ವಂಚನೆ ಪ್ರಕರಣ:

ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ಒಂದು ದಿನದ ನಂತರ, ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಮಂಗಳವಾರ ಬೆಳಿಗ್ಗೆ ಜೈಲಿನಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ. ಮುಂಬೈ: ಭ್ರಷ್ಟಾಚಾರ ಮತ್ತು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಮಧ್ಯಂತರ ಜಾಮೀನು ಮಂಜೂರು ಮಾಡಿದ ಒಂದು ದಿನದ ನಂತರ, ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚಾರ್ ಮಂಗಳವಾರ ಬೆಳಿಗ್ಗೆ ಜೈಲಿನಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿದುಬಂದಿದೆ.
ಈ ಕುರಿತು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಚಂದಾ ಕೊಚ್ಚರ್ ಮುಂಬೈನ ಬೈಕುಲ್ಲಾ ಮಹಿಳಾ ಜೈಲಿನಿಂದ ಬಿಡುಗಡೆಗೊಂಡಿದ್ದರೆ, ಅವರ ಪತಿ ದೀಪಕ್ ಕೊಚ್ಚರ್ ಅವರು ಆರ್ಥರ್ ರೋಡ್ನಲ್ಲಿರುವ ಜೈಲಿನಿಂದ ಬಿಡುಗಡೆಗೊಂಡಿದ್ದಾರೆಂದು ತಿಳಿಸಿದ್ದಾರೆ. ವಿಡಿಯೋಕಾನ್-ಐಸಿಐಸಿಐ ಬ್ಯಾಂಕ್ ಸಾಲ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಡಿಸೆಂಬರ್ 23, 2022 ರಂದು ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರನ್ನು ಬಂಧನಕ್ಕೊಳಪಡಿಸಿತ್ತು ತಮ್ಮ ಬಂಧನವನ್ನು ಪ್ರಶ್ನಿಸಿ ದಂಪತಿಗಳು ಬಾಂಬೆ ಹೈಕೋರ್ಟ್ನಲ್ಲಿ ಮೆಟ್ಟಿಲೇರಿದ್ದರು. ಈ ಸಂಬಂಧ ನಿನ್ನೆ ವಿಚಾರಣೆ ನಡೆಸಿದ್ದ ನ್ಯಾಯಾಲಯವು, ಐಸಿಐಸಿಐ ಬ್ಯಾಂಕ್ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನ ಕಾನೂನಿನ ಪ್ರಕಾರವಾಗಿಲ್ಲ.
ಅಪರಾಧ ಪ್ರಕ್ರಿಯಾ ಸಂಹಿತೆಯ (ಸಿಆರ್ಪಿಸಿ) ಸೆಕ್ಷನ್ 41ಎ ಅನ್ನು ಉಲ್ಲಂಘಿಸಲಾಗಿದೆ. ಸಂಬಂಧ ಪಟ್ಟ ವ್ಯಕ್ತಿಗೆ ಮೊದಲು ನೋಟಿಸ್ ನೀಡಿ ವಿಚಾರಣೆಗೆ ಹಾಜರಾಗಲು ಹೇಳಬೇಕು ಎಂದು ಹೇಳಿತ್ತು. ಅಲ್ಲದೆ, ಇಬ್ಬರನ್ನು ಬಿಡುಗಡೆ ಮಾಡುವಂತೆಯೂ ಆದೇಶಿಸಿತ್ತು. ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರ ತಡೆ ಕಾಯ್ದೆಗೆ ಸಂಬಂಧಿಸಿದ ಐಪಿಸಿ ಸೆಕ್ಷನ್ಗಳ ಅಡಿಯಲ್ಲಿ ದಾಖಲಾಗಿರುವ ಎಫ್ಐಆರ್ನಲ್ಲಿ ಚಂದಾ ಕೊಚ್ಚರ್, ಅವರ ಪತಿ ದೀಪಕ್ ಕೊಚ್ಚರ್ ಮತ್ತು ವಿಡಿಯೊಕಾನ್ ಗ್ರೂಪ್ನ ವೇಣುಗೋಪಾಲ್ ಧೂತ್, ನ್ಯೂಪವರ್ ರಿನ್ಯೂವಬಲ್ಸ್, ಸುಪ್ರೀಂ ಎನರ್ಜಿ, ವಿಡಿಯೋಕಾನ್ ಇಂಟರ್ನ್ಯಾಶನಲ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ವಿಡಿಯೋಕಾನ್ ಇಂಡಸ್ಟ್ರೀಸ್ ಲಿಮಿಟೆಡ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿತ್ತು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ರೋಹಿತ್ ನಿರ್ಧಾರಕ್ಕೆ ವೆಂಕಟೇಶ್ ಪ್ರಸಾದ್ ಕಿಡಿ

Tue Jan 10 , 2023
ಭಾರತ ಹಾಗೂ ಶ್ರೀಲಂಕಾ ತಂಡಗಳ ನಡುವಿನ ಏಕದಿನ ಸರಣಿ ಮಂಗಳವಾರದಿಂದ ಆರಂಭವಾಗಲಿದ್ದು ಎರಡು ತಂಡಗಳು ಕೂಡ ಈ ಪಂದ್ಯಕ್ಕೆ ಸಜ್ಜಾಗಿದೆ. ಮೊದಲ ಏಕದಿನ ಪಂದ್ಯ ಗುವಾಹಟಿಯಲ್ಲಿ ನಡೆಯಲಿದ್ದು ಅಹರ್ನಿಶಿಯಾಗಿ(Day-night) ನಡೆಯಲಿದೆ. ಈ ಪಂದ್ಯಕ್ಕೂ ಮುನ್ನಾ ದಿನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮಾಧ್ಯಮಗಳ ಜೊತೆಗೆ ಮಾತನಾಡುತ್ತಾ ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ.ಈ ಸಂದರ್ಭದಲ್ಲಿ ರೋಹಿತ್ ಶರ್ಮಾ ಮೊದಲ ಏಕದಿನ ಪಂದ್ಯದಲ್ಲಿ ಆರಂಭಿಕರಾಗಿ ತಮ್ಮ ಜೊತೆಗೆ ಶುಬ್ಮನ್ ಗಿಲ್ ಕಣಕ್ಕಿಳಿಯಲಿದ್ದಾರೆ ಎಂದಿದ್ದಾರೆ.ಟೀಮ್ […]

Advertisement

Wordpress Social Share Plugin powered by Ultimatelysocial