a Reply

Your email address will not be published. Required fields are marked *

Next Post

ಮೇಕೆದಾಟು ಪಾದಯಾತ್ರೆಗೆ ಹೈಕೋರ್ಟ್ ಕೆಂಡಾ ಮಂಡಲ : ಕೆಪಿಸಿಸಿ, ರಾಜ್ಯ ಸರ್ಕಾರಕ್ಕೆ ನೊಟೀಸ್...

Wed Jan 12 , 2022
ಕಾಂಗ್ರೆಸ್​ ಮೇಕೆದಾಟು ಪಾದಯಾತ್ರೆ ಇಂದು  4ನೇ ದಿನಕ್ಕೆ ಕಾಲಿಡುತ್ತಿದ್ದಂತೆ ಪಾದಯಾತ್ರೆ ವಿರುದ್ಧ ಕೇಸ್ ಹೈಕೋರ್ಟ್ ಅಂಗಳಕ್ಕೆ ತಲುಪಿತ್ತು ಇಂದು ತುರ್ತು ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯದಲ್ಲಿ ಕೋವಿಡ್ ಸೋಂಕು ದಿನೇದಿನೇ ಹೆಚ್ಚಾಗುತ್ತಿರುವುದರ ಮಧ್ಯೆ ಪಾದಯಾತ್ರೆ ನಡೆಸುವ ಅಗತ್ಯವೇನಿದೆ ಎಂದು ಛೀಮಾರಿ ಹಾಕಿದೆ. ಇದಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ರಾಜ್ಯ ಹೈಕೋರ್ಟ್​ ನೋಟಿಸ್​ ನೀಡಿದೆ. ರಾಮನಗರ ಜಿಲ್ಲಾಡಳಿತ, ಬಿಬಿಎಂಪಿ ಹಾಗೂ ಕೆಪಿಸಿಸಿಗೂ ರಾಜ್ಯ ಹೈಕೋರ್ಟ್​ ನೋಟಿಸ್ ನೀಡಿದೆ.ಪಾದಯಾತ್ರೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ನಾಗೇಂದ್ರ […]

Advertisement

Wordpress Social Share Plugin powered by Ultimatelysocial