ಭಾನುವಾರ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ಪದಗ್ರಹಣ

 

ಬೆಂಗಳೂರು: ಭಾನುವಾರ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್. ತಿಪ್ಪೇಸ್ವಾಮಿ ಅವರು ತಿಳಿಸಿದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ.

ಕುಮಾರಸ್ವಾಮಿ ಅವರು ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.

ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಪ್ರಧಾನಿ, ಜೆಡಿಎಸ್‍ ವರಿಷ್ಠ ಹೆಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಪ್ಪೇಸ್ವಾಮಿ ಅವರು ಮಾಹಿತಿ ನೀಡಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಣ್ಣೀರು ಹಾಕಿದ "ಭಜರಂಗಿ:!

Sat Apr 16 , 2022
  ಹುಬ್ಬಳ್ಳಿ: ಇಂದು ನಾಡಿನೆಲ್ಲೆಡೆ ಹನುಮ ಜಯಂತಿ ಸಡಗರ ಕಳೆಗಟ್ಟಿದೆ. ಹನುಮ ನಾಮ ಜಪ ಮೊಳಗುತ್ತಿದೆ. ಈ ದಿವನೇ ಹುಬ್ಬಳ್ಳಿ ತಾಲೂಕಿನ ಬುಡರಸಿಂಗಿ ಗ್ರಾಮದಲ್ಲಿ ಅಚ್ಚರಿ ಘಟನೆಯೊಂದು ಸಂಭವಿಸಿದ್ದು, ಇದನ್ನು ನೋಡಲು ದೇಗುಲಕ್ಕೆ ಜನಸಾಗರವೇ ಬರುತ್ತಿದೆ. ಹನುಮ ವಿಗ್ರಹದ ಕಣ್ಣಿನಲ್ಲಿ ನೀರು ಬರುತ್ತಿದ್ದು, ಗ್ರಾಮಸ್ಥರು ಅಚ್ಚರಿಗೊಂಡಿದ್ದಾರೆ. ಬುಡರಸಿಂಗಿ ಗ್ರಾಮದ ಮಾರುತಿ ದೇವಸ್ಥಾನದಲ್ಲಿ ಹನುಮ ಜಯಂತಿ ಹಿನ್ನೆಲೆ ಹನುಮ ಮೂರ್ತಿಯನ್ನು ಸ್ವಚ್ಛಗೊಳಿಸಿ ಪೂಜೆ ಮಾಡಲು ಮುಂದಾದಾಗ ಹನುಂತನ ಕಣ್ಣಿನಲ್ಲಿ ಹನಿ ಹನಿ […]

Related posts

Advertisement

Wordpress Social Share Plugin powered by Ultimatelysocial