ಚೆಕ್‌ಬೌನ್ಸ್ ಪ್ರಕರಣ: ಖ್ಯಾತ ನಟಿ ರಾಧಿಕಾ ದಂಪತಿಗೆ ಒಂದು ವರ್ಷ ಕಠಿಣ ಜೈಲು ಶಿಕ್ಷೆ

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳು ನಟರಾದ ರಾಧಿಕಾ ಶರತ್ ಕುಮಾರ್ ಹಾಗೂ ಅವರ ಪತಿ ಶರತ್‌ಕುಮಾರ್ ಅವರಿಗೆ ಇಲ್ಲಿಯ ವಿಶೇಷ ಕೋರ್ಟ್ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಇವರ ಜತೆ ಮಲಯಾಳದ ಚಿತ್ರನಿರ್ಮಾಪಕ ಲಿಸ್ಟನ್ ಸೈಫನ್ ಅವರಿಗೂ ಶಿಕ್ಷೆ ವಿಧಿಸಲಾಗಿದೆ. 2014ರಲ್ಲಿ ಇವರೆಲ್ಲರೂ ಸೇರಿ ಚಿತ್ರನಿರ್ಮಾಣಕ್ಕೆ ಸಂಬಂಧಿಸಿದಂತೆ ಹಣಕಾಸು ಕಂಪೆನಿಯೊಂದರಿಂದ ಎರಡು ಕೋಟಿ ರೂಪಾಯಿ ಸಾಲ ಪಡೆದುಕೊಂಡಿದ್ದರು. ಈ ಸಾಲದಲ್ಲಿ ಎರಡು ಚಲನಚಿತ್ರಗಳನ್ನು ನಿರ್ಮಿಸುವುದಾಗಿ ಹೇಳಿದ್ದರು.

ಸಹನಟನಾಗಿರುವ ಮ್ಯಾಜಿಕ್ ಪ್ರೇಮ್, ವಿಕ್ರಮ್ ಪ್ರಭು ಮತ್ತು ಕೀರ್ತಿ ಸುರೇಶ್ ಅವರೊಂದಿಗೆ 2014 ರಲ್ಲಿ ಚಿತ್ರ ಮಾಡಲು ಯೋಜಿಸಿದ್ದು ಅವರು ರೇಡಿಯನ್ಸ್‌ನಿಂದ 1.5 ಕೋಟಿ ರೂ ಹಣ ಪಡೆದುಕೊಂಡಿದ್ದರು, ಮಾರ್ಚ್ 2015 ರೊಳಗೆ ಹಣವನ್ನು ಹಿಂದಿರುಗಿಸುವುದಾಗಿ ಅವರು ಹೇಳಿದರು. ಆದರೆ ಹಣವನ್ನು ಹಿಂದಿರುಗಿಸಲಿಲ್ಲ. ಅವರು ಕೊಟ್ಟಿದ್ದ ಚೆಕ್ ಬೌನ್ಸ್ ಆಗಿತ್ತು.

ಈ ಹಿನ್ನೆಲೆಯಲ್ಲಿ ನಟ ದಂಪತಿ ಹಾಗೂ ನಿರ್ಮಾಪಕನ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಾಗಿತ್ತು. ಮದ್ರಾಸ್ ಹೈಕೋರ್ಟ್ ಇವರ ವಿರುದ್ಧ ಇದ್ದ ಕ್ರಿಮಿನಲ್ ಕೇಸ್ ಅನ್ನು ರದ್ದು ಮಾಡಿತ್ತು. ಆದರೆ ಈ ಪ್ರಕರಣದ ವಿಚಾರಣೆಯನ್ನು ನಡೆಸುವಂತೆ ವಿಶೇಷ ಕೋರ್ಟ್‌ಗೆ ಆದೇಶಿಸಿತ್ತು. ಇದೀಗ ವಿಚಾರಣೆ ಸಂಪೂರ್ಣಗೊಂಡಿದ್ದು, ಒಂದು ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ.

Please follow and like us:

Leave a Reply

Your email address will not be published. Required fields are marked *

Next Post

ಚಾಲಕ ಪ್ರತಾಪ್ ಕುಟುಂಬವರ್ಗಕ್ಕೆ ಸಾಂತ್ವನ 25000 ರೂ ಗಳ ಸಹಾಯಧನ...

Wed Apr 7 , 2021
ಇತ್ತೀಚೆಗೆ ಬೆಂಗಳೂರಿನ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ  ಆರ್ಥಿಕ ಸಂಕಷ್ಟಗಳಿಗೆ  ಗುರಿಯಾಗಿ  ತನ್ನ ಕಾರಿನ ಸಮೇತ  ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ನತದೃಷ್ಟ  ಚಾಲಕ  ಪ್ರತಾಪ್  ಮನೆ ಇರುವ  ರಾಮನಗರ ಜಿಲ್ಲೆಯ  ಚುಂಚೇನಹಳ್ಳಿಗೆ ಭೇಟಿ ನೀಡಿದ, ಆಮ್ ಆದ್ಮಿ ಪಕ್ಷದ ರಾಜ್ಯ ಸಂಚಾಲಕ ಪೃಥ್ವಿ ರೆಡ್ಡಿ, ರಾಜ್ಯ ಉಸ್ತುವಾರಿ ರೋಮಿ ಭಾಟಿ ,ರಾಮನಗರ ಜಿಲ್ಲಾ ಅಧ್ಯಕ್ಷ ನಂಜಪ್ಪ ಕಾಳೇಗೌಡ ಹಾಗೂ ಇನ್ನಿತರ ಪಕ್ಷದ ಕಾರ್ಯಕರ್ತರುಗಳು  ನೊಂದ ಕುಟುಂಬ ವರ್ಗಕ್ಕೆ  ಸಾಂತ್ವನವನ್ನು ಹೇಳಿದರು. […]

Advertisement

Wordpress Social Share Plugin powered by Ultimatelysocial