ಬಿಳಿ ಕೂದಲಿನ ಸಮಸ್ಯೆನಾ…? ಬೆಳಿಗ್ಗೆ ಬೆಲ್ಲದ ಜೊತೆ ಇದನ್ನು ಸೇವಿಸಿ

ಬಿಳಿ ಕೂದಲಿನ ಸಮಸ್ಯೆನಾ...? ಬೆಳಿಗ್ಗೆ ಬೆಲ್ಲದ ಜೊತೆ ಇದನ್ನು ಸೇವಿಸಿ

ಕೂದಲು ಬೆಳ್ಳಗಾಗುವ ಸಮಸ್ಯೆ ಇತ್ತೀಚೆಗೆ ಹಲವು ಜನರನ್ನು ಕಾಡುತ್ತಿದೆ. ವಯಸ್ಸಾದ ಮೇಲೆ ಕೂದಲು ಬೆಳ್ಳಗಾಗುವುದು ಸಹಜ. ಆದರೆ ಕೆಲವರು ಚಿಕ್ಕ ವಯಸ್ಸಿನಲ್ಲಿಯೇ ಈ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹಾಗಾಗಿ ನಿಮ್ಮ ಕೂದಲನ್ನು ಕಪ್ಪಾಗಿಸಲು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಲ್ಲದ ಜೊತೆ ಈ ಒಂದು ವಸ್ತುವನ್ನು ಸೇವಿಸಿ.

ನಿಮ್ಮ ಕೂದಲು ಕಪ್ಪಾಗಿ, ದಟ್ಟವಾಗಿರಲು ಪ್ರತಿದಿನ ಬೆಳಿಗ್ಗೆ ಬೆಲ್ಲ ಮತ್ತು ಮೆಂತ್ಯವನ್ನು ಸೇವಿಸಿ. ಇದು ಬಿಳಿಕೂದಲಿನ ಸಮಸ್ಯೆಗೆ ಉತ್ತಮ ಚಿಕಿತ್ಸೆಯಾಗಿದೆ. ಹಾಗೇ ಇದು ಕೂದಲುದುರುವ ಸಮಸ್ಯೆಯನ್ನು ನಿವಾರಿಸುತ್ತದೆ.

ಹಾಗೇ 2 ಚಮಚ ಮೆಂತ್ಯ ಬೀಜಗಳನ್ನು ನೀರಿನಲ್ಲಿ ಕುದಿಸಿ ನಂತರ ತಣ್ಣಗಾಗಿಸಿ, ಈ ನೀರಿನ್ನು ಕೂದಲಿಗೆ ಹಚ್ಚಿ 10 ನಿಮಿಷ ಬಿಟ್ಟು ಕೂದಲನ್ನು ತೊಳೆಯಿರಿ. ಇದರಿಂದ ಕೂದಲ ಬೆಳವಣಿಗೆ ಉತ್ತಮವಾಗಿರುತ್ತದೆ.

ಮೆಂತ್ಯ ಬೀಜಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನಸಿ . ಬೆಳಿಗ್ಗೆ ಅದನ್ನು ರುಬ್ಬಿ ಪೇಸ್ಟ್ ತಯಾರಿಸಿ ಕೂದಲಿಗೆ ಹಚ್ಚಿ. ಇದರಿಂದ ಕೂಡ ಕೂದಲು ಚೆನ್ನಾಗಿ ಬೆಳೆಯುತ್ತದೆ.

ಹಾಗೇ ಮೆಂತ್ಯ ಬೀಜಗಳನ್ನು ಪುಡಿ ಮಾಡಿ ತೆಂಗಿನೆಣ್ಣೆಯೊಂದಿಗೆ ಬೆರೆಸಿ ಕೂದಲಿನ ಮುಡಕ್ಕೆ ಹಚ್ಚಿ. ಇದರಿಂದ ತಲೆಹೊಟ್ಟಿನ ಸಮಸ್ಯೆ ದೂರವಾಗುತ್ತದೆ ಮತ್ತು ಕೂದಲುದುರುವುದು ನಿಂತು ಕೂದಲು ದಟ್ಟವಾಗಿ, ಉದ್ದವಾಗಿ ಬೆಳೆಯುತ್ತದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬಿ ಖಾತೆ ಆಸ್ತಿಗಳನ್ನು ಸಕ್ರಮಗೊಳಿಸೋದಾಗಿ ಸಿಎಂ ಬೊಮ್ಮಾಯಿ ಘೋಷಣೆ

Thu Dec 23 , 2021
ಬೆಳಗಾವಿ: ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಇರುವ ‘ಬಿ’ ಖಾತೆಗಳನ್ನು ಸಕ್ರಮಗೊಳಿಸುವ ಗುರಿ ಹೊಂದಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ವಿಧಾನಪರಿಷತ್‍ನಲ್ಲಿ ಸದಸ್ಯ ಎನ್.ರವಿಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದ ಸಿಎಂ ಬೊಮ್ಮಾಯಿ ಅವರು ಅಕ್ರಮ-ಸಕ್ರಮ ಯೋಜನೆಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‍ನಲ್ಲೊಂದು ದೂರು ದಾಖಲಾಗಿದೆ. ಈ ದೂರು ದಾಖಲಾಗಿದ್ದರಿಂದ ಅಕ್ರಮ-ಸಕ್ರಮ ಸಂಪೂರ್ಣ ಸ್ಥಗಿತವಾಗಿದೆ. ಅದನ್ನು ಇತ್ಯರ್ಥಗೊಳಿಸುವಲ್ಲಿ ರಾಜ್ಯ ಸರಕಾರ ತುಂಬಾ ಗಂಭೀರ ಪ್ರಯತ್ನ ನಡೆಸಿದೆ ಮತ್ತು ದೂರುದಾರರ ಬೇಡಿಕೆಗಳನ್ನು ಆಲಿಸಲಾಗುತ್ತಿದೆ ಎಂದು […]

Advertisement

Wordpress Social Share Plugin powered by Ultimatelysocial