‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರಕ್ಕೆ ತೆರಿಗೆ ವಿನಾಯಿತಿ: ಸಿಎಂ ಯೋಗಿ ಆದಿತ್ಯನಾಥ್

 

ಉತ್ತರ ಪ್ರದೇಶದಲ್ಲಿ ಅಕ್ಷಯ್ ಕುಮಾರ್ ಅಭಿನಯದ ‘ಸಾಮ್ರಾಟ್ ಪೃಥ್ವಿರಾಜ್’ ಚಿತ್ರಕ್ಕೆ ತೆರಿಗೆ ಮುಕ್ತಗೊಳಿಸಲಾಗಿದೆ. ಐತಿಹಾಸಿಕ ಆಧಾರಿತ ಚಿತ್ರವನ್ನು ತನ್ನ ಸಂಪುಟ ಸಹೋದ್ಯೋಗಿಗಳೊಂದಿಗೆ ಇಂದು ವೀಕ್ಷಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಈ ಚಿತ್ರಕ್ಕೆ ರಾಜ್ಯದಲ್ಲಿ ತೆರಿಗೆ ಮುಕ್ತಗೊಳಿಸುವುದಾಗಿ ಘೋಷಿಸಿದರು.

ಲಖನೌದ ಲೋಕಭವನದಲ್ಲಿ ಸಾಮ್ರಾಟ್ ಪೃಥ್ವಿರಾಜ್ ಸಿನಿಮಾದ ವಿಶೇಷ ಪ್ರದರ್ಶವನ್ನು ಏರ್ಪಡಿಸಲಾಗಿತ್ತು. ಬಾಲಿವುಡ್ ಸ್ಟಾರ್ ಅಕ್ಷಯ್ ಕುಮಾರ್, ಮಾನುಸಿ ಚಿಲ್ಲರ್ ಮತ್ತು ನಿರ್ದೇಶಕ ಚಂದ್ರ ಪ್ರಕಾಶ್ ದ್ವಿವೇದಿ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಸಿಎಂ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶದಲ್ಲಿ ಸಾಮ್ರಾಟ್ ಪೃಥ್ವಿರಾಜ್ ಸಿನಿಮಾಕ್ಕೆ ತೆರಿಗೆ ವಿನಾಯಿತಿ ನೀಡುವ ಘೋಷಣೆ ಪ್ರಕಟಿಸಿದರು. ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ಸಾರಿಗೆ ಸಚಿವ ದಯಾಶಂಕರ್ ಸಿಂಗ್ ಮತ್ತಿತರರು ಸಿನಿಮಾ ವೀಕ್ಷಿಸಿದರು.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://plಇay.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ನಾನಾ ನೀನಾ ಎನ್ನುತ್ತಲೇ ನಿರ್ಮಾಪಕರಿಗೇ ನಾಮ ಹಾಕಿದ ನಟ ಉಪೇಂದ್ರ

Fri Jun 3 , 2022
  ನಟ ಉಪೇಂದ್ರ ಮತ್ತೆ ನಿರ್ದೇಶಕನ ಟೋಪಿ ಧರಿಸಿದ್ದಾರೆ. ಹಲವು ವರ್ಷಗಳಿಂದ ನಿರ್ದೇಶನದಿಂದ ದೂರ ಉಳಿದಿದ್ದ ನಟ ಉಪೇಂದ್ರ ಈಗ ಮತ್ತೆ ನಿರ್ದೇಶಕನಾಗಿ ಸದ್ದು ಮಾಡಲು ಸಜ್ಜಾಗಿದ್ದಾರೆ. ಉಪ್ಪಿ ಏನೇ ಮಾಡಿದರು ಅದು ಡಿಫ್ರೆಂಟ್. ಅವರ ಹೊಸ ಸಿನಿಮಾದ ಟೈಟಲ್ ರಿಲೀಸ್ ಆದಾಗಿನಿಂದಲೂ ಎಲ್ಲರನ್ನು ಹತ್ತಾರು ಪ್ರಶ್ನೆಗಳು ಹುಟ್ಟಿಕೊಂಡಿವೆ. ಈ ಚಿತ್ರದ ಬಗ್ಗೆ ನಟ ಉಪೇಂದ್ರ ಆಗಲಿ, ಸಿನಿಮಾ ತಂಡ ಆಗಲಿ ಹೆಚ್ಚಿನದ್ದೇನನ್ನೂ ಹೇಳಿರಲಿಲ್ಲ. ಆದರೆ ಸಿನಿಮಾದ ಪೋಸ್ಟರ್ ಮೂಲಕ […]

Advertisement

Wordpress Social Share Plugin powered by Ultimatelysocial