ಹಳೆಯ ಕಾರನ್ನು ಸ್ಕ್ರ್ಯಾಪ್ ಮಾಡುವ ಯೋಜನೆ ಇದೆಯೇ?

ಕೇಂದ್ರ ಸರ್ಕಾರವು ತನ್ನ ಮಹತ್ವಾಕಾಂಕ್ಷಿ ವೆಹಿಕಲ್ ಸ್ಕ್ರ್ಯಾಪೇಜ್ ನೀತಿಯನ್ನು ಹಂತ-ಹಂತವಾಗಿ ಜಾರಿಗೆ ತರುತ್ತಿದ್ದು, ಸ್ವಯಂಪ್ರೇರಿತ ವೆಹಿಕಲ್ ಸ್ಕ್ರ್ಯಾಪೇಜ್ ನೀತಿಯಡಿಯಲ್ಲಿ ವಾಹನ ಮಾಲೀಕರು ತಮ್ಮ ಹಳೆಯ ವಾಹನಗಳನ್ನು ಗುಜುರಿಗೆ ಹಾಕುವ ಮೂಲಕ ಹೊಸ ವಾಹನ ಖರೀದಿಗೆ ಹಲವು ವಿನಾಯ್ತಿಗಳನ್ನು ಪಡೆದುಕೊಳ್ಳುವ ಅವಕಾಶ ನೀಡಲಾಗಿದೆ.ಹೊಸ ವೆಹಿಕಲ್ ಸ್ಕ್ರ್ಯಾಪೇಜ್ ನೀತಿಯ ಪ್ರಕಾರ ಪ್ರತಿಯೊಂದು ಖಾಸಗಿ ಮತ್ತು ವಾಣಿಜ್ಯ ವಾಹನಗಳು ನಿಗದಿತ ನೊಂದಣಿ ಅವಧಿ ನಂತರ ಫಿಟ್ನೆಸ್ ಪರೀಕ್ಷೆಗೆ ಒಳಗಾಗುತ್ತವೆ. ಅದರಲ್ಲೂ ವಾಹನ ದಟ್ಟಣೆಯಿಂದ ಹೆಚ್ಚಿರುವ ವಾಯು ಮಾಲಿನ್ಯದ ದುಷ್ಪರಿಣಾಮಗಳ ಎದುರಿಸುತ್ತಿರುವ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 15 ವರ್ಷ ಹಳೆಯ ಪೆಟ್ರೋಲ್ ಮತ್ತು 10 ವರ್ಷ ಹಳೆಯ ಡೀಸೆಲ್ ವಾಹನಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.ಹಳೆಯ ವಾಹನಗಳು ಹೆಚ್ಚು ಮಾಲಿನ್ಯ ಹೊರಸೂಸುತ್ತಿದ್ದರೆ ಕೂಡಲೇ ಸ್ಕ್ರ್ಯಾಪ್ ಮಾಡಬೇಕು ಎಂದು ದೆಹಲಿ ಸರ್ಕಾರ ನಿರ್ದೇಶನ ನೀಡಿದ್ದು, ಹೊಸ ವೆಹಿಕಲ್ ಸ್ಕ್ರ್ಯಾಪೇಜ್ ನೀತಿಯಡಿಯಲ್ಲಿ ದೇಶದ ವಿವಿಧ ರಾಜ್ಯ ಸರ್ಕಾರಗಳು ಇದೇ ರೀತಿಯ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿವೆ.ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡುವುದನ್ನು ಪ್ರೋತ್ಸಾಹಿಸಲು ಕೇಂದ್ರ ಮತ್ತು ವಿವಿಧ ರಾಜ್ಯ ಸರ್ಕಾರಗಳು ವಿಶೇಷ ಕೊಡುಗೆಗಳನ್ನು ಘೋಷಿಸುತ್ತಿದ್ದು, ಹೊಸ ವೆಹಿಕಲ್ ಸ್ಕ್ರ್ಯಾಪೇಜ್ ನೀತಿಯನ್ನು ಇತರೆ ರಾಜ್ಯಗಳಿಂತಲೂ ದೆಹಲಿಯಲ್ಲಿ ಹೊಸ ನಿಯಮವನ್ನು ತ್ವರಿತವಾಗಿ ಜಾರಿಗೆ ತರಲಾಗುತ್ತಿದೆ.ದೆಹಲಿ ಸಾರಿಗೆ ಇಲಾಖೆಯು ನೋಂದಾಯಿತ ವಾಹನ ಸ್ಕ್ರ್ಯಾಪಿಂಗ್ ಫೆಸಿಲಿಟಿ (RVSF) ನಲ್ಲಿಯೇ ಹಳೆಯ ವಾಹನಗಳನ್ನು ಸ್ಕ್ರ್ಯಾಪ್ ಮಾಡುವಂತೆ ವಾಹನ ಮಾಲೀಕರಿಗೆ ಮನವಿ ಮಾಡಿದ್ದು, ನಿಯಮ ಉಲ್ಲಂಘನೆ ಮಾಡುವ ವಾಹನಗಳನ್ನು ಜೀವನಪರ್ಯಂತ ಮುಟ್ಟುಗೋಲು ಹಾಕಿಕೊಳ್ಳುವ ಸುಪ್ರೀಂ ಕೋರ್ಟ್‌ನ ಆದೇಶವನ್ನು ಉಲ್ಲೇಖಿಸಲಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

BOLLYWOOD:ಗೋವಾದಲ್ಲಿ ವಿಹಾರವನ್ನು ಆನಂದಿಸಿದ ,ಹೃತಿಕ್ ರೋಷನ್ ಮತ್ತು ಸಬಾ ಆಜಾದ್ ;

Mon Jan 31 , 2022
ಹೃತಿಕ್ ರೋಷನ್ ಕೆಲವು ದಿನಗಳ ಹಿಂದೆ ನಿಗೂಢ ಹುಡುಗಿಯೊಂದಿಗೆ ಕಾಣಿಸಿಕೊಂಡರು ಮತ್ತು ವರದಿಗಳು ಆಕೆ ನಟಿ – ಗಾಯಕ ಸಬಾ ಆಜಾದ್ ಎಂದು ಹೇಳಿಕೊಂಡಿವೆ. ಈಗ, ಮಿಡ್-ಡೇನಲ್ಲಿನ ಇತ್ತೀಚಿನ ವರದಿಯ ಪ್ರಕಾರ, ಹೃತಿಕ್ ತಿಂಗಳುಗಳ ಕಾಲ ಸಂಬಂಧವನ್ನು ವಾರ್ಪ್ಸ್ ಅಡಿಯಲ್ಲಿ ಇಟ್ಟುಕೊಂಡಿದ್ದಾರೆ ಎಂದು ವರದಿಯಾಗಿದೆ. ವಾಸ್ತವವಾಗಿ, ನಟ ಸಬಾ ಅವರೊಂದಿಗೆ ಡೇಟಿಂಗ್ ಮಾಡುವ ಬಗ್ಗೆ ಈಗಾಗಲೇ ತಿಳಿದಿದ್ದವರು, ಸಾರ್ವಜನಿಕವಾಗಿ ಕೈ ಹಿಡಿಯುವ ನಟನ ನಡೆಯಿಂದ ಸಾಕಷ್ಟು ಆಶ್ಚರ್ಯಚಕಿತರಾದರು ಎಂದು ವರದಿಯಾಗಿದೆ. […]

Advertisement

Wordpress Social Share Plugin powered by Ultimatelysocial